ತುಮಕೂರು: ಸುಟ್ಟು ಕರಕಲಾದ ಕಾರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ತುಮಕೂರು: ಸುಟ್ಟು ಕರಕಲಾದ ಕಾರಿನಲ್ಲಿ ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ತುಮಕೂರು ಜಿಲ್ಲೆಯ ಸಿರಾ ತಾಲೂಕಿನಲ್ಲಿ ನಡೆದಿದೆ.
ಘಟನೆಗೆ ಕಾರಣವೇನು ಎಂಬ ಬಗ್ಗೆ ಇದುವರೆಗೂ ಮಾಹಿತಿ ದೊರೆತಿಲ್ಲ.
ತುಮಕೂರು ಜಿಲ್ಲೆಯ ಸಿರಾ ತಾಲೂಕಿನ ಮುದ್ದರಂಗನಹಳ್ಳಿ ಹಾಗೂ ಮೇಲುಕುಂಟೆ ರಸ್ತೆ ಮಧ್ಯದ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮೃತ ವ್ಯಕ್ತಿಯನ್ನು ದಾವಣಗೆರೆ ಮೂಲದ ಮಂಜುನಾಥ್ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕಾರು ಸುಟ್ಟು ಹೋಗಿರುವುದನ್ನು ನೋಡಲು ಬಂದ ಸ್ಥಳೀಯರಿಗೆ ಕಾರಿನೊಳಗೆ ಮೃತದೇಹ ಇರುವುದನ್ನು ಕಂಡಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.
Next Story





