ತುಮಕೂರು | ಬೈಕ್‌ಗಳ ನಡುವೆ ಢಿಕ್ಕಿ : ಓರ್ವ ಮೃತ್ಯು, ಇಬ್ಬರಿಗೆ ಗಾಯ

ತುಮಕೂರು: ಎರಡು ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಮಧುಗಿರಿ ತಾಲೂಕಿನ ದೊಡೇರಿ ಹೋಬಳಿ ವಿರೂಪಗೊಂಡನಹಳ್ಳಿ ಕೆರೆಯ ಬಳಿ ನಡೆದಿದೆ.
ಮೃತರನ್ನು ಭೀಮನಕುಂಟೆ ನಿವಾಸಿ ದೇವರಾಜು ಎಂದು ಗುರುತಿಸಲಾಗಿದೆ.
ದೇವರಾಜು ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಕುಟುಂಬದೊಂದಿಗೆ ಮಧುಗಿರಿ ದಂಡಿನಮಾರಮ್ಮ ದೇವಿಗೆ ಪೂಜೆ ಸಲ್ಲಿಸಿ ಗ್ರಾಮಕ್ಕೆ ಹಿಂದಿರುಗುವ ವೇಳೆ ಹಿಂದಿನಿಂದ ವೇಗವಾಗಿ ಬಂದ ಬೈಕೊಂದು ಢಿಕ್ಕಿ ಹೊಡೆದಿದ್ದು, ಇದರಿಂದ ತ್ರೀವವಾಗಿ ಗಾಯಗೊಂಡಿದ್ದ ದೇವರಾಜು ಅವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ದೇವರಾಜು ಅವರ ಪತ್ನಿ ಮತ್ತು ಮಗನನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಿಂದಿನಿಂದ ಢಿಕ್ಕಿ ಹೊಡೆದ ಬೈಕ್ ಸವಾರ ಪರಾಗಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಬಡವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





