ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆ ಸಂಸ್ಥಾಪಕರ ದಿನಾಚರಣೆ

ಉಡುಪಿ, ಆ.16: ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆಯ ವತಿಯಿಂದ ನೇಜಾರಿನ ಅಲ್-ಫುರ್ಖಾನ್ ವಿಶೇಷ ಮಕ್ಕಳ ಶಾಲೆಯಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆಯ ಸಂಸ್ಥಾಪಕರ ದಿನಾಚರಣೆ ಮತ್ತು ಸ್ವಾತಂತ್ರ್ಯೋತ್ಸವ ವನ್ನು ಶುಕ್ರವಾರ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲೆಯ ವಿಶೇಷ ಮಕ್ಕಳು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆಯ ಅಧ್ಯಕ್ಷ ಚಾರ್ಲ್ಸ್ ಅಂಬ್ಲರ್ ಮಾತನಾಡಿದರು. ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆಯ ಮಾಜಿ ಅಧ್ಯಕ್ಷ ಖತೀಬ್ ಅಬ್ದುಲ್ ರಶೀದ್ ಶಾಲೆಯ ಎಲ್ಲಾ ಮಕ್ಕಳಿಗೆ ಉಡುಗೊರೆ ಗಳನ್ನು ವಿತರಿಸಿದರು.
ವೇದಿಕೆಯಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆಯ ಸ್ಥಾಪಕಾಧ್ಯಕ್ಷ ಬೈಕಾಡಿ ಹುಸೇನ್ ಸಾಹೆಬ್, ನಿಕಟಪೂರ್ವ ಅಧ್ಯಕ್ಷ ಇಸ್ಮಾಯಿಲ್ ಹುಸೈನ್ ಕಟ್ಪಾಡಿ, ಕಾರ್ಯದರ್ಶಿ ಟಿ.ಎಂ.ಝಫ್ರುಲ್ಲಾ, ಕೋಶಾಧಿಕಾರಿ ಸಯ್ಯದ್ ಎಂ.ಎಸ್. ಖಾನ್, ಸಂಪರ್ಕ ಪತ್ರಿಕೆಯ ಸಂಪಾದಕ ಜೆರಾಲ್ಡ್ ಪಿಂಟೊ, ವೇದಿಕೆಯ ಪದಾಧಿಕಾರಿಗಳು, ಸದಸ್ಯರು ಮತ್ತು ಶಾಲೆಯ ಅಧ್ಯಾಪಕರು ಹಾಗೂ ಪೋಷಕರು ಉಪಸ್ಥಿತರಿದ್ದರು. ಶಾಲೆಯ ಪೋಷಕ ದಿಲ್ದಾರ್ ಫಝ್ಲುರ‌್ರಹ್ಮಾನ್ ಸ್ವಾಗತಿಸಿದರು.





