ತುಮಕೂರಿನಲ್ಲಿ 19 ನವಿಲುಗಳ ನಿಗೂಢ ಸಾವು

ತುಮಕೂರು : ಇಲ್ಲಿನ ಮಧುಗಿರಿ ತಾಲೂಕಿನ ಮಿಡಿಗೇಶಿಯ ಹನುಮಂಪುರದಲ್ಲಿ 19 ನವಿಲುಗಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಗ್ರಾಮದ ಕೆರೆ ಕೋಡಿ ನೀರು ಹರಿಯುವ ಪಕ್ಕದ ಜಮೀನುಗಳಲ್ಲಿ ನವಿಲುಗಳು ಪತ್ತೆಯಾಗಿದ್ದು, ಆಗಸ್ಟ್ 1ರ ರಾತ್ರಿ ನವಿಲುಗಳು ಮೃತಪಟ್ಟ ಬಗ್ಗೆ ಸ್ಥಳೀಯ ನಿವಾಸಿಗಳ ಅನುಮಾನ ವ್ಯಕ್ತಪಡಿಸಿದ್ದಾರೆ.
ಐದು ಗಂಡು ಹಾಗೂ 14 ಹೆಣ್ಣು ನವಿಲುಗಳ ಸಾವನ್ನಪ್ಪಿದ್ದು, ಸ್ಥಳಕ್ಕೆ ಅರಣ್ಯಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನ್ಯಾಯಾಧೀಶರ ಅನುಮತಿ ಬಳಿಕ ಎಫ್ಎಸ್ಎಲ್ಗೆ ರವಾನೆ ಮಾಡಲಾಗಿದೆ. ಆ ಮೂಲಕ ನವಿಲುಗಳ ಸಾವಿನ ಕಾರಣದ ವರದಿ ಪಡೆಯಲು ಅರಣ್ಯಾಧಿಕಾರಿಗಳು ಮುಂದಾಗಿದ್ದಾರೆ.
Next Story





