Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ತುಮಕೂರು
  4. 159 ಮಂದಿ ಲೋಕಸಭಾ ಸದಸ್ಯರ ವಿರುದ್ಧ...

159 ಮಂದಿ ಲೋಕಸಭಾ ಸದಸ್ಯರ ವಿರುದ್ಧ ಅತ್ಯಾಚಾರ, ಕೊಲೆಯಂತಹ ಆರೋಪಗಳಿವೆ : ದಿನೇಶ್ ಅಮೀನ್ ಮಟ್ಟು

ವಾರ್ತಾಭಾರತಿವಾರ್ತಾಭಾರತಿ24 Dec 2024 5:31 PM IST
share
159 ಮಂದಿ ಲೋಕಸಭಾ ಸದಸ್ಯರ ವಿರುದ್ಧ ಅತ್ಯಾಚಾರ, ಕೊಲೆಯಂತಹ ಆರೋಪಗಳಿವೆ : ದಿನೇಶ್ ಅಮೀನ್ ಮಟ್ಟು

ತುಮಕೂರು : "ಇವತ್ತಿನ ರಾಜಕೀಯ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಭ್ರಷ್ಟವನ್ನಾಗಿಸಿದೆ. 2024ರ ಸಮೀಕ್ಷೆಯ ಪ್ರಕಾರ 543 ಸಂಸದರಲ್ಲಿ 251 ಮಂದಿಯ ವಿರುದ್ಧ ವಿವಿಧ ಕ್ರಿಮಿನಲ್ ಮೊಕದ್ದಮೆಗಳಿವೆ. ಇವರಲ್ಲಿ 159 ಮಂದಿಯ ವಿರುದ್ಧ ಅತ್ಯಾಚಾರ, ಅಸಭ್ಯ ವರ್ತನೆ, ಕಳ್ಳತನ, ಕೊಲೆ, ಅಪಹರಣದಂತಹ ಆರೋಪಗಳಿವೆ. 2014ರಿಂದ ಇಲ್ಲಿಯವರೆಗೂ ಸಂಸದರ ಮೇಲಿರುವ ಅಪರಾಧಗಳ ತೀವ್ರತೆ ಹೆಚ್ಚಾಗುತ್ತಲೇ ಇದೆ. ಮುಂದೊಂದು ದಿನ 543 ಕ್ರಿಮಿನಲ್ ಆರೋಪಗಳಿರುವ ಸಂಸದರನ್ನು ಆಯ್ಕೆ ಮಾಡಿ ಕಳುಹಿಸುವ ಪರಿಸ್ಥಿತಿ ಉಂಟಾಗಲಿದೆ" ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಕಳವಳ ವ್ಯಕ್ತಪಡಿಸಿದರು.

ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಕರ್ನಾಟಕ ರಾಜ್ಯ ರಾಜ್ಯಶಾಸ್ತ್ರ ಶಿಕ್ಷಕರ ಸಂಘ, ತುಮಕೂರು ವಿವಿ ರಾಜ್ಯಶಾಸ್ತ್ರ ಶಿಕ್ಷಕರ ಅಕಾಡೆಮಿ, ಸ್ನಾತಕೋತ್ತರ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಹಾಗೂ ಸ್ನಾತಕೋತ್ತರ ಸಾರ್ವಜನಿಕ ಆಡಳಿತ ಅಧ್ಯಯನ ಮತ್ತು ಸಂಶೋಧನ ವಿಭಾಗದ ಸಹಯೋಗದಲ್ಲಿ ನಡೆದ ಎರಡು ದಿನಗಳ 20ನೆಯ ಕರ್ನಾಟಕ ರಾಜ್ಯ ರಾಜ್ಯಶಾಸ್ತ್ರ ಶಿಕ್ಷಕರ ಸಮ್ಮೇಳನದ ಎರಡನೆಯ ದಿನ ‘ವರ್ತಮಾನದ ರಾಜಕೀಯವು ಪ್ರಜಾಪ್ರಭುತ್ವಕ್ಕೆ ಅನುಕೂಲಕರವೇ?’ ವಿಷಯದ ಕುರಿತು ವಿಶೇಷ ಗೋಷ್ಠಿಯಲ್ಲಿ ಅವರು ಮಾತನಾಡಿದರು.

ʼಆರ್ಥಿಕ ಅಸಮಾನತೆಯಲ್ಲಿ ಪ್ರಜಾಪ್ರಭುತ್ವದ ನ್ಯೂನತೆಗಳನ್ನು ಸರಿಪಡಿಸಲು ಸಾಧ್ಯವಿಲ್ಲ. ಸಮೀಕ್ಷೆಯ ಪ್ರಕಾರ ಕ್ರಿಮಿನಲ್ ಆರೋಪಗಳಿರುವವರೇ ಚುನಾವಣೆಗಳಲ್ಲಿ ಸ್ಪರ್ಧಿಸಿ ಗೆಲ್ಲುತ್ತಿದ್ದಾರೆ. ಪ್ರಸ್ತುತ ಇರುವ ಸಂಸದರಲ್ಲಿ 227 ಮಂದಿಯ ಘೋಷಿತ ಆದಾಯ ವರ್ಷಕ್ಕೆ 50 ಕೋಟಿ. ಪ್ರಜಾಪ್ರಭುತ್ವಕ್ಕೆ ದೊಡ್ಡ ಹೊಡೆತವೆಂದರೆ ಕೆಲ ನ್ಯಾಯಮೂರ್ತಿಗಳೂ ಭ್ರಷ್ಟರಾಗಿರುವುದು. ವ್ಯವಸ್ಥೆಯನ್ನು ಕಿತ್ತುತಿನ್ನುವ ಹುಳುಗಳಿರುವಾಗ ನ್ಯಾಯಕ್ಕಾಗಿ, ಅಭಿವೃದ್ಧಿಗಾಗಿ ಜನಸಾಮಾನ್ಯರು ಯಾರ ಬಳಿ ಹೋಗಬೇಕು ಎನ್ನುವುದೇ ಪ್ರಶ್ನಾರ್ಥಕʼ ಎಂದು ಹೇಳಿದರು.

ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಮಾತನಾಡಿ, ʼಪ್ರಜೆಗಳು ಸೇವಾ ಮನೋಭಾವದ ರಾಜಕಾರಣಿಗಳನ್ನು ಬಯಸುತ್ತಿಲ್ಲ. ದೀರ್ಘಾವಧಿಯ ಲಾಭವನ್ನು ಮರೆತು ಚುನಾವಣೆಯ ಸಮಯದಲ್ಲಾಗುವ ಅಲ್ಪಾವಧಿಯ ಲಾಭಕ್ಕಾಗಿ ಮತಗಳನ್ನು ಮಾರಿಕೊಳ್ಳುತ್ತಿದ್ದಾರೆʼ ಎಂದು ಕಳವಳ ವ್ಯಕ್ತಪಡಿಸಿದರು.

ಮೈಸೂರು ವಿವಿಯ ರಾಜ್ಯಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ.ಮುಜಾಫರ್ ಅಸಾದಿ ಮಾತನಾಡಿ, ʼಜಾತಿಗಳನ್ನು, ಸಮುದಾಯಗಳನ್ನು ಗುರುತಿಸಿ, ಒಳಗೊಳ್ಳಿಸಿಕೊಳ್ಳುವಿಕೆಯ ಪ್ರಕ್ರಿಯೆ ನಡೆದಾಗ ಮಾತ್ರ ಪ್ರಜಾಪ್ರಭುತ್ವದ ಆಶಯ ಪೂರ್ಣವಾಗಲಿದೆ. ಭೂ ಸುಧಾರಣೆ, ಜಾತಿ, ಅಸ್ಮಿತೆ, ಒಳಗೊಳ್ಳುವಿಕೆ, ಮೀಸಲಾತಿ-ಇವೆಲ್ಲವೂ ಅಪೂರ್ಣವಾಗಿ ಉಳಿದಿವೆ. ಸಮಾನತೆಯಿಂದ ಮಾತ್ರ ಪ್ರಜಾಪ್ರಭುತ್ವ ಉಸಿರಾಡಬಹುದುʼ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X