ರೈಲು ಢಿಕ್ಕಿ ಹೊಡೆದು ವ್ಯಕ್ತಿ ಮೃತ್ಯು

ಕುಂದಾಪುರ, ಆ.25: ಚಲಿಸುತ್ತಿದ್ದ ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮೂಡ್ಲಕಟ್ಟೆ ರೈಲು ನಿಲ್ದಾಣದ ಸಮೀಪ ಆ.25ರಂದು ನಸುಕಿನ ವೇಳೆ ನಡೆದಿದೆ.
ಮಡಗಾಂವ್- ಎರ್ನಾಕುಲಂ ಎಕ್ಸ್‌ಪ್ರೆಸ್ ರೈಲು ಮೂಡ್ಲಕಟ್ಟೆ ರೈಲು ನಿಲ್ದಾಣದಲ್ಲಿ ಹಾದು ಹೋಗುತ್ತಿರುವ ವೇಳೆ ಓರ್ವ ವ್ಯಕ್ತಿ ರೈಲು ಹಳಿ ದಾಟಲು ಪ್ರಯತ್ನಿಸಿದ್ದು, ಈ ಸಂದರ್ಭ ಚಲಿಸುವ ರೈಲು ಅವರಿಗೆ ಢಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





