ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಆ.20: ಮೀನುಗಾರಿಕಾ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯ ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಟಾನಗೊಳಿಸಲು ಘಟಕವಾರು/ವರ್ಗವಾರು ಗುರಿಗಳನ್ನು ನಿಗದಿಪಡಿಸಲಾಗಿದೆ. ಯೋಜನೆಯನ್ನು ಪಾರದರ್ಶಕವಾಗಿ ಅನುಷ್ಟಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಘಟಕಗಳ ವಿವರ: ಪಚ್ಚಿಲೆ ಕೃಷಿ (ಮಸೆಲ್ಸ್, ಕಲ್ಲ, ಕ್ಲಾಮ್ಸ್, ಮುತ್ತು ಇತ್ಯಾದಿ), ಸಾಂಪ್ರದಾಯಿಕ ಮೀನುಗಾರರಿಗೆ (ಬದಲಿ) ದೋಣಿ ಮತ್ತು ಬಲೆ ಒದಗಿಸುವುದು ಹಾಗೂ ಐಸ್ ಪ್ಲಾಂಟ್ / ಕೋಲ್ಡ್ ಸ್ಟೋರೇಜ್ ಆಧುನೀಕರಣಕ್ಕೆ ಸಹಾಯಧನ ನೀಡಲಾಗುವುದು.
ಆಸಕ್ತರು ಅರ್ಜಿ ಸಲ್ಲಿಸಲು ಸೆಪ್ಟಂಬರ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಮೀನುಗಾರಿಕೆ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
Next Story





