Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ತುಮಕೂರು
  4. ತುಮಕೂರು | ಬೆಳ್ತಂಗಡಿಯ ಮೂವರ ಹತ್ಯೆ...

ತುಮಕೂರು | ಬೆಳ್ತಂಗಡಿಯ ಮೂವರ ಹತ್ಯೆ ಪ್ರಕರಣ : ಇಬ್ಬರ ಬಂಧನ

ಪ್ರಕರಣದ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದೇನು?

ವಾರ್ತಾಭಾರತಿವಾರ್ತಾಭಾರತಿ25 March 2024 7:47 PM IST
share
ತುಮಕೂರು | ಬೆಳ್ತಂಗಡಿಯ ಮೂವರ ಹತ್ಯೆ ಪ್ರಕರಣ : ಇಬ್ಬರ ಬಂಧನ

ತುಮಕೂರು: ಕುಚ್ಚಂಗಿ ಕೆರೆ ಹತ್ತಿರ ಕಾರೊಂದರಲ್ಲಿ ಮೂವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿರುವ ಪೊಲೀಸರು, ಇನ್ನೂ ಆರು ಜನರ ಬಂಧನಕ್ಕೆ ಬಲೆ ಬೀಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್.ಕೆ.ವಿ.ತಿಳಿಸಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರ್ಚ 22ರಂದು ಮಧ್ಯಾಹ್ನ ಸುಮಾರು 1-15 ಗಂಟೆಗೆ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯ ಕುಚ್ಚಂಗಿ ಕೆರೆಯಲ್ಲಿ ಒಂದು ಕಾರಿನಲ್ಲಿ ಮೂವರು ವ್ಯಕ್ತಿಗಳ ಮೃತದೇಹಗಳು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಸಂಬಂಧ ಸ್ಥಳ ಪರಿಶೀಲಿಸಿದ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದರು.

ಸ್ಥಳದಲ್ಲಿ ದೊರೆತ ಸಾಕ್ಷ್ಯಗಳು, ಸ್ಥಳೀಯ ಮಾಹಿತಿ, ತಾಂತ್ರಿಕ ಮತ್ತು ವೈಜ್ಞಾನಿಕ ವಿಧಾನದ ಮೂಲಕ ಕೊಲೆಗೀಡಾಗಿರುವ ವ್ಯಕ್ತಿಗಳು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಇಶಾಕ್ (54 ) ಶಾಹುಲ್ ಹಮೀದ್ (45) ಸಿದ್ದೀಕ್ (34) ಎಂದು ಪತ್ತೆ ಹಚ್ಚಲಾಗಿತ್ತು.

ಪ್ರಕರಣ ಸಂಬಂಧ ಶಿರಾ ಗೇಟ್‍ನಲ್ಲಿ ವಾಸವಿರುವ ಪಾತರಾಜು (35) ಗಂಗರಾಜು (35) ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿತ್ತು. ಮೃತರು ಪಾತರಾಜನ ಜೊತೆ ಸೇರಿ ಸುಮಾರು 6-7 ತಿಂಗಳಿನಿಂದ ನಿಧಿ ಹುಡುಕುವ ಕೆಲಸ ಮಾಡುತ್ತಿದ್ದು, ಪಾತರಾಜನಿಗೆ ಸುಮಾರು 6 ಲಕ್ಷರೂ. ಹಣ ನೀಡಿದ್ದರು. ಹಣ ನೀಡಿ 6 ತಿಂಗಳು ಕಳೆದರೂ ನಿಧಿ ಹುಡುಕಿ ಕೊಟ್ಟಿಲ್ಲವಾದ್ದರಿಂದ ಹಣ ವಾಪಸ್ ಕೊಡುವಂತೆ ಇಲ್ಲವಾದರೆ ಪೊಲೀಸರಿಗೆ ದೂರು ನೀಡುವುದಾಗಿ ಮೃತರು ಎಚ್ಚರಿಸಿದ್ದರು.

ಇದರಿಂದ ಆರೋಪಿ ಪಾತರಾಜ ತನ್ನ ಪರಿಚಯದ ಗಂಗರಾಜು ಮತ್ತು ಅವನ 6 ಜನ ಸಹಚರರಾದ ಮಧುಸೂಧನ್, ನವೀನ್, ಕೃಷ್ಣ, ಗಣೇಶ, ಕಿರಣ್, ಸೈಮನ್ ಅವರನ್ನು ಸೇರಿಸಿಕೊಂಡು ಸಂಚು ರೂಪಿಸಿ, ಚಿನ್ನಕೊಡುವುದಾಗಿ ಮೂರು ಜನರನ್ನು ಬೀರನಕಲ್ಲು ಗ್ರಾಮಕ್ಕೆ ಕರೆಯಿಸಿಕೊಂಡು ಕೊಲೆ ಮಾಡಿ, ಸಾಕ್ಷ ನಾಶ ಪಡಿಸುವ ಉದ್ದೇಶದಿಂದ ಕುಚ್ಚಂಗಿ ಕೆರೆಗೆ ತಂದು ಕಾರಿನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.

ತುಮಕೂರು ಪೊಲೀಸರ ಈ ಕಾರ್ಯವನ್ನು ಕೇಂದ್ರ ವಲಯದ ಪೊಲೀಸ್ ಮಹಾನಿರೀಕ್ಷಕರಾದ ರವಿಕಾಂತೇಗೌಡ, ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ, ಐ.ಪಿ.ಎಸ್ ರವರು ಶ್ಲಾಘಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X