ತುಮಕೂರು | ಲಾರಿಗೆ ಕ್ರೂಸರ್ ವಾಹನ ಢಿಕ್ಕಿ : ನಾಲ್ವರು ಮೃತ್ಯು, 7 ಮಂದಿಗೆ ಗಾಯ

ತುಮಕೂರು : ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಕ್ರೂಸರ್ ವಾಹನ ಢಿಕ್ಕಿಯಾಗಿ ನಾಲ್ವರು ಮೃತಪಟ್ಟು, 7 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಕೋರಾ ಸಮೀಪದ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ನಡೆದಿದೆ.
ಮೃತರನ್ನು ಕೊಪ್ಪಳ ಜಿಲ್ಲೆಯ ನಿವಾಸಿಗಳಾದ ಸಾಕ್ಷಿ (7), ಮಾರುತಪ್ಪ, (45), ವೆಂಕಟೇಶ (30), ಗವಿಸಿದ್ದಪ್ಪ (28) ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಶ್ರೀನಿವಾಸ್, (32), ಪ್ರವೀಣ್ ಕುಮಾರ್ (28), ರಾಜಪ್ಪ (45), ಹುಲಿಗಪ್ಪ (32), ರಾಕೇಶ್ (24), ತಿರುಪತಿ (33), ಶ್ರೀನಿವಾಸ್, (32) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಅಯ್ಯಪ್ಪಸ್ವಾಮಿ ಯಾತ್ರೆ ಜೊತೆಗೆ ವಿವಿಧ ಧಾರ್ಮಿಕ ಕ್ಷೇತ್ರಗಳ ಪ್ರವಾಸ ಮುಗಿಸಿ ವಾಪಸ್ಸಾಗುವಾಗ ಬೆಳಗಿನ ಜಾವ ನಿದ್ದೆ ಮಂಪರಿನಲ್ಲಿದ್ದ ಚಾಲಕ ಹಿಂದಿನಿಂದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
Next Story





