Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ತುಮಕೂರು
  4. ಗ್ರೇಟರ್ ತುಮಕೂರು ಘೋಷಣೆಗಾಗಿ ಸರಕಾರಕ್ಕೆ...

ಗ್ರೇಟರ್ ತುಮಕೂರು ಘೋಷಣೆಗಾಗಿ ಸರಕಾರಕ್ಕೆ ಪ್ರಸ್ತಾವನೆ : ಜಿ.ಪರಮೇಶ್ವರ್‌

ವಾರ್ತಾಭಾರತಿವಾರ್ತಾಭಾರತಿ14 Dec 2025 6:54 PM IST
share
ಗ್ರೇಟರ್ ತುಮಕೂರು ಘೋಷಣೆಗಾಗಿ ಸರಕಾರಕ್ಕೆ ಪ್ರಸ್ತಾವನೆ : ಜಿ.ಪರಮೇಶ್ವರ್‌

ತುಮಕೂರು : ಗ್ರೇಟರ್ ತುಮಕೂರು ಘೋಷಣೆಗಾಗಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಕುರಿತು ಸರಕಾರ ಚಿಂತನೆ ನಡೆಸುತ್ತಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

ನಗರದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ನಗರಾಭಿವೃದ್ಧಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಹಯೋಗದಲ್ಲಿ ಇ-ಖಾತಾ(ನಮೂನೆ 2) ವಿತರಣಾ ಕಾರ್ಯಕ್ರಮ ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ಅನುದಾನದಲ್ಲಿ ಕೈಗೊಂಡಿರುವ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಹಕ್ಕು ಪತ್ರ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು, ಗ್ರೇಟರ್ ತುಮಕೂರು ಘೋಷಣೆಯಿಂದ ನಗರಕ್ಕೆ ಹೆಚ್ಚಿನ ಅನುದಾನ ಲಭ್ಯವಾಗುತ್ತದೆ. ರಸ್ತೆ, ಕುಡಿಯುವ ನೀರು, ಒಳಚರಂಡಿ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿ ಸುಧಾರಣೆಗೊಳ್ಳುತ್ತದೆ. ಕೈಗಾರಿಕೆ, ಉದ್ಯೋಗಾವಕಾಶಗಳು ಹೆಚ್ಚಾಗುತ್ತವೆ. ಯೋಜಿತ ನಗರ ಅಭಿವೃದ್ಧಿ ಹೊಂದಿ ಜನರ ಜೀವನಮಟ್ಟ ಉತ್ತಮಗೊಳಿಸುವ ಉದ್ದೇಶದಿಂದ ಈ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ತುಮಕೂರು, ಮೈಸೂರು, ಹುಬ್ಬಳ್ಳಿ–ಧಾರವಾಡ ಜಿಲ್ಲೆಗಳು ಬಹಳ ವೇಗವಾಗಿ ಅಭಿವೃದ್ಧಿಯತ್ತ ಸಾಗುತ್ತಿವೆ. ಮಕ್ಕಳಿಗೆ ಉತ್ತಮ ಶಿಕ್ಷಣ ಹಾಗೂ ಭವಿಷ್ಯ ನಿರ್ಮಾಣದ ಉದ್ದೇಶದಿಂದ ಗ್ರಾಮೀಣ ಪ್ರದೇಶಗಳಿಂದ ಜನರು ಪಟ್ಟಣಗಳಿಗೆ ವಲಸೆ ಬರುತ್ತಿದ್ದಾರೆ. ಗ್ರಾಮಗಳಲ್ಲಿ ಜೀವನ ಸಾಗಿಸಲು ಎದುರಾಗುವ ಸಮಸ್ಯೆಗಳ ಕಾರಣದಿಂದ ನಗರಗಳತ್ತ ಮುಖ ಮಾಡುತ್ತಿದ್ದಾರೆ. ಆದರೆ ನಗರಗಳಲ್ಲಿ ಬದುಕು ಸಹ ಸುಲಭವಲ್ಲ. ಕೆಲ ವಾರ್ಡ್‍ಗಳಲ್ಲಿ ಅನೇಕ ಕುಟುಂಬಗಳಿಗೆ ಮೂಲಭೂತ ಸೌಕರ್ಯಗಳಿಲ್ಲದೆ ಕಷ್ಟಕರ ಜೀವನ ನಡೆಸುತ್ತಿದ್ದಾರೆ. ಕರ್ನಾಟಕದಲ್ಲಿ ಶೇ.40ರಷ್ಟು ಜನರು ಪಟ್ಟಣಗಳಲ್ಲಿ ಜೀವನ ಸಾಗಿಸುತ್ತಿದ್ದಾರೆ. ಗ್ರಾಮೀಣ ಭಾಗದಿಂದ ವಲಸೆ ಬಂದು ಜೀವನ ಸಾಗಿಸುವವರಿಗೆ ಸರಕಾರದಿಂದ ವಸತಿ ಸೌಲಭ್ಯ, ಸ್ಮಶಾನ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಸಾಮಾನ್ಯ ಜನರ ಜೀವನಮಟ್ಟ ಸುಧಾರಿಸಲು ರಾಜ್ಯ ಸರಕಾರ ಬದ್ಧವಾಗಿದೆ. ಕೈಗಾರಿಕೆ ಹಾಗೂ ಕೃಷಿ ಅಭಿವೃದ್ಧಿಯಾದಾಗ ಜನಸಾಮಾನ್ಯರ ಜೀವನ ಮಟ್ಟ ಬದಲಾಗುತ್ತದೆ ಎಂದು ಹೇಳಿದರು.

ನಗರದಲ್ಲಿ 5 ಕೋಟಿ ರೂ. ವೆಚ್ಚದಲ್ಲಿ 18 ಪಾರ್ಕ್‍ಗಳನ್ನು ನವೀಕರಿಸಲಾಗುತ್ತಿದೆ. ಪೌರಕಾರ್ಮಿಕರ ಬದುಕು ಸುಧಾರಣೆಗೆ ಅವರಿಗೆ ಖಾಯಂ ಉದ್ಯೋಗ ಹಾಗೂ ವಸತಿ ಸೌಲಭ್ಯ ಒದಗಿಸುವ ನಿರ್ಧಾರ ಕೈಗೊಳ್ಳಲಾಗಿದೆ. ದಿಬ್ಬೂರು ವ್ಯಾಪ್ತಿಯಲ್ಲಿ 64 ಕೊಠಡಿಗಳ ಅಪಾರ್ಟ್‍ಮೆಂಟ್ ನಿರ್ಮಿಸಿ ಕೊಡುವ ಕಾರ್ಯಕ್ಕೆ ಶಂಕುಸ್ಥಾಪನೆ ನೇರವೇರಿಸಲಾಗಿದೆ . ತುಮಕೂರು ಅಭಿವೃದ್ಧಿ ಯಾದರೆ ನಾಗರಿಕರ ಸಮಗ್ರ ಅಭಿವೃದ್ಧಿ ಸಾಧ್ಯವೆಂಬ ದೃಷ್ಟಿಯಿಂದ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ ಜಿಲ್ಲೆಗೆ 120 ಕೋಟಿ ರೂ. ಅನುದಾನವನ್ನು ಸರ್ಕಾರ ಮಂಜೂರು ಮಾಡಿದೆ ಎಂದು ಹೇಳಿದರು.

ನಗರ ಶಾಸಕ ಜಿ.ಬಿ.ಜ್ಯೋತಿ ಗಣೇಶ್, ಮಹಾನಗರ ಪಾಲಿಕೆ ಆಯುಕ್ತ ಯೋಗಾನಂದ ಮಾತನಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ, ಬಿ.ಎಂ.ಟಿ.ಸಿ ಉಪಾಧ್ಯಕ್ಷ ನಿಕೇತ್‍ಮೌರ್ಯ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X