ತುಮಕೂರು: ಯುವತಿಯ ಬರ್ಬರ ಹತ್ಯೆ

ಸಾಂದರ್ಭಿಕ ಚಿತ್ರ
ತುಮಕೂರು: ನಗರದಲ್ಲಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ.
ತುಮಕೂರು ನಗರದ ಅಂತರಸನಹಳ್ಳಿಯ ಸೇತುವೆ ಬಳಿ ಯುವತಿಯನ್ನು ಚಾಕುವಿನಿಂದ ಇರಿದು ಬೀಕರವಾಗಿ ಕೊಲೆ ಮಾಡಲಾಗಿದೆ. ಮೃತಳ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಯುವತಿಯ ಮೃತದೇಹವನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ರವಾಣಿಸಲಾಗಿದೆ.
ಈ ಬಗ್ಗೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story