Tumkuru | ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ತುಮಕೂರು: ಸಾಲಬಾಧೆಯಿಂದ ರೈತನೋರ್ವ ವಿಷ ಸೇವಿಸಿ ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿರಾ ತಾಲೂಕಿನ ಹುಲಿಕುಂಟೆ ಹೋಬಳಿಯ ಕೆಕೆ ಪಾಳ್ಯ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಮಹೇಶ್ ಎಂದು ಗುರುತಿಸಲಾಗಿದೆ.
ಮಹೇಶ್ ಬ್ಯಾಂಕ್ ಸಾಲ ಸೇರಿದಂತೆ ಸುಮಾರು ಐದು ಲಕ್ಷ ರೂ. ಸಾಲ ಮಾಡಿದ್ದರು ಎನ್ನಲಾಗಿದ್ದು, ಬೆಳೆ ಕೈಕೊಟ್ಟ ಪರಿಣಾಮ ಸಾಲದ ಹೊರೆ ದಿನದಿಂದ ದಿನಕ್ಕೆ ಹೆಚ್ಚಾಗಿದ್ದು, ಸಾಲಗಾರರ ಒತ್ತಡದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ.
ಈ ಸಂಬಂಧ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.
Next Story




