ಚೌತಿ: ಬೆಂಗಳೂರು- ಮಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು

ಮಂಗಳೂರು, ಆ.23: ಗಣೇಶ ಚತುರ್ಥಿ ಹಬ್ಬದ ಸಮಯದಲ್ಲಿ ಮಂಗಳೂರು-ಬೆಂಗಳೂರು ನಡುವೆ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡಲು ನೈಋತ್ಯ ರೈಲ್ವೆ ನಾಲ್ಕು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ ಸೌಲಭ್ಯವನ್ನು ಕಲ್ಪಿಸಿದೆ.
ಯಶವಂತಪುರ ಜಂಕ್ಷನ್ - ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ವಿಶೇಷ ರೈಲು (ರೈಲು ಸಂಖ್ಯೆ 06251 ) ಆ. 25ರಂದು ರಾತ್ರಿ 11: 55 ಕ್ಕೆ ಯಶವಂತಪುರ ಜಂಕ್ಷನ್‌ನಿಂದ ಹೊರಟು ಮರುದಿನ ಪೂರ್ವಾಹ್ನ 11:45ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ.
ಮಂಗಳೂರು ಸೆಂಟ್ರಲ್ - ಯಶವಂತಪುರ ಜಂಕ್ಷನ್ ಎಕ್ಸ್‌ಪ್ರೆಸ್ ವಿಶೇಷ ರೈಲು (ರೈಲು ಸಂಖ್ಯೆ 06252 ) ಆ. 26ರಂದು ಮಧ್ಯಾಹ್ನ 1 ಗಂಟೆಗೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಅದೇ ದಿನ ರಾತ್ರಿ 10:40 ಕ್ಕೆ ಯಶವಂತಪುರ ಜಂಕ್ಷನ್ ತಲುಪಲಿದೆ.
ಕೋಚ್ ಸಂಯೋಜನೆ: 1- ಎಸಿ ಟು ಟೈರ್ ಕೋಚ್, 2- ಎಸಿ ತ್ರೀ ಟೈರ್ ಕೋಚ್‌ಗಳು, 12- ಸ್ಲೀಪರ್ ಕ್ಲಾಸ್ ಕೋಚ್‌ಗಳು, 5- ಜನರಲ್ ಸೆಕೆಂಡ್ ಕ್ಲಾಸ್ ಕೋಚ್‌ಗಳು, 2- ಸೆಕೆಂಡ್ ಕ್ಲಾಸ್ ಕೋಚ್‌ಗಳು
ಯಶವಂತಪುರ ಜಂಕ್ಷನ್ - ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ವಿಶೇಷ ರೈಲು(ರೈಲು ಸಂಖ್ಯೆ 06253 ) ಆ.26ರಂದು ರಾತ್ರಿ 11:55 ಕ್ಕೆ ಯಶವಂತಪುರ ಜಂಕ್ಷನ್‌ನಿಂದ ಹೊರಟು ಆ.27 ಪೂವಾಹ್ನ 11:45 ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ.
ಮಂಗಳೂರು ಸೆಂಟ್ರಲ್ - ಯಶವಂತಪುರ ಜಂಕ್ಷನ್ ಎಕ್ಸ್‌ಪ್ರೆಸ್ ವಿಶೇಷ ರೈಲು(ರೈಲು ಸಂಖ್ಯೆ 06254 ) ಆ. 27 ಮಧ್ಯಾಹ್ನ 2:15 ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಅದೇ ದಿನ ರಾತ್ರಿ 11:30 ಕ್ಕೆ ಯಶವಂತಪುರ ಜಂಕ್ಷನ್ ತಲುಪಲಿದೆ.
ಕೋಚ್ ಸಂಯೋಜನೆ: 1- ಎಸಿ ಟು ಟೈಯರ್ ಕೋಚ್, 2- ಎಸಿ ತ್ರೀ ಟೈಯರ್ ಕೋಚ್‌ಗಳು, 12- ಸ್ಲೀಪರ್ ಕ್ಲಾಸ್ ಕೋಚ್‌ಗಳು, 5- ಜನರಲ್ ಸೆಕೆಂಡ್ ಕ್ಲಾಸ್ ಕೋಚ್‌ಗಳು, 2- ಸೆಕೆಂಡ್ ಕ್ಲಾಸ್ ಕೋಚ್‌ಗಳು ಎಂದು ಪ್ರಕಟಣೆ ತಿಳಿಸಿದೆ.







