Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬಾಲ್ಯವಿವಾಹ ನಿಷೇಧ ಕಾಯ್ದೆಯನ್ನು...

ಬಾಲ್ಯವಿವಾಹ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ: ಪೊಲೀಸ್ ಉಪಾಧೀಕ್ಷಕ ಡಿ.ಟಿ ಪ್ರಭು

ವಾರ್ತಾಭಾರತಿವಾರ್ತಾಭಾರತಿ19 Aug 2025 8:26 PM IST
share
ಬಾಲ್ಯವಿವಾಹ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ: ಪೊಲೀಸ್ ಉಪಾಧೀಕ್ಷಕ ಡಿ.ಟಿ ಪ್ರಭು

ಉಡುಪಿ: ಸಾಮಾಜಿಕ ಪಿಡುಗೆನಿಸಿರುವ ಬಾಲ್ಯವಿವಾಹ ಪದ್ಧತಿ ಯನ್ನು ಸಮಾಜದಿಂದ ನಿರ್ಮೂಲನೆಗೊಳಿಸಲು ಜಾರಿಗೊಳಿಸಲಾಗಿರುವ ಎಲ್ಲಾ ಕಾಯಿದೆ- ಕಾನೂನುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸುವುದು ಪ್ರತಿಯೊಬ್ಬ ಅಧಿಕಾರಿ ಆದ್ಯ ಕರ್ತವ್ಯ ಎಂದು ಉಪ ಪೊಲೀಸ್ ಅಧೀಕ್ಷಕ ಪ್ರಭು ಡಿ.ಟಿ ಹೇಳಿದ್ದಾರೆ.

ಮಣಿಪಾಲ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್.ಆಚಾರ್ಯ ಸಭಾಂಗಣ ದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಇವರ ಸಹಯೋಗದಲ್ಲಿ ಆಯೋಜಿಸಲಾದ ಬಾಲ್ಯವಿವಾಹ ನಿಷೇಧ ಹಾಗೂ ಮಕ್ಕಳ ಸಂಬಂಧಿತ ಕಾನೂನುಗಳ ಬಗ್ಗೆ ಜಿಲ್ಲಾ ಮಟ್ಟದ ಮಾಸ್ಟರ್ ತರಬೇತುದಾರ ರಿಗೆ ನಡೆಯುವ ಎರಡು ದಿನದ ತರಬೇತಿ ಕಾರ್ಯಾಗಾರವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಬಾಲ್ಯ ವಿವಾಹ ಪದ್ಧತಿ ಬಹು ಹಿಂದಿನ ಕಾಲದಿಂದಲೂ ಭಾರತದಲ್ಲಿ ನಡೆದು ಬಂದಿರುವ ಅನಿಷ್ಠ ಪದ್ಧತಿ. ಇದು ಹೆಚ್ಚಾಗಿ ಗ್ರಾಮೀಣ ಪ್ರದೇಶ ಗಳಲ್ಲಿರುವ ಅನಕ್ಷರಸ್ಥ ಪೋಷಕರು ತಮ್ಮ ಸಾಮಾಜಿಕ ಜವಾಬ್ದಾರಿಗಳನ್ನು ಕಳೆದು ಕೊಳ್ಳಲು, ವಯಸ್ಸಾದ ಹಿರಿಯರು ತಮ್ಮ ಮೊಮ್ಮಕ್ಕಳ ವಿವಾಹವನ್ನು ನೋಡಬೇಕೆಂಬ ಹಂಬಲ, ಆರ್ಥಿಕ ಮುಗ್ಗಟ್ಟು ಸೇರಿದಂತೆ ವಿವಿಧ ಕಾರಣ ಗಳಿಂದ ಈಗಲೂ ಮುಂದುವರಿದುಕೊಂಡು ಬಂದಿದೆ ಎಂದು ವಿವರಿಸಿದರು.

ವಿವಿಧ ಕಾರಣಗಳಿಂದ ಹೆತ್ತವರು ತಮ್ಮ ಅಪ್ರಾಪ್ತ ಹೆಣ್ಣು ಮಕ್ಕಳನ್ನು ಬಾಲ್ಯವಿವಾಹ ಮಾಡಲು ಮುಂದಾಗುತ್ತಿದ್ದರು. ನಾಗರಿಕತೆ ಬೆಳೆದಂತೆ, ಶಿಕ್ಷಣ ಪಡೆಯುವವರ ಸಂಖ್ಯೆ ಹೆಚ್ಚಾಗಿರುವುದರಿಂದ ಪ್ರಸ್ತುತ ಬಾಲ್ಯ ವಿವಾಹದ ಪ್ರಕರಣ ಗಳ ಸಂಖ್ಯೆ ಕಡಿಮೆಯಾಗಿದೆ. ಆದರೆ ಸಮಾಜದಲ್ಲಿ ಅದು ಸಂಪೂರ್ಣವಾಗಿ ನಿರ್ನಾಮವಾಗಿಲ್ಲ ಎಂದರು.

ಮಕ್ಕಳ ರಕ್ಷಣೆಗಾಗಿ ಇರುವ ಕಾನೂನುಗಳನ್ನು ಸಮರ್ಪಕವಾಗಿ ಅನುಷ್ಠಾನ ಗೊಳಿಸಲು ಎಲ್ಲಾ ಇಲಾಖೆಯ ಅಧಿಕಾರಿಗಳು ಸಕ್ರಿಯವಾಗಿ ಕಾರ್ಯ ನಿರ್ವಸುವ ಮೂಲಕ ಬಾಲ್ಯವಿವಾಹದಂಥ ಪದ್ಧತಿಯನ್ನು ಸಂಪೂರ್ಣವಾಗಿ ತಡೆಗಟ್ಟಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಮಾತನಾಡಿ, ದುರ್ಬಲರ ಹಾಗೂ ಅಶಕ್ತರ ರಕ್ಷಣೆ ಮಾಡುವುದು ಸರಕಾರದ ಉದ್ದೇಶವಾಗಿದೆ. ಮಕ್ಕಳು, ಮಹಿಳೆಯರೂ ಅದರಲ್ಲೂ ಮುಖ್ಯ ವಾಗಿ ತಾರತಮ್ಯಕ್ಕೆ ಒಳಗಾಗುವ ಹೆಣ್ಣು ಮಕ್ಕಳ ರಕ್ಷಣೆಗೆ ಸರಕಾರದೊಂದಿಗೆ ನಾಗರಿಕ ಸಮಾಜವೂ ಕೈಜೋಡಿಸಬೇಕು ಎಂದರು.

ಸಮಾಜದಲ್ಲಿ ಇಂದಿಗೂ ಸಹ ಲಿಂಗಾನುಪಾತದಲ್ಲಿ ವ್ಯತ್ಯಾಸ ಕಂಡು ಬರುತ್ತಿದೆ. ಗಂಡು ಮಕ್ಕಳಿಗೆ ಹೋಲಿಸಿದ್ದಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ ಇದೆ. ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಬಾಲ್ಯ ವಿವಾಹ ಮಾಡಿದಲ್ಲಿ ಅವರುಗಳಲ್ಲಿ ಬೌದ್ಧಿಕ, ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯಕ್ಕಿಂತಲೂ ಹೆಚ್ಚಿನ ಜವಾಬ್ದಾರಿಯನ್ನು ಹೊಂದುವಂತೆ ಮಾಡಲಾಗುತ್ತದೆ. ಇದರಿಂದಾಗಿ ಮಕ್ಕಳು ತಮ್ಮ ಬಾಲ್ಯಾವಸ್ಥೆಯನ್ನು ಅನುಭವಿಸಲು ಹಾಗೂ ಶಿಕ್ಷಣದಿಂದ ವಂಚಿತರಾ ಗುತ್ತಾರೆ. ಇದು ತಪ್ಪಬೇಕು. ಮೊದಲು ಅವರಿಗೆ ಶಿಕ್ಷಣ ಪಡೆಯಲು ಅವಕಾಶ ನೀಡಬೇಕು ಎಂದರು.

ಇದೇ ಸಂದರ್ಭ ಬದಲಾವಣೆಗೊಂಡ ನೂತನ ಚೈಲ್ಡ್‌ಲೈನ್ ಲೋಗೋ, ಮಿಷನ್ ವಾತ್ಸಲ್ಯ ಮಾರ್ಗಸೂಚಿ ಅನ್ವಯ ಮಕ್ಕಳ ಸುರಕ್ಷಿತ ಸ್ಪರ್ಶ ಹಾಗೂ ಅಸುರಕ್ಷಿತ ಸ್ಪರ್ಶ ಕುರಿತ ಪೋಸ್ಟರ್ಸ್‌ಗಳನ್ನು ಬಿಡುಗಡೆ ಗೊಳಿಸಲಾಯಿತು.

ಯುನಿಸೆಫ್ ಪ್ರಾದೇಶಿಕ ಸಂಯೋಜಕರಾದ ಡಾ. ಕೊಣಿಲ ರಾಘವೇಂದ್ರ ಹಾಗೂ ಹರೀಶ್ ಜೋಗಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್ ಖಾದರಳ್ಳಿ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ಜೂ ದಾಮೋದರ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲ ಸಿ.ಕೆ, ಮಾಸ್ಟರ್ ಟ್ರೈನರ್‌ಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಮಕ್ಕಳ ಸಹಾಯವಾಣಿ ಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್ ಸ್ವಾಗತಿಸಿ, ಸುರಕ್ಷಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X