Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ತುಮಕೂರು
  4. Tumakur | ಜ್ಞಾನೇಶ್ ಕುಮಾರ್...

Tumakur | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ10 Oct 2026 7:09 PM IST
share
Tumakur | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

ತುಮಕೂರು : ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಮತ್ತು ಚುನಾವಣಾ ಆಯೋಗವು ಎಸ್‌ಐಆರ್ ಹೆಸರಿನಲ್ಲಿ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಮೂಲಕ ಚುನಾವಣಾ ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಟ್ಟಿವೆ ಎಂದು ಪ್ರಗತಿಪರ ಚಿಂತಕ ಕೆ.ದೊರೈರಾಜ್ ಆರೋಪಿಸಿದರು.

ಪ್ರಗತಿಪರ ಸಂಘಟನೆಗಳ ವತಿಯಿಂದ ತುಮಕೂರಿನ ಬಿಎಸ್‌ಎನ್‌ಎಲ್ ಕಚೇರಿ ಮುಂದೆ ಪ್ರಜಾಪ್ರಭುತ್ವ ವಿರೋಧಿ ಬಿಜೆಪಿ ನಡೆಯನ್ನು ಖಂಡಿಸಿ, ಎಸ್‌ಐಆರ್ ರದ್ದತಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ದೇಶದಲ್ಲಿ ಇಂದು ತುರ್ತು ಪರಿಸ್ಥಿತಿಯ ವಾತಾವರಣ ನಿರ್ಮಾಣವಾಗಿದೆ. ದೆಹಲಿಯಲ್ಲಿ ಹೋರಾಟ ನಡೆಸುತ್ತಿದ್ದ ಯುವಜನರನ್ನು ಬಂಧಿಸಿರುವುದು ಅತ್ಯಂತ ಹೇಯ ಕೃತ್ಯವಾಗಿದೆ. 56 ಇಂಚಿನ ಎದೆ ಹೊಂದಿರುವ ಧೈರ್ಯಶಾಲಿ ಎಂದು ಹೇಳಿಕೊಳ್ಳುತ್ತಿದ್ದ ಪ್ರಧಾನಿ, ಹೋರಾಟಕ್ಕೆ ಹೆದರಿ ದೆಹಲಿಯಲ್ಲಿ ವಾಹನ ಮತ್ತು ರೈಲು ಸಂಚಾರವನ್ನು ನಿರ್ಬಂಧಿಸಿದ್ದಾರೆ. ಇದು ಯುವಜನರ ಹೋರಾಟಕ್ಕೆ ಸರ್ಕಾರ ಹೆದರಿಕೊಂಡಿರುವುದನ್ನು ತೋರಿಸುತ್ತದೆ ಎಂದು ಅವರು ಹೇಳಿದರು.

ಲೇಖಕಿ ಬಾ.ಹ. ರಮಾಕುಮಾರಿ ಮಾತನಾಡಿ, ಕೇಂದ್ರ ಸರ್ಕಾರ ಎಸ್‌ಐಆರ್‌ ಅನ್ನು ರದ್ದುಗೊಳಿಸಿ, ಭಾರತದ ಎಲ್ಲ ಪ್ರಜೆಗಳಿಗೂ ಮತದಾನದ ಹಕ್ಕು ಖಚಿತಪಡಿಸಬೇಕು. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ದಿನದಿಂದಲೂ ಒಂದಲ್ಲ ಒಂದು ರೀತಿಯ ಸಮಸ್ಯೆಗಳನ್ನು ಸೃಷ್ಟಿಸಲಾಗುತ್ತಿದೆ. ಅಭಿವೃದ್ಧಿಗಿಂತ ಸಮಸ್ಯೆಗಳೇ ದೊಡ್ಡ ಪ್ರಮಾಣದಲ್ಲಿವೆ. ನ್ಯಾಯಕ್ಕಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಬಂಧಿಸಿರುವುದು ಬಿಜೆಪಿಯ ಜನವಿರೋಧಿ ಮತ್ತು ಸರ್ವಾಧಿಕಾರಿ ಆಡಳಿತವನ್ನು ಸೂಚಿಸುತ್ತದೆ ಎಂದರು.

ಸಿಪಿಎಂ ಮುಖಂಡ ಸೈಯದ್ ಮುಜೀಬ್ ಮಾತನಾಡಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರಿಯಲಿದೆ. ಬಿಜೆಪಿ ಅವರೊಂದಿಗೆ ಒಳ ಒಪ್ಪಂದ ಮಾಡಿಕೊಳ್ಳುವ ಮೂಲಕ ದೇಶದ ಪ್ರತಿಯೊಂದು ಚುನಾವಣೆಯಲ್ಲೂ ಭ್ರಷ್ಟಾಚಾರ ನಡೆಸಿದೆ ಎಂದು ಆರೋಪಿಸಿದರು. ನ್ಯಾಯ ಕೇಳುತ್ತಿರುವ ಯುವಜನರು, ರೈತರು ಮತ್ತು ಕಾರ್ಮಿಕ ನಾಯಕರನ್ನು ಬಂಧಿಸಿರುವುದು ಅತ್ಯಂತ ಹೀನಾಯ ಕೃತ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಆಡಳಿತದ ವೈಫಲ್ಯಗಳನ್ನು ಮರೆಮಾಚಲು ಜ್ಞಾನೇಶ್ ಕುಮಾರ್ ಅವರಂತಹ ಅಜ್ಞಾನಿಗಳನ್ನು ಸೃಷ್ಟಿಸಲಾಗುತ್ತಿದೆ. ದೇಶದ ಯುವಜನರು ನಿರುದ್ಯೋಗ ಸಮಸ್ಯೆ, ಬಿಜೆಪಿಯ ಭ್ರಷ್ಟಾಚಾರ ಮತ್ತು ಮತಗಳ್ಳತನದಿಂದ ರೋಸಿಹೋಗಿದ್ದಾರೆ ಎಂದು ಅವರು ಹೇಳಿದರು.

ಡಿವೈಎಫ್‌ಐ ಜಿಲ್ಲಾಧ್ಯಕ್ಷ ಈ. ಶಿವಣ್ಣ ಮಾತನಾಡಿ, ದೇಶದಲ್ಲಿ ಬೆಲೆ ಏರಿಕೆ, ನಿರುದ್ಯೋಗ ಮತ್ತು ಖಾಸಗಿ ಶಿಕ್ಷಣ ಕ್ಷೇತ್ರದಲ್ಲಿನ ಭ್ರಷ್ಟಾಚಾರದಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೇಂದ್ರ ಸರ್ಕಾರ ಈ ಸಮಸ್ಯೆಗಳತ್ತ ಗಮನ ಹರಿಸಬೇಕಿತ್ತು. ಆದರೆ, ಕಳೆದ 12 ವರ್ಷಗಳಿಂದ ಒಂದಲ್ಲ ಒಂದು ಸಮಸ್ಯೆಗಳನ್ನು ಸೃಷ್ಟಿಸುವ ಮೂಲಕ ಜನರು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತದಂತೆ ಮಾಡಿ, ಅವರನ್ನು ತಪ್ಪುದಾರಿಗೆ ಎಳೆಯಲಾಗುತ್ತಿದೆ ಎಂದು ದೂರಿದರು.

ಧಾರ್ಮಿಕತೆ ಮತ್ತು ಕೋಮುವಾದದ ಹೆಸರಿನಲ್ಲಿ ಹುಸಿ ದೇಶಪ್ರೇಮವನ್ನು ತುಂಬಿ ಜನರನ್ನು ದಿಕ್ಕು ತಪ್ಪಿಸಲಾಗುತ್ತಿದೆ. ಅಧಿಕಾರದ ವ್ಯಾಮೋಹದಿಂದ ತಾವು ಏನೇ ತಪ್ಪು ಮಾಡಿದರೂ ಜನರು ಪ್ರಶ್ನಿಸುವುದಿಲ್ಲ ಎಂಬ ಮನಸ್ಥಿತಿಯಲ್ಲಿ ಬಿಜೆಪಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದರು.

ಕೇಂದ್ರದ ಸರ್ವಾಧಿಕಾರಿ ಧೋರಣೆಯಿಂದಾಗಿ ಇಂದು ಯುವಜನರು ಬೀದಿಗಿಳಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ದೇಶದಲ್ಲಿ ನಡೆದಿರುವ ಬಹುತೇಕ ಚುನಾವಣೆಗಳು ಅಕ್ರಮ ಮತ್ತು ಭ್ರಷ್ಟಾಚಾರದಿಂದ ಕೂಡಿವೆ. ಹೇಗಾದರೂ ಮಾಡಿ ಅಧಿಕಾರ ಹಿಡಿಯಬೇಕೆಂಬ ದುರಾಸೆಯ ವಿರುದ್ಧ ದೆಹಲಿಯಲ್ಲಿ ನಡೆದ ಯುವಜನರ ಹೋರಾಟ ತಕ್ಕ ಉತ್ತರ ನೀಡಿದೆ. ಹೋರಾಟವನ್ನು ಹತ್ತಿಕ್ಕಲು ಹಲವು ರೀತಿಯ ತಂತ್ರಗಳನ್ನು ಬಳಸಲಾಗುತ್ತಿದೆ. ಇಂತಹ ಪ್ರಯತ್ನಗಳು ಹೆಚ್ಚಾದರೆ ಹೋರಾಟ ಉಗ್ರ ಸ್ವರೂಪ ಪಡೆದುಕೊಳ್ಳಬಹುದು. ಪ್ರಧಾನಿಯವರು ಹೋರಾಟಗಾರರೊಂದಿಗೆ ಮಾತುಕತೆ ನಡೆಸಿ, ಮುಖ್ಯ ಚುನಾವಣಾ ಆಯುಕ್ತರಿಂದ ರಾಜೀನಾಮೆ ಕೊಡಿಸುವುದು ಮುಖ್ಯವಾಗಿದೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎನ್.ಕೆ. ಸುಬ್ರಮಣ್ಯ, ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಬಿ. ಉಮೇಶ್, ಡಿವೈಎಫ್‌ಐ ಮಾಜಿ ಅಧ್ಯಕ್ಷ ಎಸ್. ರಾಘವೇಂದ್ರ, ಜಿಲ್ಲಾ ಕಾರ್ಯದರ್ಶಿ ಎಂ.ಜಿ. ಮಂಜುನಾಥ್, ಜೆಎಂಎಸ್ ಜಿಲ್ಲಾಧ್ಯಕ್ಷೆ ಕಲ್ಪನಾ, ಸಾಮಾಜಿಕ ಕಾರ್ಯಕರ್ತ ತಾಜುದ್ದೀನ್ ಶರೀಫ್, ಕೊಳಗೇರಿ ನಿವಾಸಿಗಳ ಸಂಘದ ಸದಸ್ಯ ಕೃಷ್ಣಮೂರ್ತಿ, ವಕೀಲ ಕಿಶೋರ್, ಎಲ್‌ಐಸಿಯ ಆನಂದಮೂರ್ತಿ ಹಾಗೂ ರೈತ ಸಂಘದ ಮುಖಂಡರು ಭಾಗವಹಿಸಿದ್ದರು.

Tags

protestTumakuruGyanesh Kumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X