Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅಪಪ್ರಚಾರಗಳ ನಡುವೆಯೂ ಯಶಸ್ವಿಯಾದ...

ಅಪಪ್ರಚಾರಗಳ ನಡುವೆಯೂ ಯಶಸ್ವಿಯಾದ ಗ್ಯಾರಂಟಿ: ವಿನಯಕುಮಾರ್ ಸೊರಕೆ

ವಾರ್ತಾಭಾರತಿವಾರ್ತಾಭಾರತಿ12 Aug 2025 8:28 PM IST
share
ಅಪಪ್ರಚಾರಗಳ ನಡುವೆಯೂ ಯಶಸ್ವಿಯಾದ ಗ್ಯಾರಂಟಿ: ವಿನಯಕುಮಾರ್ ಸೊರಕೆ

ಉಡುಪಿ, ಆ.12: ಪ್ರತಿಪಕ್ಷಗಳ ಹಾಗೂ ಕಾಂಗ್ರೆಸ್ ವಿರೋಧಿಗಳ ಅಪಪ್ರಚಾರದ ಹೊರತಾಗಿಯೂ ರಾಜ್ಯ ಕಾಂಗ್ರೆಸ್ ಸರಕಾರದ ಪಂಚ ಗ್ಯಾರಂಟಿ ಯೋಜನೆ ರಾಜ್ಯದಲ್ಲಿ ಯಶಸ್ಸನ್ನು ಕಂಡಿದೆ. ಇದು ರಾಜ್ಯದ ಆರ್ಥಿಕತೆಗೆ ಉತ್ತೇಜನವನ್ನು ನೀಡಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ, ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದ್ದಾರೆ.

ಉಡುಪಿ ಪ್ರೆಸ್ ಕ್ಲಬ್‌ನಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರದ ಗ್ಯಾರಂಟಿ ಯೋಜನೆಯಿಂದಾಗಿ ರಾಜ್ಯದ ಮಹಿಳೆಯರು ಸಬಲೀಕರಣಗೊಂಡಿದ್ದಾರೆ. ಯೋಜನೆ ನೇರವಾಗಿ ಜನರನ್ನು ತಲುಪುವುದರಿಂದ ಇದರಲ್ಲಿ ಯಾವುದೇ ಭ್ರಷ್ಟಾಚಾರಕ್ಕೆ ಅವಕಾಶವಿಲ್ಲವಾಗಿದೆ ಎಂದರು.

ಗ್ಯಾರಂಟಿ ಯೋಜನೆಗಳು ಜನರ ಆದಾಯ ಹೆಚ್ಚಿಸುವ ಕಾರ್ಯಕ್ರಮವಾಗಿತ್ತು. ಇದರ ಮೂಲಕ ಪ್ರತಿ ವರ್ಷ ಕುಟುಂಬಕ್ಕೆ ಕನಿಷ್ಠ 82,000ರೂ.ಗಳ ಆದಾಯವನ್ನು ನೀಡುವ ಯೋಜನೆ ಇದಾಗಿತ್ತು. ಈ ಮೂಲಕ ಜನರ ಹಸಿವನ್ನು ನೀಗಿಸಿ ಅವರನ್ನು ಬಡತನದ ರೇಖೆಗಿಂತ ಮೇಲಕ್ಕೇತ್ತುವ ಕಾರ್ಯಕ್ರಮ ಇದಾಗಿದ್ದು, ಇದರಲ್ಲಿ ನಾವಿಂದು ಯಶಸ್ಸು ಸಾಧಿಸಿದ್ದೇವೆ ಎಂದರು.

ಕರ್ನಾಟಕದ ಈ ಬಾರಿಯ ಬಜೆಟ್ 4.9 ಲಕ್ಷ ಕೋಟಿ ರೂ.ಗಳದಾಗಿತ್ತು. ಇದರಲ್ಲಿ 56,000 ಕೋಟಿ ರೂ.ಗಳನ್ನು ಗ್ಯಾರಂಟಿಗೆ, 18,000 ಕೋಟಿ ರೂ.ಗಳನ್ನು ರೈತರಿಗೆ ವಿವಿಧ ರೂಪದಲ್ಲಿ, 20,000 ಕೋಟಿ ರೂ.ಗಳನ್ನು ಪೆನ್ಶನ್ ಸ್ಕೀಮ್ ಸೇರಿದಂತೆ ವಿವಿಧ ಯೋಜನೆಗಳಿಗೆ ಸೇರಿದಂತೆ ಸುಮಾರು ಒಂದು ಲಕ್ಷ ಕೋಟಿ ರೂ.ಗಳನ್ನು ನೇರವಾಗಿ ಜನರಿಗೆ ತಲುಪಿಸಲಾಗುತ್ತಿದೆ. ಇನ್ನು ಒಂದು ಲಕ್ಷ ಕೋಟಿ ರೂ. ಸರಕಾರಿ ನೌಕರ ಸಂಬಳ ಹಾಗೂ ಇತರ ವೆಚ್ಚ ಗಳಿಗೆ ವ್ಯಯವಾದರೆ, ಉಳಿದ ಎರಡು ಲಕ್ಷ ಕೋಟಿ ರೂ. ರಾಜ್ಯದ ಅಭಿವೃದ್ಧಿಗೆ ಲಭ್ಯವಿದೆ ಎಂದವರು ವಿರೋಧ ಪಕ್ಷಗಳ ಆರೋಪಗಳಿಗೆ ಉತ್ತರಿಸಿದರು.

ಗ್ಯಾರಂಟಿ ಯೋಜನೆಯನ್ನು ಪ್ರಾರಂಭಿಸಿದಾಗ, ಬಿಟ್ಟಿ ಭಾಗ್ಯ, ಜನರನ್ನು ಸೋಮಾರಿಯಾಗಿಸುವ ಯೋಜನೆ ಎಂದೆಲ್ಲಾ ಟೀಕಿಸಲಾಗುತ್ತಿತ್ತು. ಮೂರು ತಿಂಗಳಲ್ಲಿ ಗ್ಯಾರಂಟಿ ಯೋಜನೆಯನ್ನು ವಿರೋಧಿಸಿ 158 ಲೇಖನಗಳು ಪ್ರಕಟಗೊಂಡಿದ್ದವು. ಆದರೆ ಇವೆಲ್ಲವೂ ಅಪಪ್ರಚಾರದ ಭಾಗ ಎಂಬುದನ್ನು ಈಗ ಜನತೆಗೆ ಮನದಟ್ಟಾಗಿದೆ ಎಂದು ಸೊರಕೆ ಹೇಳಿದರು.

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರು ಸ್ವಾವಲಂಬಿಗಳಾಗಿ ಬದುಕುವಂತಾಗಿದೆ. ಎಲ್ಲಾ ಅಪಪ್ರಚಾರ ಗಳನ್ನೂ ಮೀರಿ ಗ್ಯಾರಂಟಿ ಯೋಜನೆ ರಾಜ್ಯದಲ್ಲಿ ಯಶಸ್ವಿಯಾಗಿ, ದೇಶದ ಉಳಿದೆಲ್ಲಾ ರಾಜ್ಯಗಳಿಗೆ ಹಾಗೂ ಕೇಂದ್ರ ಸರಕಾರಕ್ಕೆ ಮಾದರಿ ಯೋಜನೆಯಾಗಿವೆ ಎಂದು ಅವರು ತಿಳಿಸಿದರು.

ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್, ಕಾಪು ಸಮಿತಿಯ ನವೀನ್‌ಚಂದ್ರ ಹಾಗೂ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X