Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ನಗರಸಭೆಯಲ್ಲಿ ಇ-ಕಚೇರಿ ತಂತ್ರಾಂಶ...

ಉಡುಪಿ ನಗರಸಭೆಯಲ್ಲಿ ಇ-ಕಚೇರಿ ತಂತ್ರಾಂಶ ಅನುಷ್ಠಾನ

ವಾರ್ತಾಭಾರತಿವಾರ್ತಾಭಾರತಿ24 Aug 2025 8:38 PM IST
share
ಉಡುಪಿ ನಗರಸಭೆಯಲ್ಲಿ ಇ-ಕಚೇರಿ ತಂತ್ರಾಂಶ ಅನುಷ್ಠಾನ
► ಇ-ತಂತ್ರಾಂಶ ಮೂಲಕ ಕಡತಗಳ ನಿರ್ವಹಣೆ ► ಅರ್ಜಿ ವಿಲೇವಾರಿಯಲ್ಲಿ ಪಾರದರ್ಶಕತೆ

ಉಡುಪಿ, ಆ.24: ಅರ್ಜಿ ವಿಲೇವಾರಿಯಲ್ಲಿ ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಉಡುಪಿ ನಗರಸಭೆಯಲ್ಲಿ ಇ-ಆಫೀಸ್(ಇ-ಕಚೇರಿ) ತಂತ್ರಾಂಶವನ್ನು ಅಳವಡಿಸಲಾಗಿದೆ. ಇದರಿಂದ ಕಡತಗಳ ನಿರ್ವಹಣೆ ಹಾಗೂ ವಿಲೇವಾರಿ ಆನ್‌ಲೈನ್ ಮೂಲಕವೇ ನಡೆಯಲಿದ್ದು, ಸಾರ್ವಜನಿಕರಿಗೆ ಉತ್ತಮ ಸೇವೆ ದೊರೆಯಲಿದೆ.

ರಾಜ್ಯ ಸರಕಾರ 2019-20ನೇ ಸಾಲಿನ ಆಯವ್ಯಯದಲ್ಲಿ ಎಲ್ಲಾ ಸರಕಾರಿ ಕಚೇರಿಗಳಲ್ಲಿ ಇ-ಆಫೀಸ್ ತಂತ್ರಾಂಶ ಕಡ್ಡಾಯಗೊಳಿಸಲಾಗುವುದು ಎಂಬುದಾಗಿ ಘೋಷಿಸಿತ್ತು. ಅದರ ಭಾಗವಾಗಿ ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ಕಚೇರಿಗಳು, ವಿವಿಧ ಇಲಾಖೆಯಲ್ಲಿ ಈಗಾಗಲೇ ಇ-ಕಚೇರಿ ತಂತ್ರಾಂಶವನ್ನು ಅಳವಡಿಸಿಕೊಳ್ಳಲಾಗಿದೆ.

ಪ್ರಸ್ತುತ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಈ ಸಾಪ್ಟ್‌ವೇರ್ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದ್ದು, ಉಡುಪಿ ನಗರಸಭೆಯಲ್ಲಿ ತಾಂತ್ರಶವನ್ನು ಅಳವಡಿಸಿ ಆ.21ರಿಂದ ಅನುಷ್ಟಾನಕ್ಕೆ ತರಲಾಗಿದೆ. ಇದೀಗ ಈ ಯೋಜನೆ ಜಾರಿಯಾಗುವುದರಿಂದ ನಗರಸಭೆಯ ಸಿಬ್ಬಂದಿ ಕಾರ್ಯಕ್ಷಮತೆ ಹೆಚ್ಚಲಿದೆ.

ಕಡತಗಳ ಪರಿಶೀಲನೆ ಸುಲಭ

ಭಾರತ ಸರಕಾರದ ಇ-ಆಡಳಿತ ಯೋಜನೆಯಡಿಯಲ್ಲಿ ಕಚೇರಿ ಕೆಲಸವನ್ನು ಡಿಜಿಟಲೀಕರಣಗೊಳಿಸಲು ರಾಷ್ಟ್ರೀಯ ವಾಹಿತಿ ಕೇಂದ್ರ (ಎನ್‌ಐಸಿ) ಇ-ಆಫೀಸ್ ಅಭಿವದ್ಧಿಪಡಿಸಿದೆ.

ಕರ್ನಾಟಕದಲ್ಲಿ ಇ-ಆಡಳಿತ ಕೇಂದ್ರವು ಇದರ ಅನುಷ್ಠಾನದ ಮೇಲ್ವಿಚಾರಣೆ ನಡೆಸಲಿದ್ದು, ಇದರಿಂದ ನಾಗರಿಕರಿಗೆ ಸರಕಾರಿ ಸೇವೆಗಳನ್ನು ಟ್ರ್ಯಾಕ್ ವಾಡಲು ಅನುಕೂಲವಾಗಲಿದೆ. ಇದರಲ್ಲಿ ಸಿಬ್ಬಂದಿಗೆ ಹೊಣೆಗಾರಿಕೆ ವಹಿಸುವ ಮೂಲಕ ಆಡಳಿತದಲ್ಲಿ ಪಾರದರ್ಶಕತೆಗೆ ಒತ್ತು ನೀಡಲಾಗುತ್ತದೆ.

ಆನ್‌ಲೈನ್ ಸೇವೆ ಹೊರತು ಪಡಿಸಿ ಉಳಿದ ಸೇವೆಗಳ ಭೌತಿಕ ಕಡತ ನಿರ್ವಹಣೆ ಇ-ತಂತ್ರಾಂಶ ಮೂಲಕ ನಡೆಯ ಲಿದ್ದು, ಪೌರಾಯುಕ್ತರಿಗೆ ಸೂಪರ್ ಮಾನಿಟರಿಂಗ್ ಮಾಡಲು ಸುಲಭವಾಗಲಿದೆ. ಯಾವ ಕಡತ ಯಾರ ಬಳಿ ಬಾಕಿ ಉಳಿದಿದೆ ಎಂಬುದನ್ನು ಕ್ಷಣಾರ್ಧದಲ್ಲಿ ತಿಳಿಯಬಹುದು. ಯಾಕಾಗಿ ಬಾಕಿ ಉಳಿದಿದೆ ಎಂಬ ಮಾಹಿತಿಯನ್ನು ಪಡೆದು ಕೊಳ್ಳಬಹುದು. ಇದರಿಂದ ಸಾರ್ವಜನಿಕರು ತಮ್ಮ ಅರ್ಜಿಗಳ ಸ್ಥಿತಿಗತಿಗಳ ವಿವರವನ್ನು ಸುಲಭದಲ್ಲಿ ತಿಳಿದು ಕೊಳ್ಳಬಹುದು. ಜೊತೆಗೆ ಕಡತ ಅಥವಾ ದಾಖಲೆಗಳು ಕಳೆದುಹೋಗಿವೆ ಎಂಬ ದೂರುಗಳಿಗೆ ಅವಕಾಶವಿರುವುದಿಲ್ಲ.

ತಿಂಗಳಿಗೆ ಸರಾಸರಿ 2000 ಅರ್ಜಿಗಳು

ಉಡುಪಿ ನಗರಸಭೆಗೆ ಸರಕಾರ ಆನ್‌ಲೈನ್ ಸೇವೆ ಹೊರತು ಪಡಿಸಿ ಭೌತಿಕವಾಗಿ ತಿಂಗಳಿಗೆ ಎರಡೂವರೆ ಸಾವಿರಕ್ಕಿಂತ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾಗುತ್ತಿವೆ.

ಮೇ ತಿಂಗಳಲ್ಲಿ ಖಾತಾ ವರ್ಗಾವಣೆ, ಇ-ಖಾತೆ, ಮಾಹಿತಿ ಹಕ್ಕು, ಆರೋಗ್ಯ ವಿಭಾಗ, ಸರ್ಕಾರಿ ಕಚೇರಿಗಳ ಅರ್ಜಿ, ಶಾಸಕರು ಹಾಗೂ ಅಧ್ಯಕ್ಷರಿಂದ 2,307 ಅರ್ಜಿಗಳು, ಜೂನ್ ತಿಂಗಳಲ್ಲಿ 2,497 ಅರ್ಜಿಗಳು, ಜುಲೈನಲ್ಲಿ 16ರವರೆಗೆ 1,103 ಅರ್ಜಿಗಳು ಬಂದಿವೆ.

ವಾರ್ಷಿಕವಾಗಿ 25 ಸಾವಿರಕ್ಕಿಂತ ಹೆಚ್ಚಿನ ಕಡತಗಳ ನಿರ್ವಹಣೆಯೇ ನಗರಸಭಾ ಆಡಳಿತಕ್ಕೆ ಸವಾಲಿನ ಸಂಗತಿಯಾಗಿತ್ತು. ಆದರೆ ಇ-ತಂತ್ರಾಂಶದಿಂದಾಗಿ ಕಡತಗಳನ್ನು ಜೋಪಾನವಾಗಿಟ್ಟುಕೊಳ್ಳುವ ತಲೆಬಿಸಿಯೂ ದೂರವಾಗಲಿದೆ.

‘ಉಡುಪಿ ನಗರಸಭೆಯಲ್ಲಿ ಇ-ಆಫೀಸ್‌ಗೆ ಸಂಬಂಧಿಸಿದ ಎಲ್ಲ ರೀತಿಯ ಸಂಪನ್ಮೂಲಗಳು ಲಭ್ಯ ಇವೆ. ಈಗಾಗಲೇ ತಂತ್ರಾಂಶವನ್ನು ಅಳವಡಿಸಿ ಪ್ರಾಯೋಗಿಕವಾಗಿ ಇ-ಆಫೀಸ್ ವ್ಯವಸ್ಥೆಯನ್ನು ಅನುಷ್ಠಾನಕ್ಕೆ ತರಲಾಗಿದೆ. ಈ ಕುರಿತು 2 ದಿನ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ಎಲ್ಲಾ ಕಡತಗಳ ನಿರ್ವಹಣೆ ಹಾಗೂ ವಿಲೇವಾರಿ ಆನ್‌ಲೈನ್ ಮೂಲಕವೇ ಮಾಡಲಾಗುವುದು’

-ಮಹಂತೇಶ್ ಹಂಗರೇಗಿ, ಪೌರಾಯುಕ್ತರು, ಉಡುಪಿ ನಗರಸಭೆ

‘ಉಡುಪಿ ನಗರಸಭೆಯು ಇ-ಆಫೀಸ್ ತಂತ್ರಾಂಶ ಅಳವಡಿಕೆಯಿಂದಾಗಿ ಕಡತಗಳು ಸಂಪೂರ್ಣವಾಗಿ ಪೇಪರ್ ಮುಕ್ತವಾಗಿ ಕಾರ್ಯನಿರ್ವಹಿಸಲಿದೆ. ಅರ್ಜಿದಾರರು ತಮ್ಮ ಅರ್ಜಿಯಲ್ಲಿ ಮೊಬೈಲ್ ನಂಬರ್ ಜೊತೆಗೆ ಇ ಮೈಲ್ ಐಡಿ ಕಡ್ಡಾಯವಾಗಿ ನಮೂದಿಸಬೇಕು. ಆಗ ಕಡತ ಸಂಖ್ಯೆ ನಿರ್ವಹಣೆ ಸುಲಭವಾಗುತ್ತದೆ. ಈ ನೂತನ ಸೌಲಭ್ಯವನ್ನು ಸಾರ್ವಜನಿಕರು ಬಳಸಿ ಕೊಳ್ಳಬೇಕು’

-ಪ್ರಭಾಕರ ಪೂಜಾರಿ, ಅಧ್ಯಕ್ಷರು, ನಗರಸಭೆ ಉಡುಪಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X