ಬ್ರಹ್ಮಾವರ: ನೈಸರ್ಗಿಕ ಕೃಷಿ ತರಬೇತಿ ಸಮಾರೋಪ

ಉಡುಪಿ, ಆ.25: ಜಿಲ್ಲಾ ಪಂಚಾಯತ್ ಉಡುಪಿ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಹಾಗೂ ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರಗಳ ಸಂಯುಕ್ತ ಆಶ್ರಯದಲ್ಲಿ ಕೃಷಿ ಜೀವನೋಪಾಯ ಸಮುದಾಯ ಸಂಪ ನ್ಮೂಲ ವ್ಯಕ್ತಿಗಳಾದ ಕೃಷಿ ಸಖಿಯರಿಗೆ 6 ದಿನಗಳ ಕಾಲ ನಡೆದ ನೈಸರ್ಗಿಕ ಕೃಷಿ ತರಬೇತಿಯ ಸಮಾರೋಪ ಸಮಾರಂಭ ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆಯಿತು.
ಸಂಜೀವಿನಿ ಯೋಜನೆಯ ಜಿಲ್ಲಾ ವ್ಯವಸ್ಥಾಪಕ ಅವಿನಾಶ್ ಕೃಷಿ ಸಖಿ ಯರಿಗೆ ಪ್ರಮಾಣ ಪತ್ರ ವಿತರಿಸಿ ಮಾತ ನಾಡಿ, ಜಿಲ್ಲೆಯಲ್ಲಿ ಕೃಷಿ ಚಟುವಟಿಕೆ ಯನ್ನು ಅಭಿವೃದ್ಧಿ ಪಡಿಸಲು ಹಾಗೂ ಕೃಷಿ ಕ್ಷೇತ್ರಕ್ಕೆ ಸಂಬಂಧಪಟ್ಟ ಸೇವೆಗಳನ್ನು ನೀಡಲು ಕೃಷಿ ಸಖಿಯರನ್ನು ಪ್ರತಿ ಗ್ರಾಮ ಪಂಚಾಯತ್‌ನಲ್ಲಿ ನಿಯೋಜನೆ ಮಾಡಲಾಗಿದೆ ಎಂದರು.
ಕೃಷಿ ವಿಜ್ಞಾನ ಕೇಂದ್ರದ ಅನುಭವಿ ಹಾಗೂ ಹಿರಿಯ ಕೃಷಿ ವಿಜ್ಞಾನಿಗಳಿಂದ ನೈಸರ್ಗಿಕ ಕೃಷಿ ಬಗ್ಗೆ ತರಬೇತಿ ನೀಡಲಾ ಗಿದ್ದು, ತರಬೇತಿ ಪಡೆದ ಕೃಷಿ ಸಖಿಯರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೃಷಿ ಸಮುದಾಯದ ಸಂಪನ್ಮೂಲ ವ್ಯಕ್ತಿಗಳಂತೆ ಕರ್ತವ್ಯ ನಿರ್ವಹಿಸಬೇಕು. ಕೃಷಿಗೆ ಸಂಬಂಧಪಟ್ಟ ಯೋಜನೆ, ಕಾರ್ಯಕ್ರಮ, ತರಬೇತಿ, ಸೌಲಭ್ಯ ಗಳನ್ನು ಆದ್ಯತೆಯಲ್ಲಿ ರೈತರಿಗೆ ತಲುಪಿಸಲು ಆಸಕ್ತಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.
ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ.ನವೀನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬ್ರಹ್ಮಾವರ ಕೃಷಿ ಡಿಪ್ಲೊಮಾ ಮಹಾ ವಿದ್ಯಾಲಯದ ಪ್ರಾಂಶುಪಾಲ ಡಾ.ಸುಧೀರ್ ಕಾಮತ್ ಕೆ., ಗೃಹ ವಿಜ್ಞಾನ ಪದವೀಧರೆ ವೀಣಾ ಶ್ಯಾನುಭಾಗ್, ವಿಜ್ಞಾನಿ ಡಾ. ಸದಾನಂ ಆಚಾರ್ಯ, ಸಂಜೀವಿನಿ ಯೋಜನೆಯ ಯುವ ವೃತ್ತಿಪರ ರಂಜಿತಾ ಮುಂತಾದವರು ಉಪಸ್ಥಿತರಿದ್ದರು.







