ಅರೆಕಾಲಿಕ ಶಿಕ್ಷಕರ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ, ಆ.13: ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧೀನದಲ್ಲಿರುವ ನಗರದ ನಿಟ್ಟೂರಿನ ಸರ್ಕಾರಿ ಬಾಲಕಿಯರ ಬಾಲಮಂದಿರ ಹಾಗೂ ಕುಂಜಿಬೆಟ್ಟುನ ಸರಕಾರಿ ಬಾಲಕರ ಬಾಲಮಂದಿರ ಸಂಸ್ಥೆಯಲ್ಲಿ ಗೌರವಧನ ಆಧಾರದಲ್ಲಿ 8, 9 ಹಾಗೂ 10ನೇ ತರಗತಿ ಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಗಣಿತ ಮತ್ತು ವಿಜ್ಞಾನ ಟ್ಯೂಷನ್ ಪಾಠ ಮಾಡುವ ಅರೆಕಾಲಿಕ ಶಿಕ್ಷಕರ ನೇಮಕಾತಿಗಾಗಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 22 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬಿ ಬ್ಲಾಕ್, ಒಂದನೇ ಮಹಡಿ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಅಥವಾ ದೂರವಾಣಿ ಸಂಖ್ಯೆ:0820-2574964ನ್ನು ಸಂಪರ್ಕಿ ಸಬಹುದು. ಸ್ಥಳೀಯರಿಗೆ ಪ್ರಥಮ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Next Story





