ಉಡುಪಿ: ಎರಡು ಬೈಕ್ಗಳು ಮುಖಾಮುಖಿ ಢಿಕ್ಕಿ; ಓರ್ವ ಸವಾರ ಮೃತ್ಯು

ಸದಾನಂದ ಕರ್ಕಡ (ಒಳ ಚಿತ್ರದಲ್ಲಿ)
ಉಡುಪಿ: ಅಜ್ಜರಕಾಡು ಅಗ್ನಿಶಾಮಕ ದಳ ಠಾಣೆಯ ಸಮೀಪ ಸೋಮವಾರ ರಾತ್ರಿ ವೇಳೆ ಎರಡು ಬೈಕ್ ಗಳ ಮಧ್ಯೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಸ್ಥಳೀಯರಾದ ಸ್ಯಾಮುಯೆಲ್ ಸದಾನಂದ ಕರ್ಕಡ(59) ಎಂದು ಗುರುತಿಸಲಾಗಿದೆ. ಅತಿ ವೇಗದಿಂದ ಬಂದ ಎರಡು ಬೈಕ್ ಗಳು ಮುಖಾಮುಖಿ ಢಿಕ್ಕಿಯಾದ ಪರಿಣಾಮ ಸದಾನಂದ ರಸ್ತೆಗೆ ಬಿದ್ದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡು ಅವರು ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದು ಬಂದಿದೆ.
ಅಪಘಾತದಿಂದ ಎರಡು ಬೈಕ್ ಗಳು ಕೂಡ ಸಂಪೂರ್ಣ ನಜ್ಜುಗುಜ್ಜಾಗಿವೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂರು ರಸ್ತೆ ಸೇರುವ ಈ ಸ್ಥಳ ಅಪಘಾತ ವಲಯವಾಗಿ ಪರಿಣಮಿಸಿದೆ. ಈ ರಸ್ತೆಯಲ್ಲಿ ದ್ವಿಚಕ್ರ ವಾಹನಗಳು ನೂರರ ವೇಗದಲ್ಲಿ ಚಲಿಸುತ್ತಿದ್ದು ಯಾವುದೇ ರೀತಿಯ ವೇಗ ನಿಯಂತ್ರಕ ಇಲ್ಲದಿರುವುದರಿಂದ ಸಾಕಷ್ಟು ಅಪಘಾತಗಳು ನಡೆಯುತ್ತಿವೆ. ಈ ರಸ್ತೆಯಲ್ಲಿ ವೃದ್ಧರು ವಿದ್ಯಾರ್ಥಿಗಳು ಮಹಿಳೆಯರು ಜೀವ ಕೈಯಲ್ಲಿಟ್ಟು ನಡೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದುದರಿಂದ ಸಂಬಂಧಪಟ್ಟವರು ಈ ರಸ್ತೆಗೆ ಹಂಪ್ಸ್ ಅಳವಡಿಸುವಂತೆ ಸಾಮಾಜಿಕ ಕಾರ್ಯಕರ್ತ ಇಕ್ಬಾಲ್ ಮನ್ನಾ ಆಗ್ರಹಿಸಿದ್ದಾರೆ







