ತುಮಕೂರು | ಕಂಟೈನರ್ ಲಾರಿಗೆ ಬೈಕ್ ಢಿಕ್ಕಿ; ಮೂವರು ಮೃತ್ಯು

ಸಾಂದರ್ಭಿಕ ಚಿತ್ರ
ತುಮಕೂರು : ಕಂಟೈನರ್ ಲಾರಿಗೆ ಬೈಕ್ ಢಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ತುಮಕೂರು ಗ್ರಾಮಾಂತರ ವ್ಯಾಪ್ತಿಯ ಹಿರೇಹಳ್ಳಿ ಸಮೀಪದ ನಂದಿಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಶುಕ್ರವಾರ ನಡೆದಿದೆ.
ಮೃತರನ್ನು ರಾಜೇಶ್ (25), ದನಂಜಯ್ (27), ಧನುಷ್ (23) ಎಂದು ಗುರುತಿಸಲಾಗಿದೆ. ಇವರು ದಾಬಸ್ ಪೇಟೆಯ ಖಾಸಗಿ ಕಂಪನಿಯಲ್ಲಿ ಸೆಕ್ಯೂರಿಟಿಗಳಾಗಿ ಕೆಲಸ ಮಾಡುತ್ತಿದ್ದರು.
ಬಂಕ್ನಿಂದ ಪೆಟ್ರೋಲ್ ತುಂಬಿಸಿಕೊಂಡು ಹೆದ್ದಾರಿಗೆ ಬರುತ್ತಿದ್ದ ಕಂಟೈನರ್ ಲಾರಿಗೆ ಬೈಕ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯಿಂದ ಬೈಕ್ನಲ್ಲಿ ಹೋಗುತ್ತಿದ್ದ ಮೂವರು ಮೃತಪಟ್ಟಿದ್ದಾರೆ.
ಕ್ಯಾತಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
Next Story