Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ತುಮಕೂರು
  4. ಮೇವು, ಕುಡಿಯುವ ನೀರಿಗೆ ಯಾವುದೇ...

ಮೇವು, ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗಬಾರದು : ಡಿಸಿಎಂ ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ17 July 2026 3:29 PM IST
share
ಮೇವು, ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗಬಾರದು : ಡಿಸಿಎಂ ಜಿ.ಪರಮೇಶ್ವರ್
"ಜನರ ಸಮಸ್ಯೆಗಳನ್ನುಆಲಿಸಿದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ"

ತುಮಕೂರು: ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದರು.

ತುಮಕೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣೆ ಕುರಿತು ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಆಗಮಿಸುವ ಎಲ್ಲಾ ಅಧಿಕಾರಿಗಳು ಸ್ಥಳೀಯ ಶಾಸಕರನ್ನು ಭೇಟಿ ಮಾಡಿ, ತಮ್ಮ ಸಂಪರ್ಕ ಸಂಖ್ಯೆಯನ್ನು ನೀಡಿ ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಸೂಚಿಸಿದರು.

ರೈತರಿಗೆ ವಾರದೊಳಗೆ ಮೇವಿನ ಬೀಜ ವಿತರಿಸಬೇಕು. ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಿ, ಅಗತ್ಯವಿರುವ ಕಡೆಗಳಲ್ಲಿ ಬೋರ್‌ವೆಲ್ ಕೊರೆಸಿ ತ್ವರಿತವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಈ ವಿಚಾರದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಅಥವಾ ವಿಳಂಬ ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಬರ ಪರಿಸ್ಥಿತಿಯಲ್ಲಿ ನಿಯಮಗಳ ನೆಪ ಹೇಳದೆ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ತಾಲೂಕು ಮತ್ತು ಜಿಲ್ಲಾ ಮಟ್ಟದ ಟಾಸ್ಕ್‌ಫೋರ್ಸ್ ಸಭೆಗಳನ್ನು ನಿರಂತರವಾಗಿ ನಡೆಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಒಗಳಿಗೆ ನಿರ್ದೇಶನ ನೀಡಿದರು.

ಸಾಂಕ್ರಾಮಿಕ ರೋಗಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದ ಅವರು, ಡೆಂಗ್ಯೂ, ಚಿಕನ್ ಗುನ್ಯಾ ಹಾಗೂ ಗಡಿಭಾಗಗಳಲ್ಲಿ ವರದಿಯಾಗಿರುವ ಕೋವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಸಜ್ಜುಗೊಳಿಸಬೇಕು ಎಂದರು.

ಇದೇ ವೇಳೆ, ಬೆಳೆ ವಿಮೆ ಪರಿಹಾರ ಕುರಿತು ರೈತರಿಂದ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ವಿಮೆ ಕಂಪನಿಗಳೊಂದಿಗೆ ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ತಿಳಿಸಿದರು. ಜೊತೆಗೆ, ಮೋಡ ಬಿತ್ತನೆ ಕುರಿತ ವರದಿಯನ್ನೂ ಸರ್ಕಾರ ಪರಿಶೀಲಿಸುತ್ತಿದ್ದು, ಜುಲೈ 25ರಂದು ಚಿತ್ರದುರ್ಗದಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಬೆಂಗಳೂರು ಕಂದಾಯ ವಿಭಾಗದ ಸಭೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

Tags

G.Parameshwaradrinking water
share
ವಾರ್ತಾಭಾರತಿ
ವಾರ್ತಾಭಾರತಿ
Next Story
X