Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ತುಮಕೂರು
  4. ಸಚಿವ ಸ್ಥಾನ ಹೋಗಲು ಹಲವು ಕಾರಣಗಳಿವೆ,...

ಸಚಿವ ಸ್ಥಾನ ಹೋಗಲು ಹಲವು ಕಾರಣಗಳಿವೆ, ಸಮಯ ಬಂದಾಗ ಹೇಳುವೆ : ಕೆ.ಎನ್.ರಾಜಣ್ಣ

ವಾರ್ತಾಭಾರತಿವಾರ್ತಾಭಾರತಿ15 Aug 2025 8:53 PM IST
share
ಸಚಿವ ಸ್ಥಾನ ಹೋಗಲು ಹಲವು ಕಾರಣಗಳಿವೆ, ಸಮಯ ಬಂದಾಗ ಹೇಳುವೆ : ಕೆ.ಎನ್.ರಾಜಣ್ಣ
"ವಜಾ ವಿಷಯದಲ್ಲಿ ಸಿದ್ದರಾಮಯ್ಯ ಅವರ ಬಗ್ಗೆ ಆಕ್ಷೇಪ ಎತ್ತುವುದು ಸರಿಯಲ್ಲ"

ತುಮಕೂರು. ಆ.15 : ಸಮಯ ಬಂದಾಗ ಸಚಿವ ಸ್ಥಾನವನ್ನು ತೆಗೆದುಕೊಳ್ಳುತ್ತೇನೆ. ಆದರೆ ಈಗ ನಾನು ಯಾವುದೇ ಪ್ರಶ್ನೆಗಳಿಗೆ ಉತ್ತರ ನೀಡುವುದಿಲ್ಲ ಎಂದು ಮಾಜಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.

ತುಮಕೂರು ಜಿಲ್ಲೆಯ ಮಧುಗಿರಿ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಧಿಕಾರ ಎಂದಿಗೂ ಶಾಶ್ವತವಲ್ಲ. ನಾನು ಅಧಿಕಾರಕ್ಕಾಗಿ ಎಂದು ಅಂಟಿಕೊಂಡು ಕೂತಿಲ್ಲ ಎಂದು ಹೇಳಿದರು.

ಸಚಿವ ಸ್ಥಾನ ಹೋಗಲು ಹಲವು ಕಾರಣಗಳಿವೆ. ಸಮಯ ಬಂದಾಗ ಎಲ್ಲವನ್ನೂ ಹೇಳುವೆ. ನಾನು ಯಾವೊತ್ತೂ ಸ್ವಾರ್ಥಕ್ಕಾಗಿ ಸುಳ್ಳು ಹೇಳಿಲ್ಲ. ಆದರೆ ಬೇರೆಯವರ ಅನುಕೂಲಕ್ಕಾಗಿ ಸುಳ್ಳು ಹೇಳಿದ್ದೇನೆ. ನನಗೆ ಅಧಿಕಾರ ಇಲ್ಲದಿದ್ದರೂ ಪರವಾಗಿಲ್ಲ. ಜನರ ಪ್ರೀತಿ ಉಳಿಸಿಕೊಂಡು ಹೋಗುವ ಶಕ್ತಿಯನ್ನು ಆ ದೇವರು ಕೊಡಲಿ ಎಂದು ತಿಳಿಸಿದರು.

ಹಳ್ಳಿಗಳಲ್ಲಿ ಮತಗಳವು ಮಾಡುವುದು ಕಷ್ಟ. ಹಳ್ಳಿಯ ಜನರು ನಕಲಿ ಓಟು ಹಾಕಿಸಲು ಬಿಡುವುದಿಲ್ಲ. ಆದರೂ ಎಚ್ಚರಿಕೆಯಿಂದ ಇರುವಂತೆ ಕಾರ್ಯಕರ್ತರಿಗೆ ತಿಳಿಹೇಳಬೇಕು. ನಗರ ಪ್ರದೇಶದಲ್ಲಿ ಮತಗಳ್ಳತನ ಮಾಡಬಹುದು ಎಂದು ಸ್ಪಷ್ಟಪಡಿಸಿದರು.

ಇದಕ್ಕೂ ಮುನ್ನ 79ನೇ ಸ್ವಾತಂತ್ರ್ಯ ದಿನೋತ್ಸವದಲ್ಲಿ ಮಾತನಾಡಿದ ಅವರು, ಬಡವರ ಪರ ಉತ್ತಮ ಆಡಳಿತ ನೀಡಿದಂತಹ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಸರಕಾರವನ್ನು ವಜಾ ಮಾಡಲಾಯಿತು. ಇದಲ್ಲದೆ ಮಾಜಿ ಮುಖ್ಯಮಂತ್ರಿ ಎಂ.ವಿ.ವೀರಪ್ಪ ಮೊಯ್ಲಿ ಅವರು ಬಡವರ ಮಕ್ಕಳಿಗೆ ಅನುಕೂಲವಾಗಲೆಂದು ಸಿಇಟಿ ಜಾರಿಗೆ ತಂದರು. ಅಂತಹವರನ್ನು ಅಧಿಕಾರದಿಂದ ಇಳಿಸಲಾಯಿತು. ಅಂತಹ ಹಿರಿಯರೇ ಅಧಿಕಾರ ಕಳೆದುಕೊಂಡ ಮೇಲೆ ನನ್ನ ಸಚಿವ ಸ್ಥಾನ ಹೋಗಿರುವುದು ನನಗೇನು ಬೇಸರ ಇಲ್ಲ ಎಂದು ತಿಳಿಸಿದರು.

ನನ್ನ ಸಚಿವ ಸ್ಥಾನದ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಆಕ್ಷೇಪ ಎತ್ತುವುದು ಸರಿಯಲ್ಲ. ಎಲ್ಲರೂ ಕಾಂಗ್ರೆಸ್ ಹೈಕಮಾಂಡ್ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈ ಬಲಪಡಿಸಬೇಕು. ಮಧುಗಿರಿ ಕ್ಷೇತ್ರದ ಜನತೆ ನನ್ನ ಮೇಲೆ ವಿಶ್ವಾಸವಿಟ್ಟು 35 ಸಾವಿರ ಅಂತರದ ಮತಗಳಿಂದ ಜಯಶೀಲರನ್ನಾಗಿ ಮಾಡಿದ್ದಾರೆ ಎಂದು ಹೇಳಿದರು.

ಮಧುಗಿರಿ ಜಿಲ್ಲಾ ಕೇಂದ್ರವನ್ನಾಗಿ ಮಾಡಬೇಕು. ತಾಲ್ಲೂಕಿನ ಎಲ್ಲಾ ಕೆರೆಗಳಿಗೂ ನೀರು ಹರಿಸುವುದು ನನ್ನ ಮುಖ್ಯ ಗುರಿಯಾಗಿದೆ. ಅಷ್ಟೇ ಅಲ್ಲದೆ ಸರಕಾರದಿಂದ ಹೆಚ್ಚಿನ ಅನುದಾನ ತಂದು ಕ್ಷೇತ್ರದ ಅಭಿವೃದ್ದಿ ಮಾಡುವುದಾಗಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X