Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ...

ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಣೆಗೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ22 Aug 2025 9:22 PM IST
share
ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಣೆಗೆ ಸೂಚನೆ

ಉಡುಪಿ: ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬ ಸಮೀಪಿಸುತ್ತಿದ್ದು, ಈ ಸಂದರ್ಭ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಓಪಿ) ಮತ್ತು ಕೃತಕ ಬಣ್ಣದ ವಿಗ್ರಹಗಳನ್ನು ಕೆರೆ, ಬಾವಿ ಹಾಗೂ ಇನ್ನಿತರ ನೈಸರ್ಗಿಕ ಜಲಮೂಲಗಳಲ್ಲಿ ವಿಸರ್ಜಿಸುವುದರಿಂದ ನೈಸರ್ಗಿಕ ಜಲಮೂಲಗಳು ಕಲುಷಿತಗೊಂಡು ಅವುಗಳ ಭೌತಿಕ ಹಾಗೂ ರಾಸಾಯನಿಕ ಸ್ಥಿತಿಗಳ ಬದಲಾವಣೆಯಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆಯೊಂದಿಗೆ ಪ್ರಾಣಿ, ಪಕ್ಷಿ ಹಾಗೂ ಇತರೇ ಜಲಚರಗಳ ಜೀವಕ್ಕೆ ಅಪಾಯವಾಗುವ ಸಾಧ್ಯತೆಯೂ ಇರುತ್ತದೆ.

ಅಲ್ಲದೇ ಇಂತಹ ಕಲುಷಿತ ನೀರಿನಿಂದ ಸಾರ್ವಜನಿಕ ಆರೋಗ್ಯಕ್ಕೂ ಹಾನಿ ಉಂಟಾಗುತ್ತದೆ. ಹೀಗಾಗಿ ಉಚ್ಛ ನ್ಯಾಯಾಲಯದ ಆದೇಶದಂತೆ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುತ್ತೋಲೆಯಂತೆ ಹಬ್ಬದ ಆಚರಣೆಯಿಂದ ಉಂಟಾಗುವ ಮಾಲಿನ್ಯದಿಂದ ನೈಸರ್ಗಿಕ ಜಲ ಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ಗೌರಿ ಮತ್ತು ಗಣೇಶ ವಿಗ್ರಹಗಳನ್ನು ರಾಜ್ಯದ ಯಾವುದೇ ಕೆರೆ, ಬಾವಿ ಕಟ್ಟೆ ಮತ್ತು ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದ್ದಾರೆ.

ಆದ್ದರಿಂದ ಸಾರ್ವಜನಿಕರು ಈ ಕೆಳಕಂಡ ಕ್ರಮಗಳನ್ನು ಅನುಸರಿಸಿ ಪರಿಸರಸ್ನೇಹಿ ಗೌರಿಗಣೇಶ ಹಬ್ಬವನ್ನು ಆಚರಿಸಿ ನೈಸರ್ಗಿಕ ಜಲ ಸಂಪನ್ಮೂಲ ಗಳನ್ನು ಸಂರಕ್ಷಿಸಲು ಸಹಕರಿಸುವಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚಿಸಿವೆ.

ಉಚ್ಚ ನ್ಯಾಯಾಲಯದ ಆದೇಶದಂತೆ ಈಗಾಗಲೇ ಪ್ಲಾಸ್ಟರ್ ಆಫ್ ಪ್ಯಾರಿಸ್ ವಿಗ್ರಹಗಳ ತಯಾರಿಕೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದ್ದು, ಪಿಓಪಿ ವಿಗ್ರಹಗಳನ್ನು ಅನಧಿಕೃತವಾಗಿ ತಯಾರಿ/ ಮಾರಾಟ ಮಾಡುವ ವ್ಯಕ್ತಿ/ ಸಂಸ್ಥೆಗಳ ಮೇಲೆ ಕಾನೂನು ಕ್ರಮವನ್ನು ತಕ್ಷಣ ಜರುಗಿಸಲಾಗುವುದು. ಪ್ಲಾಸ್ಟರ್ ಆಫ್ ಪ್ಯಾರಿಸ್ ಹಾಗೂ ಬಣ್ಣ ಲೇಪಿತ ವಿಗ್ರಹಗಳನ್ನು ಯಾವುದೇ ನದಿ, ಕಾಲುವೆ, ಬಾವಿ ಹಾಗೂ ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ಸಹಾ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಗೌರಿ ಹಾಗೂ ಗಣೇಶ ಹಬ್ಬದ ಸಂದರ್ಭದಲ್ಲಿ ರಾಸಾಯನಿಕ ಬಣ್ಣಗಳಿಂದ ಮಾಡಿದ ಮೂರ್ತಿಗಳ ಬದಲಾಗಿ ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವೈಜ್ಞಾನಿಕ ರೀತಿಯಲ್ಲಿ ವಿಸರ್ಜಿಸಬೇಕು. ವಿಸರ್ಜನೆ ಸಂದರ್ಭದಲ್ಲಿ ಹಸಿಕಸ (ಹೂವು, ಹಣ್ಣು, ಬಾಳೆಕಂಬ, ಮಾನ ತೋರಣ ಇತ್ಯಾದಿ) ಹಾಗೂ ಒಣಕಸವನ್ನು ನೀರಿಗೆ ಎಸಯದೆ ಪ್ರತ್ಯೇಕವಾಗಿ ವಿಂಗಡಿಸಿ, ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು ಎಂದು ಪ್ರಕಟಣೆ ತಿಳಿಸಿದೆ.

ಸಾರ್ವಜನಿಕವಾಗಿ ಇಡುವ ಗಣೇಶ ವಿಗ್ರಹಗಳನ್ನು, ಪ್ರತಿ ಸಮಿತಿಯವರು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೋಲೀಸ್ ಇಲಾಖೆಯಿಂದ ನಿಬಂಧನೆಗೊಳಪಟ್ಟ ಅನುಮತಿಗಳನ್ನು ಪಡೆದ ನಂತರವೇ ಸ್ಥಾಪಿಸಬೇಕು. ಗಣೇಶೋತ್ಸವ ಸಂದರ್ಭದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಉಪಯೋಗಿಸುವುದನ್ನು, ರಾತ್ರಿ 10ರಿಂದ ಬೆಳಗ್ಗೆ 6 ಗಂಟೆಯ ತನಕ ಧ್ವನಿವರ್ಧಕಗಳ ಬಳಕೆಯನ್ನು ಹಾಗೂ ಗಣೇಶ ವಿಗ್ರಹಗಳ ವಿಸರ್ಜನೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳ ಹೊರತಾಗಿ ಇತರೆ ಯಾವುದೇ ಪಟಾಕಿಗಳನ್ನು ಸುಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಪರಿಸರ ಮತ್ತು ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಈ ಪ್ರಕಟಣೆಯನ್ನು ನೀಡಲಾಗಿದೆ. ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಜಿಲ್ಲೆಯ ನಾಗರಿಕರು ಸಹಕರಿಸುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X