Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ತುಮಕೂರು
  4. Pavagada | ಬಾಲಕಿಯರ ವಸತಿಶಾಲೆಯಲ್ಲಿ...

Pavagada | ಬಾಲಕಿಯರ ವಸತಿಶಾಲೆಯಲ್ಲಿ ವಿದ್ಯಾರ್ಥಿನಿ ಮೃತ್ಯು; ಪ್ರಾಂಶುಪಾಲರು, ವಾರ್ಡನ್ ವಿರುದ್ಧ ತನಿಖೆಗೆ ಪೋಷಕರ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ8 Aug 2026 11:40 PM IST
share
Pavagada | ಬಾಲಕಿಯರ ವಸತಿಶಾಲೆಯಲ್ಲಿ ವಿದ್ಯಾರ್ಥಿನಿ ಮೃತ್ಯು; ಪ್ರಾಂಶುಪಾಲರು, ವಾರ್ಡನ್ ವಿರುದ್ಧ ತನಿಖೆಗೆ ಪೋಷಕರ ಒತ್ತಾಯ

ಪಾವಗಡ : ತಾಲೂಕಿನ ರಂಗಸಮುದ್ರ ಗ್ರಾಮದ ಕಸ್ತೂರಿ ಬಾ ಬಾಲಕಿಯರ ವಸತಿ ಶಾಲೆಯ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಶನಿವಾರ ವರದಿಯಾಗಿದೆ.

ಪ್ರಿಯಾ(16) ಮೃತಪಟ್ಟ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಬೆಳಗ್ಗೆ 6:30ರ ಸಮಯದಲ್ಲಿ ಕಸ್ತೂರಿ ಬಾ ವಸತಿ ಶಾಲೆಯ ವಿದ್ಯಾರ್ಥಿ ನಿಲಯದಲ್ಲಿ ಅನುಮಾನಸ್ಪದವಾಗಿ ಮೃತಪಟ್ಟಿದ್ದಾರೆ. ಪ್ರಾಂಶುಪಾಲರು ಮತ್ತು ವಾರ್ಡನ್ ವಿದ್ಯಾರ್ಥಿನಿಯ ಸ್ಥಿತಿ ನೋಡಿ ಅವರ ಮನೆಗೆ ಫೋನ್ ಮೂಲಕ ಪ್ರಿಯಾ ಪೋಷಕರಿಗೆ ವಿಷಯ ತಿಳಿಸಿದರು. ನಂತರ ಆಂಬ್ಯುಲೆನ್ಸ್‌ಗೆ ಫೋನ್ ಮಾಡಿ ತಿಳಿಸಿದ್ದಾರೆ.

ಆ ವೇಳೆ ವಿದ್ಯಾರ್ಥಿಯ ತಂದೆ ನರಸಿಂಹಪ್ಪ ತಾಯಿ ಶಾರದಮ್ಮ ಮತ್ತು ಸಂಬಂಧಿಕರು ಲಿಂಗದಹಳ್ಳಿ ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಮಾಯಿಸಿ ಸಾವಿನ ತನಿಖೆ ಯಾಗಬೇಕು ಎಂದು ಆಗ್ರಹಿಸಿದರು. ಅರಸೀಕೆರೆ ಠಾಣೆ ಪಿಎಸ್‌ಐ ರಾಜೇಂದ್ರ ಅವರು ವಿದ್ಯಾರ್ಥಿನಿ ಶವವನ್ನು ತುಮಕೂರು ಆಸ್ಪತ್ರೆಗೆ ತೆಗೆದುಕೊಂಡು ಹೋಗಿ ಶವಪರೀಕ್ಷೆ ಮಾಡಿಸಲು ರವಾನಿಸಿದ್ದಾರೆ.

‘ಪ್ರಿಯಾ ಅತ್ಯಂತ ಚುರುಕಾದ ವಿದ್ಯಾರ್ಥಿನಿ. ಸಾವಿಗೆ ಕಸ್ತೂರಿ ಬಾ ವಸತಿ ಶಾಲೆಯ ಸಿಬ್ಬಂದಿಯೇ ಕಾರಣ’ ಎಂದು ಪೋಷಕರು ಆರೋಪಿಸಿದರು.

ತಂದೆ ನರಸಿಂಹಪ್ಪಮಾತಾಡಿ, ಶುಕ್ರವಾರ ಪ್ರಿಯಾಳನ್ನು ರಂಗಸಮುದ್ರದ ಕಸ್ತೂರಿ ಬಾ ವಸತಿ ಶಾಲೆಗೆ ಎಂದಿನಂತೆ ಬಿಟ್ಟು ಬಂದಿದ್ದೆ. ಆ ಸಮಯದಲ್ಲಿ ಯಾವುದೇ ಆರೋಗ್ಯದಲ್ಲಿ ಏರುಪೇರು ಇರಲಿಲ್ಲ. ಹಾಸ್ಟೆಲ್‌ಗೆ ಹೋದ ಸಮಯದಲ್ಲಿ ನನ್ನ ಪುತ್ರಿ ಮೃತಪಟ್ಟಿದ್ದಾಳೆೆ.ಇದು ನಮಗೆ ನಂಬಲಾರದ ವಿಷಯವಾಗಿದೆ. ಈ ಕುರಿತು ತನಿಖೆ ಮಾಡಿಸಿ ಪ್ರಾಂಶುಪಾಲ ಮತ್ತು ವಾರ್ಡನ್ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ವಸತಿ ಶಾಲೆಯ ವಾರ್ಡನ್ ಮತ್ತು ಪ್ರಾಂಶುಪಾಲರನ್ನು ಈ ಕೂಡಲೇ ಅಮಾನತಿನಲ್ಲಿಟ್ಟು ನಿಷ್ಪಕ್ಷ ತನಿಖೆ ನಡೆಸುವಂತೆ ಪೊಲೀಸರಿಗೆ ಮನವಿ ಮಾಡಿದ್ದೇನೆ. ಈ ಸಾವಿನ ಹಿಂದಿನ ಸತ್ಯ ಹೊರಬರಲೇಬೇಕು ಎಂದು ಅವರು ಹೇಳಿದರು.

ಪ್ರಕರಣ ಸಂಬಂಧ ವಸತಿ ಶಾಲೆಯ ಪ್ರಾಂಶುಪಾಲರು, ವಾರ್ಡನ್ ಹಾಗೂ ವಿದ್ಯಾರ್ಥಿನಿಯ ಸಹಪಾಠಿಗಳನ್ನು ಪೊಲೀಸರು ತನಿಖೆಗೆ ಒಳಪಡಿಸಿದ್ದಾರೆ.

Tags

Pavagada
share
ವಾರ್ತಾಭಾರತಿ
ವಾರ್ತಾಭಾರತಿ
Next Story
X