Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ತುಮಕೂರು
  4. Tumakur | ಗೌಜಗಲ್ಲು ಗ್ರಾಮದಲ್ಲಿ ಮತ್ತೆ...

Tumakur | ಗೌಜಗಲ್ಲು ಗ್ರಾಮದಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ : ಗ್ರಾಮಸ್ಥರಲ್ಲಿ ಆತಂಕ

ವಾರ್ತಾಭಾರತಿವಾರ್ತಾಭಾರತಿ24 Jun 2026 2:26 PM IST
share
Tumakur | ಗೌಜಗಲ್ಲು ಗ್ರಾಮದಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ : ಗ್ರಾಮಸ್ಥರಲ್ಲಿ ಆತಂಕ

ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಗೌಜಗಲ್ಲು ಗ್ರಾಮದಲ್ಲಿ ಕಳೆದ ಒಂದು ತಿಂಗಳಿನಿಂದ ಚಿರತೆಯ ಹಾವಳಿ ಮುಂದುವರಿದಿದ್ದು, ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮಂಗಳವಾರ ಸಂಜೆ ಚಿರತೆಯೊಂದು ನಾಯಿಯನ್ನು ಬೇಟೆಯಾಡಲು ಹೊಂಚು ಹಾಕುತ್ತಿದ್ದ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಗ್ರಾಮಸ್ಥರ ಭಯ ಮತ್ತಷ್ಟು ಹೆಚ್ಚಿಸಿದೆ.

ಮಂಗಳವಾರ ಸಂಜೆ ಆಹಾರ ಅರಸಿ ಗ್ರಾಮಕ್ಕೆ ಬಂದಿದ್ದ ಚಿರತೆಯು ನಾಯಿಯೊಂದರ ಮೇಲೆ ದಾಳಿ ನಡೆಸಲು ಸಜ್ಜಾಗಿದ್ದ ವೇಳೆ, ಕೊರಟಗೆರೆ ಕಡೆಯಿಂದ ಕಾರಿನಲ್ಲಿ ಮನೆಗೆ ಬರುತ್ತಿದ್ದ ಸ್ಥಳೀಯ ಯುವಕರು ಅದನ್ನು ಗಮನಿಸಿದ್ದಾರೆ. ಈ ವೇಳೆ ಚಿರತೆಯ ಚಲನವಲನಗಳನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದು, ವಿಡಿಯೋ ಇದೀಗ ಗ್ರಾಮದಲ್ಲಿ ಚರ್ಚೆಗೆ ಕಾರಣವಾಗಿದೆ.

ಗ್ರಾಮಸ್ಥರ ಮಾಹಿತಿಯ ಪ್ರಕಾರ, ಮೂರು ದಿನಗಳ ಹಿಂದೆ ಗೌಜಗಲ್ಲು ಗ್ರಾಮದ ರೈತ ಗೋವಿಂದರಾಜು ಅವರಿಗೆ ಸೇರಿದ ಮೂರು ಮೇಕೆಗಳನ್ನು ಇದೇ ಚಿರತೆ ಬೇಟೆಯಾಡಿತ್ತು. ಇದಕ್ಕೂ ಮುನ್ನ ಸುಮಾರು 20 ದಿನಗಳ ಹಿಂದೆ ಕುರಿ ಹಾಗೂ ಮೇಕೆಗಳ ಮೇಲೂ ದಾಳಿ ನಡೆಸಿದ್ದರಿಂದ ಗ್ರಾಮಸ್ಥರು ನಿರಂತರ ಭೀತಿಯಲ್ಲಿ ದಿನ ಕಳೆಯುತ್ತಿದ್ದಾರೆ.

ಕಳೆದ 20 ದಿನಗಳಿಂದ ಚಿರತೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಪ್ರಯತ್ನ ನಡೆಸುತ್ತಿದ್ದರೂ ಇದುವರೆಗೆ ಯಶಸ್ಸು ಸಿಕ್ಕಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಡಂಚಿನ ಗ್ರಾಮಗಳ ಜನರ ಸಮಸ್ಯೆಗಳಿಗೆ ಸಮರ್ಪಕ ಸ್ಪಂದನೆ ದೊರೆಯುತ್ತಿಲ್ಲ ಎಂಬ ಆರೋಪವೂ ಕೇಳಿಬಂದಿದೆ.

ಸಿದ್ದರಬೆಟ್ಟ ಅರಣ್ಯ ಪ್ರದೇಶದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಚಿರತೆ, ಕರಡಿ, ಕಾಡುಹಂದಿ ಸೇರಿದಂತೆ ವಿವಿಧ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಸಾಕುಪ್ರಾಣಿಗಳ ಜೀವಹಾನಿ ಹಾಗೂ ಬೆಳೆ ನಷ್ಟ ನಿರಂತರವಾಗಿ ಸಂಭವಿಸುತ್ತಿದೆ. ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಚಿರತೆಯನ್ನು ಶೀಘ್ರ ಸೆರೆಹಿಡಿದು ಅಗತ್ಯ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

Tags

leopardTumakur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X