ಸ್ಕೂಟಿಗೆ ಅಡ್ಡ ಬಂದ ನಾಯಿ: ಸಾಮಾಜಿಕ ಕಾರ್ಯಕರ್ತ ಮೃತ್ಯು

ಪಡುಬಿದ್ರಿ, ಆ.23: ಹೆಜಮಾಡಿ ಗ್ರಾಮದ ಥೀಮ್ ಪ್ಯಾಲೇಸ್ ಹಾಲ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಾಯಿಯೊಂದು ಸ್ಕೂಟಿಗೆ ಅಡ್ಡ ಬಂದ ಪರಿಣಾಮ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡ ಸಾಮಾಜಿಕ ಕಾರ್ಯಕರ್ತ ಉಮಾನಾಥ್ ಚಿಕಿತ್ಸೆಗೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಆ.12ರಂದು ಇವರು ಸ್ಕೂಟಿಯಲ್ಲಿ ಹೋಗುತ್ತಿರುವಾಗ ನಾಯಿಯೊಂದು ಏಕಾಏಕಿಯಾಗಿ ಅಡ್ಡ ಬಂತ್ತೆನ್ನಲಾಗಿದೆ. ಇದರ ಪರಿಣಾಮ ಸ್ಕೂಟಿ ಪಲ್ಟಿಯಾಗಿ ಉಮಾನಾಥ ಗಂಭೀರವಾಗಿ ಗಾಯಗೊಂಡಿದ್ದರು. ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇವರು, ಚಿಕಿತ್ಸೆಗೆ ಸ್ಪಂದಿಸದೆ ಆ.23ರಂದು ಬೆಳಗ್ಗೆ ಮೃತಪಟ್ಟರೆಂದು ತಿಳಿದುಬಂದಿದೆ.
ಸುಜ್ಞಾನ್ ಕಾಲೋನಿಯ ನಿವಾಸಿಯಾಗಿರುವ ಉಮನಾಥ್ ದಲಿತ ಮುಖಂಡರಾಗಿದ್ದು, ಕಾಂಗ್ರೆಸ್ ಪಕ್ಷ ಸಹಿತ ವಿವಿಧ ಸಾಮಾಜಿಕ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





