ಮಾಜಿ ಸೈನಿಕರ ಮಕ್ಕಳಿಗೆ ನಗದು ಪ್ರಶಸ್ತಿ: ಅರ್ಜಿ ಆಹ್ವಾನ

ಉಡುಪಿ, ಆ.25: ಜಿಲ್ಲೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಗರಿಷ್ಠ ಅಂಕ ಪಡೆದ ಕರ್ನಾಟಕದ ಮೂಲನಿವಾಸಿ ಮಾಜಿ ಸೈನಿಕರ ಮಕ್ಕಳಿಂದ ಜನರಲ್ ಕೆ.ಎಸ್ ತಿಮ್ಮಯ್ಯ ನಗದು ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ನವೆಂಬರ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಕಚೇರಿಯನ್ನು ಸಂಪರ್ಕಿಸಬಹುದು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.
ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ: ಅರ್ಜಿ ಆಹ್ವಾನ
ಉಡುಪಿ ಜಿಲ್ಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಒಂದನೇ ತರಗತಿಯಿಂದ ಅಂತಿಮ ಪದವಿ / ಡಿಪ್ಲೋಮಾ ಮತ್ತು ವೃತ್ತಿಪರ ಪದವಿಯವರೆಗೆ ರಾಜ್ಯದಲ್ಲಿರುವ ಹಾಗೂ ಸರಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ರಾಜ್ಯದ ಮೂಲನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಂದ ಶಿಷ್ಯವೇತನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ/ ಡಿಪ್ಲೋಮಾ ವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅಕ್ಟೋಬರ್ 15ರ ಒಳಗೆ ಹಾಗೂ ವೃತ್ತಿಪರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ನವೆಂಬರ್ 15ರ ಒಳಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಕಚೇರಿಯನ್ನು ಸಂಪರ್ಕಿಸಬಹುದು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.







