Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ತುಮಕೂರು
  4. Tumakur | ಹೆಸರು ಪ್ರಸ್ತಾಪಿಸದ...

Tumakur | ಹೆಸರು ಪ್ರಸ್ತಾಪಿಸದ ವಿಚಾರಕ್ಕೆ ಗದ್ದಲ; ವಿಜಯೇಂದ್ರ ಮುಂದೆಯೇ ಬಿಜೆಪಿಯ ಎರಡು ಬಣಗಳ ನಡುವೆ ಮಾತಿನ ಚಕಮಕಿ

ವಾರ್ತಾಭಾರತಿವಾರ್ತಾಭಾರತಿ4 Oct 2026 7:24 PM IST
share
Tumakur | ಹೆಸರು ಪ್ರಸ್ತಾಪಿಸದ ವಿಚಾರಕ್ಕೆ ಗದ್ದಲ; ವಿಜಯೇಂದ್ರ ಮುಂದೆಯೇ ಬಿಜೆಪಿಯ ಎರಡು ಬಣಗಳ ನಡುವೆ ಮಾತಿನ ಚಕಮಕಿ

ತುಮಕೂರು : ಬಿಜೆಪಿ ಕೈಗೊಂಡಿರುವ ವಿಜಯ ಸಂಕಲ್ಪ ಯಾತ್ರೆಯ ಕಾರ್ಯಕ್ರಮದ ವೇಳೆ ಮುಖಂಡರೊಬ್ಬರ ಹೆಸರು ಪ್ರಸ್ತಾಪಿಸದಿರುವುದನ್ನೇ ನೆಪ ಮಾಡಿ, ಬಿಜೆಪಿಯ ಎರಡು ಬಣಗಳ ನಡುವೆ ಮಾತಿನ ಚಕಮಕಿ ನಡೆದು ಕೈ ಕೈ ಮೀಲಾಯಿಸುವ ಹಂತಕ್ಕೆ ಹೋದ ಘಟನೆ ನಡೆದಿದೆ.

ತುಮಕೂರು ಜಿಲ್ಲೆಯ ಗುಬ್ಬಿಯ ಹೇರೂರು ಮತ್ತು ಚೇಳೂರು ಗ್ರಾಮಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ವಿಜಯ ಸಂಕಲ್ಪ ಯಾತ್ರೆಯನ್ನು ಆಯೋಜಿಸಲಾಗಿತ್ತು.

ಹೋಬಳಿ ಕೇಂದ್ರವಾದ ಚೇಳೂರು ಗ್ರಾಮದಲ್ಲಿ ವಿಜಯ ಸಂಕಲ್ಪ ಯಾತ್ರೆ ನಡೆಯುವ ವೇಳೆ ಬಿಜೆಪಿ ಮುಖಂಡ ಹಾಗೂ ಜಿ.ಪಂ.ಮಾಜಿ ಸದಸ್ಯ ಚಂದ್ರ ಶೇಖರ್‌ ಬಾಬು ಸ್ವಾಗತ ಬಯಸುವ ವೇಳೆ, ವೇದಿಕೆಯ ಮೇಲಿದ್ದ ಮತ್ತೊರ್ವ ಮುಖಂಡ ಹಾಗೂ 2023ರ ವಿಧಾನಸಭಾ ಚುನಾವಣೆಯ ಗುಬ್ಬಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ದಿಲೀಪ್‍ ಕುಮಾರ್ ಅವರ ಹೆಸರು ಹೇಳಲಿಲ್ಲ ಎಂಬ ಕಾರಣಕ್ಕೆ ದಿಲೀಪ ಕುಮಾರ್ ಅಭಿಮಾನಿಗಳು ರಾಜ್ಯಾಧ್ಯಕ್ಷರ ಮುಂದೆಯೇ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಈ ವೇಳೆ ಚಂದ್ರಶೇಖರ್‌ ಮತ್ತು ದಿಲೀಪ್ ಕುಮಾರ್ ಬೆಂಬಲಿಗರು ನಡುವೆ ಮಾತಿನ ಚಕಮಕಿ ಆರಂಭವಾಗಿ, ಸಭೆಯಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿರುವ ವಿನಯ್ ಬಿದರೆ, ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿಶಂಕರ್ ಹಾಗೂ ಸ್ವತಃ ದಿಲೀಪ್‍ ಕುಮಾರ್ ಅವರೇ ಗಲಾಟೆ ನಿಲ್ಲಿಸುವಂತೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಒಂದು ಹಂತದಲ್ಲಿ ಕಾರ್ಯಕರ್ತರ ಮೇಲೆ ಹರಿಹಾಯ್ದ ವಿನಯ ಬಿದರೆ, ನಮ್ಮ ರಾಜ್ಯಾಧ್ಯಕ್ಷರು ಇರುವ ಸಭೆಯಲ್ಲಿ ಕಾರ್ಯಕರ್ತರು ಬಹಳ ಗಂಭೀರವಾಗಿ ಸಭಾ ಮರ್ಯಾದೆಯನ್ನು ಕಾಪಾಡುತ್ತಾರೆ. ಇಲ್ಲಿ ನೋಡದರೆ ಅವರ ಎದುರೇ ಒಬ್ಬರಿಗೊಬ್ಬರು ಕಿತ್ತಾಡುತಿದ್ದೀರಿ, ಇದು ರಾಜ್ಯಾಧ್ಯಕ್ಷರಿಗೆ ಮಾಡಿದ ಅವಮಾನ ಎಂದು ನುಡಿದರು. ಆದರೆ ಯಾರ ಮಾತಿಗೆ ಬಗ್ಗದ ಕಾರ್ಯಕರ್ತರು ಪರಸ್ಪರ ನಿಂದನೆಗೆ ಇಳಿದರು. ಈ ವೇಳೆ ಮಾತನಾಡಲು ಎದ್ದು ನಿಂತ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಇಬ್ಬರು ಮುಖಂಡರ ಅಭಿಮಾನಿಗಳಿಗೆ ತಿಳಿ ಹೇಳಿ, ಜಗಳ ಉಪಶಮನಗೊಳಿಸಿದರು.

Tags

TumakurVijayendra
share
ವಾರ್ತಾಭಾರತಿ
ವಾರ್ತಾಭಾರತಿ
Next Story
X