ಧರ್ಮಸ್ಥಳದಲ್ಲಿ ಸಮಾವೇಶ; ಉಡುಪಿಯಲ್ಲಿ ಸಮಾಲೋಚನಾ ಸಭೆ

ಉಡುಪಿ: ಧರ್ಮಸ್ಥಳದಲ್ಲಿ ನಡೆಯುತ್ತಿರುವ ಘಟನೆಗಳ ಕುರಿತಂತೆ ಸೆ.5ರಂದು ಧರ್ಮಸ್ಥಳದಲ್ಲಿ ನಡೆಸಲುದ್ದೇಶಿಸಿ ರುವ ಬೃಹತ್ ಸಮಾವೇಶದ ಬಗ್ಗೆ ಸಮಾಲೋಚನಾ ಸಭೆಯೊಂದು ಇಂದು ಉಡುಪಿಯಲ್ಲಿ ನಡೆಯಿತು.
ಮೂಡಬಿದರೆ ಆಳ್ವಾಸ್ ಸಂಸ್ಥೆಯ ಮುಖ್ಯಸ್ಥ ಡಾ.ಮೋಹನ ಆಳ್ವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿವಿಧ ಧಾರ್ಮಿಕ ಕ್ಷೇತ್ರಗಳ ಮುಖಂಡರು ಭಾಗವಹಿಸಿದ್ದರು.
ಸಭೆಯಲ್ಲಿ ವಿವಿಧ ಧಾರ್ಮಿಕ ಕ್ಷೇತ್ರಗಳ ಮುಖಂಡರೊಂದಿಗೆ ಉಡುಪಿಯ ಶಾಸಕ ಯಶಪಾಲ್ ಸುವರ್ಣ, ಕಾಪು ಕ್ಷೇತ್ರದ ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಸಹಿತ ಹಲವು ಜನಪ್ರತಿನಿಧಿಗಳು ಹಾಜರಿದ್ದರು.
ಸಭೆಯಲ್ಲಿ ಕೃಷ್ಣಮಠವನ್ನು ಪ್ರತಿನಿಧಿಸಿದ ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.
Next Story





