Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ತುಮಕೂರು
  4. ಎಚ್.ಎ.ಎಲ್ ವಿಸ್ತರಣಾ ಘಟಕಕ್ಕೆ ರೈತರ...

ಎಚ್.ಎ.ಎಲ್ ವಿಸ್ತರಣಾ ಘಟಕಕ್ಕೆ ರೈತರ ಜಮೀನು ಭೂಸ್ವಾಧೀನ ವಿರುದ್ದ ಮನವಿ

ವಾರ್ತಾಭಾರತಿವಾರ್ತಾಭಾರತಿ22 July 2026 7:20 PM IST
share
ಎಚ್.ಎ.ಎಲ್ ವಿಸ್ತರಣಾ ಘಟಕಕ್ಕೆ ರೈತರ ಜಮೀನು ಭೂಸ್ವಾಧೀನ ವಿರುದ್ದ ಮನವಿ

ತುಮಕೂರು : ಗುಬ್ಬಿ ತಾಲೂಕು ಬಿದರೆಹಳ್ಳ ಕಾವಲ್ ನಲ್ಲಿರುವ ಎಚ್.ಎ.ಎಲ್‍ಗೆ ಹೆಚ್ಚುವರಿ ಭೂಮಿಗಾಗಿ ರೈತರ ಫಲವತ್ತಾದ ಭೂಮಿಯ ಬದಲು, ಲಭ್ಯವಿರುವ ಸಾಮಾಜಿಕ ಅರಣ್ಯ, ಹುಲ್ಲುಬಂದಿ, ಗೋಮಾಳ ಜಮೀನು ಬಳಕೆ ಮಾಡುವಂತೆ ಇಂದು ಹಾಲಪ್ಪ ಪ್ರತಿಷ್ಠಾನದ ನೇತೃತ್ವದಲ್ಲಿ ಮುರುಳೀಧರ ಹಾಲಪ್ಪ ಹಾಗೂ ತುಮುಲ್ ನಿರ್ದೇಶಕರಾದ ಭಾರತೀ ಶ್ರೀನಿವಾಸ್ ಅವರು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿಯ ಅಧಿಕಾರಿಗಳಿಗೆ ನೂರಾರು ರೈತರೊಂದಿಗೆ ನಿಯೋಗ ತೆರಳಿ ಮನವಿ ಸಲ್ಲಿಸಿದರು.

ಕಳೆದ ಹತ್ತು ವರ್ಷಗಳ ಹಿಂದೆ ಗುಬ್ಬಿ ತಾಲೂಕು ಬಿದರೆಹಳ್ಳ ಕಾವಲ್ ಬಳಿ ರೈತರ ಸಾಗುವಳಿ ಭೂಮಿಯೂ ಸೇರಿದಂತೆ ಸುಮಾರು 660 ಎಕರೆ ಪ್ರದೇಶದಲ್ಲಿ ದೇಶದ ಪ್ರತಿಷ್ಠಿತ ಕಂಪನಿಗಳಲ್ಲಿ ಒಂದಾದ ಎಚ್.ಎ.ಎಲ್‍ನ ಬಹು ಉಪಯೋಗಿ ಹೆಲಿಕ್ಯಾಪ್ಟರ್ ನಿರ್ಮಾಣ ಘಟಕ ಆರಂಭಗೊಂಡಿದ್ದು, ಇದರ ವಿಸ್ತರಣಾ ಘಟಕಕ್ಕೆ ಸುಮಾರು 400 ಎಕರೆಗೂ ಹೆಚ್ಚು ಜಾಗಬೇಕು ಎಂದು ಸರಕಾರಕ್ಕೆ ಎಚ್.ಎ.ಎಲ್ ವತಿಯಿಂದ ಮನವಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಸರಕಾರ ಕೆ.ಐ.ಎ.ಡಿ.ಬಿ. ಅವರಿಗೆ ಎಚ್.ಎ.ಎಲ್. ವಿಸ್ತರಣಾ ಘಟಕಕ್ಕೆ ಅಗತ್ಯವಿರುವ ಭೂಮಿ ಗುರುತಿಸಿ,ವರದಿ ಸಲ್ಲಿಸುವಂತೆ ಸೂಚನೆ ನೀಡಿತ್ತು.

ಸರಕಾರದ ಆದೇಶದ ಮೇರೆಗೆ ಕೆ.ಐ.ಎ.ಡಿ.ಬಿ. ಅಧಿಕಾರಿಗಳು ಹಾಲಿ ಕಾರ್ಯನಿರ್ವಹಿಸುತ್ತಿರುವ ಎಚ್.ಎ.ಎಲ್. ಘಟಕದ ಸುತ್ತಮುತ್ತಲ ಸುಮಾರು 457 ಎಕರೆ ಜಾಗ ಗುರುತಿಸಿ ಸರಕಾರಕ್ಕೆ ವರದಿ ಸಲ್ಲಿಸಿದ್ದು, ಇದರಲ್ಲಿ ರೈತರ ಸುಮಾರು 146 ಎಕರೆ ಫಲವತ್ತಾದ ಭೂಮಿಯೂ ಸೇರಿದ ಹಿನ್ನೆಲೆಯಲ್ಲಿ ಭೂಮಿ ನೀಡಲು ನಿರಾಕರಿಸಿದ ರೈತರು, ಸ್ಥಳೀಯ ಶಾಸಕರಾದ ಎಸ್.ಆರ್,ಶ್ರೀನಿವಾಸ್ ಸೇರಿದಂತೆ ಎಲ್ಲಾ ಜನಪ್ರತಿನಿಧಿಗಳಿಗೆ ತಮ್ಮ ಫಲವತ್ತಾ ಭೂಮಿಯನ್ನು ಉಳಿಸಿಕೊಡುವಂತೆ ಮನವಿ ಮಾಡಿದ್ದರು. ರೈತರ ಮನವಿಗೆ ಸ್ಪಂದಿಸಿದ ಶಾಸಕರು, ರೈತರ ಜಮೀನನ್ನು ಕೈಬಿಡುವಂತೆ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರ ಮೇಲೆ ಒತ್ತಡ ತಂದು,ಅಧಿಕಾರಿಗಳಿಗೆ ಲಿಖಿತ ಆದೇಶ ಮಾಡಿಸುವ ಕೆಲಸ ಮಾಡಿದ್ದರು.

ಈ ಎಲ್ಲಾ ಘಟನೆಗಳ ಹಿನ್ನೆಲೆಯಲ್ಲಿ ಇಂದು ಕೆ.ಐ.ಎ.ಡಿ.ಬಿ ಅಧಿಕಾರಿಗಳು ರೈತರು ಹಾಗೂ ರೈತ ಮುಖಂಡರೊಂದಿಗೆ ಚರ್ಚೆ ನಡೆಸಲು ಆಹ್ವಾನ ನೀಡಿದ್ದರು. ಈ ವೇಳೆ ರೈತರ ಪರವಾಗಿ ಮನವಿ ಸಲ್ಲಿಸಿ ಮಾತನಾಡಿದ ಕೆಪಿಸಿಸಿ ಹಿರಿಯ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ, ಈಗಾಗಲೇ ಈ ಭಾಗದ ರೈತರು ಮೊದಲ ಹಂತದ ಎಚ್.ಎ.ಎಲ್‍ಗೆ ತಮ್ಮ ಅಲ್ಪಸ್ವಲ್ಪ ಭೂಮಿಯನ್ನು ಕಳೆದುಕೊಂಡಿದ್ದಾರೆ. ಎಚ್.ಎ.ಎಲ್ ನೀಡಿದ ಭರವಸೆಯಂತೆ ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಖಾಯಂ ಉದ್ಯೋಗವನ್ನು ನೀಡಿಲ್ಲ. ಗುತ್ತಿಗೆ ಆಧಾರದಲ್ಲಿ ಡಿ ದರ್ಜೆ ನೌಕರಿ ನೀಡಿ ಕೈತೊಳೆದುಕೊಂಡಿದೆ. ಹಾಗಾಗಿ ರೈತರು ವಿಸ್ತರಣಾ ಘಟಕಕ್ಕೆ ತಮ್ಮ ಭೂಮಿ ನೀಡಲು ಹಿಂದೇಟು ಹಾಕುತ್ತಿದ್ದಾರೆ. . ಎಚ್.ಎ.ಎಲ್ ಘಟಕಕ್ಕೆ ಹೊಂದಿಕೊಂಡಂತೆಯೇ 2000 ಎಕರೆ ಸಾಮಾಜಿಕ ಅರಣ್ಯ ಭೂಮಿ ಇದೆ.ಅದನ್ನು ಬಳಕೆ ಮಾಡಿಕೊಳ್ಳಬಹುದು. ರೈತರಿಗೆ ತೊಂದರೆ ನೀಡಬಾರದು ಎಂಬುದು ನಮ್ಮ ಒತ್ತಾಯವಾಗಿದೆ. ಶಾಸಕರು ಸಹ ಇದೇ ಆಶಯದೊಂದಿಗೆ ರೈತರ ಪರವಾಗಿ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ, ಆದೇಶ ಮಾಡಿಸಿದ್ದಾರೆ. ಕೆ.ಐ.ಎ.ಡಿ.ಬಿ. ಅಧಿಕಾರಿಗಳು ಇದನ್ನು ಪರಿಗಣಿಸಿ, ರೈತರ ಭೂಮಿಯನ್ನು ಭೂಸ್ವಾಧೀನದಿಂದ ಹೊರಗಿಡಬೇಕೆಂದರು.

ತುಮುಲ್ ನಿರ್ದೇಶಕ ಶ್ರೀಮತಿ ಭಾರತೀ ಶ್ರೀನಿವಾಸ್ ಮಾತನಾಡಿ, ರೈತರ ಆಶಯದಂತೆ ಈಗಾಗಲೇ ಶಾಸಕರು ಮುಖ್ಯಮಂತ್ರಿಗಳ ಬಳಿ ಮಾತನಾಡಿ, ರೈತರ ಫಲವತ್ತಾದ ಜಮೀನು ಉಳಿಸುವ ಕೆಲಸ ಮಾಡಿದ್ದಾರೆ. ಎಚ್.ಎ.ಎಲ್ ಘಟಕಕ್ಕೆ ಹೊಂದಿಕೊಂಡಂತೆಯೇ ಇರುವ ಸಾಮಾಜಿಕ ಅರಣ್ಯ ಭೂಮಿಯನ್ನು ಸರಕಾರ ಬಳಕೆ ಮಾಡಿಕೊಳ್ಳಲಿ, ಇದಕ್ಕೆ ನಮ್ಮ ಅಭ್ಯಂತರವಿಲ್ಲ. ನಾವು ಸದಾ ಕಾಲ ರೈತರ ಪರವಾಗಿ ಇರುತ್ತೇವೆ ಎಂದು ಸ್ಪಷ್ಟಪಡಿಸಿದರು.

ಈ ವೇಳೆ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ನರೇಂದ್ರ ಬಾಬು, ಅರಣ್ಯ ಅಧಿಕಾರಿಗಳು,ಮುಖಂಡರಾದ ಗೋವಿಂದೇಗೌಡ, ರೈತ ಸಂಘದ ರಾಚಪ್ಪ, ಗುಬ್ಬಿ ತಾಲೂಕು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಭಾಗ್ಯಮ್ಮ, ರೈತ ಮಹಿಳೆಯರಾದ ರಾಧಾ, ಮುಖಂಡರಾದ ಶಶಿಧರ್, ಫಣೀಂಧ್ರ, ಕೇಶವ್, ಚಂದ್ರಪ್ಪ, ಉಮೇಶ್ ಸೇರಿದಂತೆ ನೂರಾರು ರೈತ ಮಹಿಳೆಯರು,ರೈತರು ಪಾಲ್ಗೊಂಡಿದ್ದರು.

Tags

Tumakur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X