ಕಾರ್ಕಳ, ಹೆಬ್ರಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಉಡುಪಿ, ಆ.11: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವರ ವತಿಯಿಂದ ಪ್ರಸಕ್ತ ಸಾಲಿನ ಕಾರ್ಕಳ ಹಾಗೂ ಹೆಬ್ರಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಆ.17ರಂದು ಕಾರ್ಕಳ ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದ್ದು, ಭಾಗವಹಿಸುವ ಸ್ಪರ್ಧಿಗಳು ಅಂದು ಬೆಳಗ್ಗೆ 9 ಗಂಟೆಯ ಒಳಗೆ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬಹುದು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.
ಸ್ಪರ್ಧೆಗಳ ವಿವರ: ಪುರುಷರಿಗೆ-ಅಥ್ಲೆಟಿಕ್ಸ್ (100ಮೀ., 200ಮೀ., 400 ಮೀ, 800ಮೀ., 1500ಮೀ., 5000ಮೀ., ಉದ್ದಜಿಗಿತ, ಎತ್ತರಜಿಗಿತ, ಗುಂಡು ಎಸೆತ, ಟ್ರಿಪಲ್‌ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 110 ಮೀ. ಹರ್ಡಲ್ಸ್, 4*100ಮೀ. ರಿಲೇ, 4*400ಮೀ.ರಿಲೇ). ಗುಂಪು ಆಟಗಳು: ವಾಲಿಬಾಲ್, ಖೋ-ಖೋ, ಕಬಡ್ಡಿ, ಫುಟ್ಬಾಲ್ ಹಾಗೂ ಥ್ರೋಬಾಲ್ ಪಂದ್ಯಗಳು ನಡೆಯಲಿವೆ.
(ಫುಟ್‌ಬಾಲ್ ಪಂದ್ಯಾಟವು ಆಗಸ್ಟ್ 16ರಂದು ಕಾರ್ಕಳದ ಸ್ವರಾಜ್ ಮೈದಾನದಲ್ಲಿ ಬೆಳಗ್ಗೆ 9:00ರಿಂದ ನಡೆಯಲಿದೆ.)
ಮಹಿಳೆಯರಿಗೆ: ಅಥ್ಲೆಟಿಕ್ಸ್- 100ಮೀ., 200 ಮೀ., 400ಮೀ., 800 ಮೀ., 1500 ಮೀ., 3000 ಮೀ., ಉದ್ದಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್‌ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 100ಮೀ. ಹರ್ಡಲ್ಸ್, 4*100ಮೀ. ರಿಲೇ, 4*400ಮೀ.ರಿಲೇ), ಗುಂಪು ಆಟಗಳು: ವಾಲಿಬಾಲ್, ಖೋ-ಖೋ, ಕಬಡ್ಡಿ ಹಾಗೂ ಥ್ರೋಬಾಲ್ ಪಂದ್ಯಾಟ.
ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಹಾಗೂ ಗುಂಪು ಕ್ರೀಡೆಯಲ್ಲಿ ಪ್ರಥಮ ಸ್ಥಾನ ಪಡೆದ ತಂಡವು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆಯಲಿವೆ. ಸ್ಪರ್ಧೆಗೆ ಹೆಸರು ಅಥವಾ ತಂಡವನ್ನು ನೋಂದಾಯಿಸಲು ಆಗಸ್ಟ್ 14 ಕೊನೆಯ ದಿನ. ಕ್ರೀಡಾಕೂಟ ನಡೆಯುವ ದಿನ ನೋಂದಣಿಗೆ ಅವಕಾಶ ಇರುವುದಿಲ್ಲ.
ಹೆಚ್ಚಿನ ಮಾಹಿತಿಗಳಿಗಾಗಿ ಕಾರ್ಕಳ ತಾಲೂಕು ಯುವಜನ ಕ್ರೀಡಾಧಿಕಾರಿ ಮೊ.ನಂ: 9008857495 ಅನ್ನು ಸಂಪರ್ಕಿಸಬಹುದು ಎಂದು ಕಾರ್ಕಳ ತಾಲೂಕು ಯುವಜನ ಸೇವಾ ಕ್ರೀಡಾಧಿಕಾರಿಗಳ ಪ್ರಕಟಣೆ ತಿಳಿಸಿದೆ.







