Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಯಕ್ಷಗಾನ ಮೇಳಗಳನ್ನು ನಡೆಸುವುದು ಸವಾಲಿನ...

ಯಕ್ಷಗಾನ ಮೇಳಗಳನ್ನು ನಡೆಸುವುದು ಸವಾಲಿನ ಕೆಲಸ: ತಲ್ಲೂರು

ವಾರ್ತಾಭಾರತಿವಾರ್ತಾಭಾರತಿ18 Aug 2025 6:08 PM IST
share
ಯಕ್ಷಗಾನ ಮೇಳಗಳನ್ನು ನಡೆಸುವುದು ಸವಾಲಿನ ಕೆಲಸ: ತಲ್ಲೂರು

ಉಡುಪಿ, ಆ.18: ಯಕ್ಷಗಾನವನ್ನು ನಾವು ಕೂತು ಚೆನ್ನಾಗಿ ಆಸ್ವಾದಿಸ ಬಹುದು ಮತ್ತು ಬೇಕಾಬಿಟ್ಟಿ ಟೀಕೆ ಕೂಡಾ ಮಾಡಬಹುದು. ಆದರೆ ಮೇಳಗಳನ್ನು ನಡೆಸುವುದು ಅಷ್ಟು ಸುಲಭದ ಕೆಲಸವಲ್ಲ. ಇದೊಂದು ಸವಾಲಿನ ಕೆಲಸ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದ್ದಾರೆ.

ಕುಂದಾಪುರ ದ್ಯುತಿಪರ್ವ ಯಕ್ಷ ಟ್ರಸ್ಟ್ ಹಾಗೂ ಕೋಟೇಶ್ವರ ನಮ್ಮ ಕಲಾಕೇಂದ್ರದ ಜಂಟಿ ಆಶ್ರಯದಲ್ಲಿ ಶ್ರೀಹಟ್ಟಿಯಂಗಡಿ ಮೇಳದ ತಿರುಗಾಟದ ದಶಮಾನೋತ್ಸವದ ಅಂಗವಾಗಿ ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಶನಿವಾರ ಹಮ್ಮಿಕೊಳ್ಳಲಾದ ಧ್ವಜಪುರ ಯಕ್ಷೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಕಲೆ ಉಳಿಯಬೇಕಾದರೆ ಪ್ರೇಕ್ಷಕರು ಬೇಕು. ಪ್ರೇಕ್ಷಕರು ಯಕ್ಷಗಾನಕ್ಕೆ ಬರಬೇಕಾದರೆ ಅಂತಹ ಗುಣಮಟ್ಟದ ಕಾರ್ಯ ಕ್ರಮಗಳು, ಕಲಾವಿದರು ಇರಬೇಕು. ಹಾಸನ, ಮಂಡ್ಯ ಮೊದಲಾದ ಭಾಗದ ಮೂಡಲಪಾಯ ಯಕ್ಷಗಾನದ ಪರಿಸ್ಥಿತಿಯನ್ನು ನೋಡಿದಾಗ ನಮ್ಮ ಪಡುವಲಪಾಯ ಯಕ್ಷಗಾನ ಎಷ್ಟೋ ಮುಂದಿದೆ. ಅಂದರೆ ಇಲ್ಲಿ ಒಳ್ಳೆಯ ಸಂಘಟನೆಗಳಿವೆ, ಮೇಳಗಳಿವೆ. ಯಕ್ಷಗಾನಕ್ಕೆ ದೇವಳ, ದಾನಿಗಳ ಪ್ರೋತ್ಸಾಹವೂ ದೊರೆಯುತ್ತಿದೆ. ವಿದ್ಯಾವಂತ ಕಲಾವಿದರು ಬಂದು ಕಲೆಯನ್ನು ಗಟ್ಟಿ ಗೊಳಿಸುತ್ತಿದ್ದಾರೆ ಎಂದರು.

ಅಧ್ಯಕ್ಷತೆಯನ್ನು ಶ್ರೀಕೋಟಿಲಿಂಗೇಶ್ವರ ದೇವಳದ ಆಡಳಿತ ಧರ್ಮದರ್ಶಿ ಗೋಪಾಲಕೃಷ್ಣ ಶೆಟ್ಟಿ ಮಾರ್ಕೋಡು ವಹಿಸಿದ್ದರು. ಕೊಲ್ಲೂರು ದೇವಳದ ಮಾಜಿ ಧರ್ಮದರ್ಶಿ ಕೃಷ್ಣಪ್ರಸಾದ್ ಅಡ್ಯಂತಾಯ, ಸಂಗೀತ ವಿದ್ವಾನ್ ಪಾಡಿರ್ಗಾ ಲಕ್ಷ್ಮೀನಾರಾಯಣ ಉಪಾಧ್ಯ, ವಕೀಲ ಅಶೋಕ್ ಶೆಟ್ಟಿ ಹಂದಕುಟದ, ಉದ್ಯಮಿಗಳಾದ ರಾಜೇಶ್ ಕಾವೇರಿ, ಮಾರ್ಕೋಡು ಸುಬ್ಬಣ್ಣ ಶೆಟ್ಟಿ ಉಪಸ್ಥಿತರಿದ್ದರು.

ಹಟ್ಟಿಯಂಗಡಿ ಮೇಳ ರಂಜಿತ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

‘ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವುದು ಕೇವಲ ಅಕಾಡೆಮಿಯ ಕೆಲಸವಲ್ಲ, ಅದಕ್ಕೆ ನಮ್ಮ ನಿಮ್ಮೆಲ್ಲರ ನೆರವು ಅಗತ್ಯ. ಪ್ರಮುಖವಾಗಿ ಮಕ್ಕಳಿಗೆ ಯಕ್ಷಗಾನವನ್ನು ದಾಟಿಸಬೇಕು. ಇದು ಅವರಲ್ಲಿ ನೈತಿಕ ಪ್ರಜ್ಞೆಯನ್ನು ಮೂಡಿಸುತ್ತದೆ. ಮಾತ್ರವಲ್ಲ, ಭವಿಷ್ಯದಲ್ಲಿ ಕಲಾವಿದರು, ಪ್ರೇಕ್ಷಕರ ಕೊರತೆಯಾಗದು. ಈ ನಿಟ್ಟಿನಲ್ಲಿ ಇದೀಗ ಉಡುಪಿಯ ಶಾಲಾ ಮಕ್ಕಳಿಗೆ ಯಕ್ಷ ಶಿಕ್ಷಣ ಹಾಗೂ ರಂಗಶಿಕ್ಷಣ ತರಬೇತಿ ನೀಡುತ್ತಿರುವುದು ನೈತಿಕ ಸಮಾಜ ನಿರ್ಮಾಣಕ್ಕೆ ಹಾಕಿರುವ ಭದ್ರ ತಳಹದಿಯಾಗಿದೆ’

-ತಲ್ಲೂರು ಶಿವರಾಮ ಶೆಟಿ, ಅಧ್ಯಕ್ಷರು, ಕರ್ನಾಟಕ ಯಕ್ಷಗಾನ ಅಕಾಡೆಮಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X