Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ತುಮಕೂರು
  4. ತುಮಕೂರು | ದಲಿತ ಬಾಲಕ ಮಲ ಹೊತ್ತ...

ತುಮಕೂರು | ದಲಿತ ಬಾಲಕ ಮಲ ಹೊತ್ತ ಪ್ರಕರಣ; ಅಟ್ರಾಸಿಟಿ ಕೇಸು ದಾಖಲಿಸಲು ಸಾಧ್ಯವಿಲ್ಲ : ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ30 Nov 2024 2:01 PM IST
share
ತುಮಕೂರು | ದಲಿತ ಬಾಲಕ ಮಲ ಹೊತ್ತ ಪ್ರಕರಣ; ಅಟ್ರಾಸಿಟಿ ಕೇಸು ದಾಖಲಿಸಲು ಸಾಧ್ಯವಿಲ್ಲ : ಜಿಲ್ಲಾಧಿಕಾರಿ

ತುಮಕೂರು : ಕೊರಟಗೆರೆ ಬಸ್ ನಿಲ್ದಾಣದಲ್ಲಿ ನಡೆದ ದಲಿತ ಬಾಲಕ ಮಲ ಹೊತ್ತ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಎಫ್‍ಐಆರ್ ದಾಖಲಾಗಿದ್ದು, ತಪ್ಪಿತಸ್ಥರು ಕೂಡ ಪರಿಶಿಷ್ಟ ಜಾತಿಗೆ ಸೇರಿರುವುದರಿಂದ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲು ಸಾಧ್ಯವಾಗಿಲ್ಲ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯಲ್ಲಿ ದಲಿತ ಮುಖಂಡರೊಬ್ಬರು ಕೊರಟಗೆರೆ ಬಸ್ ನಿಲ್ದಾಣದಲ್ಲಿ ನಡೆದ ದಲಿತ ಬಾಲಕ ಮಲ ಹೊತ್ತ ಘಟನೆಗೆ ಸಂಬಂಧಿಸಿದಂತೆ ಅಟ್ರಾಸಿಟಿ ಕೇಸು ದಾಖಲಿಸುವಂತೆ ಒತ್ತಾಯಿಸಿದಾಗ ಈ ರೀತಿ ಉತ್ತರಿಸಿದರು.

ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ತ್ರೈಮಾಸಿಕ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಗಡದವರಿಗೆ ಮೀಸಲಿಟ್ಟಿರುವ ಸ್ಮಶಾನ ಭೂಮಿಯನ್ನು ಸರ್ವೇ ಮಾಡಿ, ಸ್ಮಶಾನ ಭೂಮಿ ಒತ್ತುವರಿಯಾಗದಂತೆ ಅಗತ್ಯ ಕ್ರಮ ಕೈಗೊಂಡು ಅಭಿವೃದ್ಧಿ ಪಡಿಸಬೇಕು.ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸ್ಮಶಾನ ಭೂಮಿ ಮೀಸಲಿಡಲು ಈಗಾಗಲೇ ಸೂಚನೆ ನೀಡಲಾಗಿದ್ದು ಮುಂದಿನ ಸಭೆಯೊಳಗೆ ಸ್ಮಶಾನ ಭೂಮಿ ಅಭಿವೃದ್ಧಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ವಿವಿಧ ನಿಗಮಗಳಲ್ಲಿ ಭೂ-ಒಡೆತನ ಯೋಜನೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ನೀಡಲಾಗುವ ಭೂಮಿಯನ್ನು ಫಲಾನುಭವಿಗಳೇ ಅನುಭವಿಸುತ್ತಿರುವ ಬಗ್ಗೆ ಸ್ಥಳ ಪರಿಶೀಲನೆ ನಡೆಸಬೇಕು ಮತ್ತು ಅಂತಹ ಭೂಮಿಯನ್ನು ಮಾರಾಟ ಮಾಡದಂತೆ ಕ್ರಮ ಕೈಗೊಳ್ಳಬೇಕು ಎಂದು ವಿವಿಧ ನಿಗಮಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿರುವ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ, ವಿದ್ಯಾರ್ಥಿ ನಿಲಯಗಳ ಕುಂದು-ಕೊರತೆಗಳ ಬಗ್ಗೆ ವರದಿ ನೀಡಬೇಕು. ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಅನುದಾನವನ್ನು ಬಾಕಿ ಉಳಿಸಿಕೊಳ್ಳದೆ ಸಮರ್ಪಕ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ಪ್ರಕರಣಗಳಲ್ಲಿ ಮೃತಪಟ್ಟ ಕುಟುಂಬಗಳಿಗೆ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, 2018 ರಿಂದ ದಾಖಲಾಗಿರುವ 33 ಪ್ರಕರಣಗಳ ಪೈಕಿ 7 ಫಲಾನುಭವಿಗಳಿಗೆ ನಿಯಮಾನುಸಾರವಾಗಿ ಉದ್ಯೋಗ ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿರುವ ವಿದ್ಯಾರ್ಥಿ ನಿಲಯಗಳಿಗೆ ಹೆಚ್ಚುವರಿ ಶೌಚಾಲಯಗಳ ಬೇಡಿಕೆಯಿದ್ದು, ಶೌಚಾಲಯ ನಿರ್ಮಾಣಕ್ಕೆ ಅನುದಾನ ಒದಗಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಸಭೆಗೆ ಮಾಹಿತಿ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಮಾತನಾಡಿ, ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ ಹೆಚ್ಚಿನ ಪ್ರಕರಣಗಳು ದಾಖಲಾದರೂ ಸಹ ದೌರ್ಜನ್ಯ ತಡೆ ಕಾಯ್ದೆಯಡಿ ಸರಿಯಾದ ಸಾಕ್ಷಿಗಳಿಲ್ಲದಿರುವ ಮತ್ತು ಪ್ರಕರಣಗಳನ್ನು ಹಿಂಪಡೆಯುವುದರಿಂದ ನ್ಯಾಯಾಲಯದಲ್ಲಿ ಶಿಕ್ಷೆಯಾಗುವ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ದೌರ್ಜನ್ಯ ತಡೆ ಕಾಯ್ದೆ ಪ್ರಕರಣಗಳಲ್ಲಿ ದೂರುದಾರರು ಬಲವಾಗಿ ಪ್ರಕರಣವನ್ನು ಮುನ್ನಡೆಸಬೇಕು. ಪೊಲೀಸ್ ಇಲಾಖೆ ಮತ್ತು ನ್ಯಾಯಾಲಯ ಯಾವಾಗಲೂ ನೊಂದವರ ಪರವಾಗಿರುತ್ತದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಮಹಾನಗರ ಪಾಲಿಕೆ ಆಯುಕ್ತ ಬಿ.ವಿ.ಆಶ್ವಿಜ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸಣ್ಣಮಸಿಯಪ್ಪ, ಉಪ ವಿಭಾಗಾಧಿಕಾರಿಗಳಾದ ಗೋಟೂರು ಶಿವಪ್ಪ, ಸಪ್ತಶ್ರೀ ಹಾಗೂ ಗೌರವ್ ಕುಮಾರ್ ಶೆಟ್ಟಿ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ರಾಜಣ್ಣ, ಎ. ರಂಜನ್, ಕೆ. ಗೋವಿಂದರಾಜು, ಕೆ.ಆರ್.ಶ್ರೀಧರ, ವಸಂತ್ ಕುಮಾರ್, ಡಾ: ಮುಕುಂದ ರಾಜು ಹಾಗೂ ನಾರಾಯಣಪ್ಪ ಸೇರಿದಂತೆ ವಿವಿಧ ತಾಲ್ಲೂಕುಗಳ ತಹಶೀಲ್ದಾರ್‍ಗಳು, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X