Kunigal | ಪತಿ-ಪತ್ನಿ ಜಗಳದಲ್ಲಿ ಮಗ ಬಲಿ; ಹಾರೆಯಿಂದ ಹೊಡೆದು 16 ವರ್ಷದ ಮಗನನ್ನೇ ಹತ್ಯೆಗೈದ ತಂದೆ!

ಸುನೀಲ್ (16)
ತುಮಕೂರು : ಕುಣಿಗಲ್ ತಾಲ್ಲೂಕಿನ ಹುತ್ರಿದುರ್ಗ ಹೋಬಳಿ ವ್ಯಾಪ್ತಿಯ ಚೌಡನಾಯಕನಪಾಳ್ಯ ಗ್ರಾಮದಲ್ಲಿ ರವಿವಾರ ಬೆಳಗ್ಗೆ ತಂದೆಯೇ ಮಗನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಆರೋಪಿ ನಂಜೇಗೌಡ ಮದ್ಯ ವ್ಯಸನಿಯಾಗಿದ್ದು, ಪತ್ನಿಯೊಂದಿಗೆ ಆಗಾಗ ಜಗಳವಾಡುತ್ತಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ಈ ಹಿಂದೆ ಪತ್ನಿಗೆ ಮಾರಣಾಂತಿಕ ಹಲ್ಲೆ ನಡೆಸಿ ಜೈಲು ಸೇರಿದ್ದ ಎಂದು ತಿಳಿದು ಬಂದಿದೆ.
ಆರೋಪಿ ನಂಜೇಗೌಡ ರವಿವಾರ ಬೆಳಗ್ಗೆ ಪತ್ನಿಯೊಂದಿಗೆ ಜಗಳವಾಡುತ್ತಿದ್ದ ವೇಳೆ ಹಲ್ಲೆ ನಡೆಸುತ್ತಿದ್ದದ್ದನ್ನು ಗಮನಿಸಿದ ಮಗ ಸುನೀಲ್ (16) ಮಧ್ಯ ಪ್ರವೇಶಿಸಿ ಜಗಳ ಬಿಡಿಸಲು ಮುಂದಾಗಿದ್ದಾನೆ. ಈ ವೇಳೆ ಕೋಪಗೊಂಡ ನಂಜೇಗೌಡ ಪತ್ನಿಯನ್ನು ಮನೆಯಿಂದ ಹೊರಗೆ ತಳ್ಳಿ ಬಾಗಿಲು ಹಾಕಿಕೊಂಡಿದ್ದಾನೆ. ಬಳಿಕ ಮನೆಯಲ್ಲಿದ್ದ ಹಾರೆಯಿಂದ ಮಗನ ಮೇಲೆ ಮನ ಬಂದಂತೆ ಹಲ್ಲೆ ನಡೆಸಿ ಕೊಲೆಗೈದು ವಿಕೃತಿ ಮೆರೆದಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಕುಣಿಗಲ್ ಸಿಪಿಐ ಮಾಧ್ಯನಾಯಕ್ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
Next Story




