Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಾಹಿತ್ಯವೆಂಬುದು ಮನಸ್ಸಿನ ಆಳದಿಂದ...

ಸಾಹಿತ್ಯವೆಂಬುದು ಮನಸ್ಸಿನ ಆಳದಿಂದ ಹೊರಹೊಮ್ಮುವ ಭಾವಧಾರೆ: ಡಾ. ನಾಗತಿಹಳ್ಳಿ

ವಾರ್ತಾಭಾರತಿವಾರ್ತಾಭಾರತಿ13 Aug 2025 8:23 PM IST
share
ಸಾಹಿತ್ಯವೆಂಬುದು ಮನಸ್ಸಿನ ಆಳದಿಂದ ಹೊರಹೊಮ್ಮುವ ಭಾವಧಾರೆ: ಡಾ. ನಾಗತಿಹಳ್ಳಿ
ಕ್ರಿಯೇಟಿವ್ ಪುಸ್ತಕಧಾರೆ - 2025: 22 ಕೃತಿಗಳ ಅನಾವರಣ

ಕಾರ್ಕಳ : ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಇಂದು " ಕ್ರಿಯೇಟಿವ್ ಪುಸ್ತಕ ಧಾರೆ - 2025 " ಮುಂಗಾರಿನ ಹನಿಗಳ ಜೊತೆಗೆ ಪುಟಗಳ ಪಯಣ... ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಪುಸ್ತಕಮನೆ ಪ್ರಕಾಶನದ ವತಿಯಿಂದ 22 ಕೃತಿಗಳ ಅನಾವರಣ ಕಾರ್ಯಕ್ರಮ ನಡೆಯಿತು.

ಉದ್ಘಾಟಕರಾಗಿ ಆಗಮಿಸಿದ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ. ಕೆ. ಚಿನ್ನಪ್ಪ ಗೌಡ ರವರು ತಮ್ಮ ಉದ್ಘಾಟನಾ ಭಾಷಣದಲ್ಲಿ " ಪುಸ್ತಕವೆಂದರೆ ಕೇವಲ ಅಕ್ಷರಗಳ ಸಂಗ್ರಹವಲ್ಲ. ಅದು ಕಾಲ, ಸಮಾಜ ಮತ್ತು ಮಾನವನ ಭಾವನೆಗಳ ಪ್ರತಿಬಿಂಬ. ಇಂತಹ ಕಾರ್ಯಕ್ರಮಗಳು ಓದುವ ಅಭ್ಯಾಸವನ್ನು ಪುನರುಜ್ಜೀವನಗೊಳಿಸುತ್ತವೆ" ಎಂದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಖ್ಯಾತ ಸಾಹಿತಿಗಳು ಹಾಗೂ ಚಿತ್ರ ನಿರ್ದೇಶಕರಾದ ಡಾ. ನಾಗತಿಹಳ್ಳಿ ಚಂದ್ರಶೇಖರ್ ರವರು " ಪುಸ್ತಕವೆಂದರೆ ಕೇವಲ ಹಾಳೆಗಳ ಗುಚ್ಛವಲ್ಲ. ಅದು ಕಾಲದ ಸ್ಮರಣೆ, ಸಮಾಜದ ಕನ್ನಡಿ ಮತ್ತು ಮನಸ್ಸಿನ ಆಳದಿಂದ ಹೊರ ಹೊಮ್ಮುವ ಭಾವಧಾರೆ ಮತ್ತು ಮಾನವನ ಮನಸ್ಸಿನ ನಕ್ಷೆಯೇ ಆಗಿದೆ " ಎಂದರು.

ಸಹ ಸಂಸ್ಥಾಪಕರಾದ ಅಶ್ವತ್ ಎಸ್.ಎಲ್ ರವರು ಸ್ವಾಗತಗೈಯುತ್ತಾ ತಮ್ಮ ಪ್ರಾಸ್ತಾವಿಕ ನುಡಿಗಳಲ್ಲಿ " ಲೇಖಕರು ತಮ್ಮ ವಿಚಾರಧಾರೆಯ ನದಿಗಳನ್ನು ಕೃತಿಗಳಲ್ಲಿ ಹರಿಸಿದ್ದಾರೆ. ಓದುಗರು ಅದರ ತೀರದಲ್ಲಿ ನಿಂತು ಚಿಂತನೆಗಳ ನೀರನ್ನು ಕುಡಿಯುವಂತಿದೆ. ಇಂತಹ ಸಾಹಿತ್ಯವು ಕಾಲವನ್ನು ಮೀರಿ ನೆನಪಿನ ಮಡಿಲಿನಲ್ಲಿ ಉಳಿಯುತ್ತವೆ " ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಕೊಂಡಳ್ಳಿ ಪ್ರಭಾಕರ ಶೆಟ್ಟಿ, ಸಾಹಿತಿಗಳು ಮತ್ತು , ಕ.ಸಾ.ಪ ಕಾರ್ಕಳ ಅಧ್ಯಕ್ಷ ತಾಲೂಕು ಇವರು ಮಾತನಾಡಿ " ಇಂದಿನ ಯಾಂತ್ರಿಕ ಜೀವನದಲ್ಲಿ ಓದಿನ ಮಹತ್ವವನ್ನು ಮರೆಯುತ್ತಿರು ವಾಗ, ಇಂತಹ ಪುಸ್ತಕ ಬಿಡುಗಡೆಗಳು ಸಾಹಿತ್ಯ ಪ್ರೇಮಿಗಳಿಗೆ ಹೊಸ ಚೈತನ್ಯ ತುಂಬುತ್ತವೆ " ಎಂದರು.

ಇನ್ನೋರ್ವ ಮುಖ್ಯ ಅತಿಥಿ ಡಾ. ಪ್ರದೀಪ ಕುಮಾರ ಹೆಬ್ರಿ, ಮಹಾಕಾವ್ಯಗಳ ಲೇಖಕರು, ಮಂಡ್ಯ ಇವರು ಮಾತನಾ ಡುತ್ತಾ " ಪುಸ್ತಕದ ಜೀವನ ಅದರ ಓದುಗರ ಕೈಯಲ್ಲಿ ಪ್ರಾರಂಭವಾಗುತ್ತದೆ. ಉಳಿಸಿ ಬೆಳೆಸಬೇಕಾದದ್ದು ಸಹೃದ ಯರ ಕರ್ತವ್ಯ" ಎಂದು ಹೇಳಿದರು. ಕಥೆಗಳ ಮೂಲಕ ಸಭಾಸದರ ಗಮನ ಸೆಳೆದರು.

ಸಭಾಧ್ಯಕ್ಷತೆಯನ್ನು ವಹಿಸಿದ ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ರವರು ತಮ್ಮ ಅಧ್ಯಕ್ಷೀಯ ಭಾಷಣ ದಲ್ಲಿ " ಸಾಹಿತ್ಯವು ಜನರ ಬದುಕಿಗೆ ಕನ್ನಡಿಯಂತೆ. ಓದುಗರು ಪುಸ್ತಕದಿಂದ ಕಥೆಗಳನ್ನು ಮಾತ್ರವಲ್ಲ, ಬದುಕಿನ ಮೌಲ್ಯಗಳನ್ನು, ಸಂಬಂಧಗಳ ಅರ್ಥವನ್ನು, ಮನುಷ್ಯತ್ವದ ಸಾರವನ್ನು ಪಡೆದುಕೊಳ್ಳುತ್ತಾರೆ " ಎಂದರು.

ಕ್ರಿಯೇಟಿವ್ ಪುಸ್ತಕ ಮನೆಯ ವತಿಯಿಂದ ಡಾ. ನಾಗತಿಹಳ್ಳಿ, ಡಾ.ಕೆ.ಚಿನ್ನಪ್ಪ ಗೌಡ ಹಾಗೂ 22 ಕೃತಿಗಳ ಕರ್ತೃಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಅನಾವರಣಗೊಂಡಿರುವ ಕೃತಿಗಳು

ಯಾತ್ರೆ - ಚಂದ್ರಕಾಂತ ಪೋಕಳೆ

ವಿಜ್ಞಾನ ಕೌತುಕಗಳ ಮಹಾಯಾನ - ಎಲ್. ಪಿ ಕುಲಕರ್ಣಿ

ಹರ್ಷ ರಾಗ - ಪೌಝಿಯಾ ಸಲೀಂ

ಹಿತಶತ್ರು - ಪದ್ಮಲತಾ ಮೋಹನ್

ಪುಟ್ಟ ದೇವರ ಕಣ್ಣೀರು - ಸದಾಶಿವ ಸೊರಟೂರು

ಬದುಕು ಮಾಯೆಯ ಮಾಟ - ಕುಮಾರಸ್ವಾಮಿ ತೆಕ್ಕುಂಜ

ಕಾವ್ಯ ಧ್ಯಾನ - ನಾಗೇಶ್ ಜೆ. ನಾಯಕ

ನಿನಗೆ ನೀನೇ ಬೆಳಕು - ಪ್ರಜ್ವಲಾ ಶೆಣೈ

ನಿನ್ನ ಇಚ್ಛೆಯಂತೆ ನಡೆವೆ - ಮನು ಗುರುಸ್ವಾಮಿ

ಕಣ್ಣ ಬಾಗಿಲಿಗೆ ಬಂದ ನೀರು - ಸಂತೆಬೆನ್ನೂರು ಫೈಜ್ನಟರಾಜ್

ಸ್ವಾತಿ ಬೊಂಬಾಟ್ - ಎಂ.ಮನೋಹರ ಪೈ

ಗ್ಯಾಂಗ್ ಸ್ಟರ್ ಮತ್ತು ಅವಳು - ಮಂಜುನಾಥ್ ಕುಂಬಾರ್

ಇದೊಳ್ಳೆ ವರಸೆ - ಸಂದೇಶ್ ಎಚ್. ನಾಯ್ಕ್

ಮಾಂಡವ್ಯ ದೀಪ - ಡಾ. ಪ್ರದೀಪ ಕುಮಾರ ಹೆಬ್ರಿ

ಬೆಳ್ದೀಪ - ಡಾ. ಪ್ರದೀಪ ಕುಮಾರ ಹೆಬ್ರಿ

ನಿಲುಕದ ನಕ್ಷತ್ರ - ಡಾ. ಸುಮತಿ ಪಿ.

ಸಿಹಿಜೀವಿ ಕಂಡ ಅಂಡಮಾನ್ - ಸಿಹಿಜೀವಿ ಸಿ.ಜಿ ವೆಂಕಟೇಶ್ವರ

ಅನುಭವ ದೀಪ್ತಿ - ಶುಭಲಕ್ಷ್ಮಿ ಆರ್. ನಾಯಕ್

ಈ ಪಯಣದಲ್ಲಿ - ಶ್ಯಾಮಲಾ ಗೋಪಿನಾಥ್

ಸಂಗೀತ ಶರಧಿ - ರಾಜೇಂದ್ರ ಭಟ್. ಕೆ.

ಅಸಂಗತ - ಅಕ್ಷತಾ ರಾಜ್ ಪೆರ್ಲ

ವಿಜ್ಞಾನ ವಿಶಾರದರು - ಎಲ್‌.ಪಿ ಕುಲಕರ್ಣಿ

ಸಂವಾದ ಕಾರ್ಯಕ್ರಮ: ಅಪರಾಹ್ನ 2. 30 ರಿಂದ ನಾಗತಿಹಳ್ಳಿ ಚಂದ್ರಶೇಖರ ಅವರ ಚಲನಚಿತ್ರಗಳಲ್ಲಿ ಬಳಸಿ ರುವ ಭಾವಗೀತೆಗಳ ಗಾಯನದ ಜೊತೆಗೆ ಸಂವಾದ ಕಾರ್ಯಕ್ರಮ ನಡೆಯಿತು. ಖ್ಯಾತ ನಿರೂಪಕರಾದ ಅವಿನಾಶ್ ಕಾಮತ್ ರವರು ಸಂವಾದ ಕಾರ್ಯಕ್ರಮ ನಿರ್ವಹಿಸಿಕೊಟ್ಟರು.

ಜೀ ಸರಿಗಮಪ ಮತ್ತು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಖ್ಯಾತಿಯ ಯಶವಂತ್ ಎಂ.ಜಿ ಇವರಿಂದ ಗೀತೆಗಳ ಗಾಯನ ಕಾರ್ಯಕ್ರಮ ನಡೆಯಿತು.

ಸಹ ಸಂಸ್ಥಾಪಕರಾದ ಅಮೃತ್ ರೈ, ಗಣನಾಥ ಶೆಟ್ಟಿ ಬಿ, ಗಣಪತಿ ಭಟ್ ಕೆ.ಎಸ್, ವಿಮಲ್ ರಾಜ್.ಜಿ, ಆದರ್ಶ ಎಂ.ಕೆ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಉಪನ್ಯಾಸಕ ಉಪನ್ಯಾಸಕೇತರ ವರ್ಗದವರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗಿಗಳಾಗಿದ್ದರು. ಜೀವಶಾಸ್ತ್ರ ವಿಭಾಗ ಮುಖ್ಯಸ್ಥರಾದ ಲೋಹಿತ್ ಎಸ್.ಕೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.






share
ವಾರ್ತಾಭಾರತಿ
ವಾರ್ತಾಭಾರತಿ
Next Story
X