ತಿಪಟೂರು | ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಗೆ ನುಗ್ಗಿದ ಕೆಸ್ಸಾರ್ಟಿಸಿ ಬಸ್; 35 ಪ್ರಯಾಣಿಕರಿಗೆ ಗಾಯ, ಆಸ್ಪತ್ರೆಗೆ ದಾಖಲು

ತಿಪಟೂರು : ತಾಲೂಕಿನ ಕಸಬಾ ಹೋಬಳಿ ಕೋನೆಹಳ್ಳಿ ಸಿದ್ದಾಪುರ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಸಾರ್ಟಿಸಿ ಬಸ್‌ವೊಂದು ರಸ್ತೆ ಪಕ್ಕದ ಮನೆಗೆ ನುಗ್ಗಿದ ಘಟನೆ ನಡೆದಿದೆ.
ಅಪಘಾತದಲ್ಲಿ ಸುಮಾರು 35 ಜನರಿಗೆ ಗಾಯಗಾಳಾಗಿದ್ದು, ಚಿಕಿತ್ಸೆಗಾಗಿ ತಿಪಟೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿವಮೊಗ್ಗದಿಂದ ಬೆಂಗಳೂರಿಗೆ ಹೊರಟ್ಟಿದ್ದ ಕೆಎಸ್ಸಾರ್ಟಿಸಿ ಬಸ್ ತಿಪಟೂರು ತಾಲೂಕಿನ ಕೊನೇಹಳ್ಳಿ ಸಿದ್ದಾಪುರ ಗ್ರಾಮದ ಬಳಿ ಟೈಯರ್ ಸ್ಪೋಟಗೊಂಡು, ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಮನೆಗೆ ನುಗ್ಗಿದೆ. ಬಸ್ ನಿಯಂತ್ರಣ ತಪ್ಪಿ ವೇಗವಾಗಿ ರಸ್ತೆ ಬದಿಯ ವಿದ್ಯುತ್ ಕಂಬ, ತೆಂಗಿನ ಮರಕ್ಕೆ ಢಿಕ್ಕಿ ಹೊಡೆದು ರಸ್ತೆ ಬದಿಯ ಪುಟ್ಟಣ್ಣ ಎಂಬುವವರ ಮನೆಗೆ ನುಗ್ಗಿದೆ ಎನ್ನಲಾಗಿದೆ.
ಅಪಘಾತದಲ್ಲಿ ಮಹಿಳೆಯರು ಮಕ್ಕಳು ಸೇರಿ 35ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ತಿಪಟೂರು ಸಾರ್ವಜನಿಕ ಆಸ್ಪತ್ರೆ ಹಾಗೂ ಅರಸೀಕೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೊನ್ನವಳ್ಳಿ ಸಬ್ ಇನ್ಸ್‌ಪೆಕ್ಟರ್ ರಾಜೇಶ್, ಗ್ರಾಮಾಂತರ ವೃತ್ತ ನಿರೀಕ್ಷಕರಾದ ಚಂದ್ರಶೇಖರ್, ಡಿವೈಎಸ್ಪಿ ವಿನಾಯಕ ಶೆಟಿಗೇರಿ ಸೇರಿದಂತೆ ಕೆಎಸ್ಸಾರ್ಟಿಸಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ.