Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ತುಮಕೂರು
  4. ತುಮಕೂರು | ಸನ್ಮಾನದ ಹೆಸರಿನಲ್ಲಿ...

ತುಮಕೂರು | ಸನ್ಮಾನದ ಹೆಸರಿನಲ್ಲಿ ಪೌರಕಾರ್ಮಿಕರಿಗೆ ಅವಮಾನ

ವಾರ್ತಾಭಾರತಿವಾರ್ತಾಭಾರತಿ21 Oct 2026 11:18 PM IST
share
ತುಮಕೂರು | ಸನ್ಮಾನದ ಹೆಸರಿನಲ್ಲಿ ಪೌರಕಾರ್ಮಿಕರಿಗೆ ಅವಮಾನ

ತುಮಕೂರು : ನವರಾತ್ರಿಯ ಅಷ್ಟು ದಿನಗಳ ಕಾಲ ದಸರಾ ನಡೆಯುತ್ತಿರುವ ಸರಕಾರಿ ಜೂನಿಯರ್ ಕಾಲೇಜು ಮೈದಾನ ಹಾಗೂ ನಗರವನ್ನು ಸ್ವಚ್ಚವಾಗಿಡಲು ಶ್ರಮಿಸಿದ ಪೌರಾಕಾರ್ಮಿಕರನ್ನು ಸನ್ಮಾನಿಸುವುದಾಗಿ ಕರೆಯಿಸಿ, ಅಪಮಾನಿಸಿರುವ ಘಟನೆ ಅ.20ರಂದು ನಡೆದಿದೆ.

ಅ.20ರಂದು ಮದ್ಯಾಹ್ನ 3:30ಕ್ಕೆ ನಗರಪಾಲಿಕೆಯ ಅಧಿಕಾರಿಗಳು ಸನ್ಮಾನಿಸುವುದಾಗಿ ಹೇಳಿ ಮುಖ್ಯವೇದಿಕೆಯಾದ ಅಮರಶಿಲ್ಪಿ ಜಕಣಾಚಾರಿ ವೇದಿಕೆ ಬಳಿ ಕರೆಯಿಸಿಕೊಂಡಿದ್ದಾರೆ. ಆದರೆ ವೇದಿಕೆಯ ಬಳಿ ಭದ್ರತೆಗಾಗಿ ನೇಮಕಗೊಂಡಿದ್ದ ಎಎಸ್‌ಪಿಯೊಬ್ಬರ ನೇತೃತ್ವದ ಪೊಲೀಸರ ತಂಡ ಪೌರಕಾರ್ಮಿಕರನ್ನು ವೇದಿಕೆಯ ಬಳಿ ಬಿಡಲು ನಿರಾಕರಿಸಿದ್ದಾರೆ. ನಗರಪಾಲಿಕೆಯ ಅಧಿಕಾರಿಗಳು ಪರಿಪರಿಯಾಗಿ ಹೇಳಿದರೂ ಕೇಳದ ಪೊಲೀಸರು ಸನ್ಮಾನಕ್ಕಾಗಿ ಬಂದಿದ್ದ ಸುಮಾರು 50ಕ್ಕೂ ಹೆಚ್ಚು ಪೌರಕಾರ್ಮಿಕರನ್ನು ಹೊರ ಕಳುಹಿಸಿದ್ದಾರೆ. ಅಲ್ಲದೆ ಸನ್ಮಾನಕ್ಕೆಂದು ಕನ್ನಡ ಸಂಸ್ಕೃತಿ ಇಲಾಖೆಯ ಕರೆಯ ಮೇರೆಗೆ ಆಗಮಿಸಿದ್ದ ಪತ್ರಕರ್ತರು ಹಾಗೂ ವಿವಿಧ ಸಮಿತಿಗಳ ಸದಸ್ಯರೊಂದಿಗೂ ಇದೇ ರೀತಿಯ ವರ್ತನೆ ಪೊಲೀಸರಿಂದ ನಡೆದಿದೆ.

ಇದರಿಂದ ಮನನೊಂದ ಪೌರಕಾರ್ಮಿಕರು ಸ್ಥಳದಲ್ಲಿಯೇ ಅಸಮಾಧಾನ ವ್ಯಕ್ತಪಡಿಸಿ, ನಮಗೆ ಸನ್ಮಾನವೂ ಬೇಡ, ದಸರಾವೂ ಬೇಡ ಎಂದು ಮೈದಾನದಿಂದ ಹೊರ ನಡೆದು, ರಾಧಾಕೃಷ್ಣ ರಸ್ತೆಯಲ್ಲಿರುವ ದ್ವಾರದ ಬಳಿ ಪ್ರತಿಭಟನೆಗೆ ಮುಂದಾದಾಗಲೂ ಪೊಲೀಸರು ಬಲವಂತವಾಗಿ ಅಲ್ಲಿಂದು ಹೊರಗೆ ಕಳುಹಿಸಿದ್ದಾರೆ.

ಸುಮಾರು 4.30ರ ಸುಮಾರಿಗೆ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ಪತ್ರಕರ್ತರು ಪೌರಕಾರ್ಮಿಕರಿಗೆ ಆದ ಅವಮಾನದ ಬಗ್ಗೆ ಅಸಮಧಾನ ವ್ಯಕ್ತಪಡಿಸಿದಾಗ ಎಚ್ಚೆತ್ತ ಜಿಲ್ಲಾ ಉಸ್ತುವಾರಿ ಸಚಿವರು, ಗೇಟ್‌ನ ಹೊರಗೆ ನಿಂತಿದ್ದ ಪೌರಕಾರ್ಮಿಕರ ಬಳಿ ಹೋಗಿ, ಅವರನ್ನು ಸಮಾಧಾನ ಪಡಿಸಿ, ಸನ್ಮಾನಕ್ಕೆ ಕರೆ ತಂದಿದ್ದು, ಅಂತಿಮವಾಗಿ ಮುಖ್ಯ ವೇದಿಕೆಯಲ್ಲಿಯೇ ಪೌರಕಾರ್ಮಿಕರಿಗೆ ಅಭಿನಂದಿಸುವ ಕೆಲಸವನ್ನು ಜಿಲ್ಲಾ ಉಸ್ತುವಾರಿ ಸಚಿವರ ಡಾ.ಜಿ.ಪರಮೇಶ್ವರ್ ಮಾಡಿದ್ದಾರೆ.

Tags

Tumakuru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X