Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ...

ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕ್ಷೀಣಿಸಲು ಸರಕಾರಗಳೇ ಹೊಣೆ: ಅಬ್ದುಲ್ ಸಲಾಂ ಚಿತ್ತೂರು

ವಾರ್ತಾಭಾರತಿವಾರ್ತಾಭಾರತಿ29 Aug 2025 8:00 PM IST
share
ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕ್ಷೀಣಿಸಲು ಸರಕಾರಗಳೇ ಹೊಣೆ:   ಅಬ್ದುಲ್ ಸಲಾಂ ಚಿತ್ತೂರು
ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಕುಂದಾಪುರ, ಆ.29: ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಯಾಗಲು ಮೂಲಸೌಕರ್ಯ, ಶಿಕ್ಷಕರ ಕೊರತೆ ಕಾರಣವಾಗಿದ್ದು ಇದಕ್ಕೆ ಆಳುವ ಸರಕಾರಗಳೇ ನೇರ ಹೊಣೆಯಾಗಿದೆ. ಸರಕಾರಿ ಶಾಲೆಗಳನ್ನು ಉಳಿಸಿ-ಬೆಳೆಸುವ ಜೊತೆಗೆ ಎಸ್‌ಡಿಎಂಸಿ ಸಬಲೀಕರಣ, ಶಿಕ್ಷಕರ ಸಮಸ್ಯೆಗಳನ್ನು ನೀಗಿಸುವ ನಿಟ್ಟಿನಲ್ಲಿ ರಾಜಕೀಯ, ಜಾತಿ-ಧರ್ಮ ರಹಿತವಾಗಿ ಹಗಲಿರುಳು ಕೆಲಸ ಮಾಡುತ್ತಿದೆ ಎಂದು ಎಸ್‌ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಅಬ್ದುಲ್ ಸಲಾಂ ಚಿತ್ತೂರು ಹೇಳಿದ್ದಾರೆ.

ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ಕೇಂದ್ರ ವೇದಿಕೆ ಉಡುಪಿ ಜಿಲ್ಲಾ ಘಟಕ, ಶಿವಪ್ರಸಾದ್ ಗ್ರಾಂಡ್ ಕುಂದಾಪುರ ಸಹೋಗದೊಂದಿಗೆ ಮಗು ಮತ್ತು ಕಾನೂನು ಕೇಂದ್ರ, ನ್ಯಾಶನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿ ಬೆಂಗಳೂರು ಸುಗಮಕಾರರಾಗಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಏರ್ಪಡಿಸಲಾದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಶುಕ್ರವಾರ ಇಲ್ಲಿನ ಶಿವಪ್ರಸಾದ್ ಗ್ರ್ಯಾಂಡ್ ಹೋಟೆಲ್ ಸಭಾಂಗಣದಲ್ಲಿ ಬಹುಮಾನ ವಿತರಿಸಿ ಅವರು ಮಾತನಾಡುತಿದ್ದರು.

ಸರಕಾರಿ ಶಾಲೆಗಳ ಮೂಲಕ ಮಕ್ಕಳಲ್ಲಿ ಸಂಸ್ಕೃತಿ-ಸಂಸ್ಕಾರ ಹೆಚ್ಚಿಸುವ ಕೆಲಸವಾಗುತ್ತಿದೆ. ಆರೋಗ್ಯ ಹಾಗೂ ಶಿಕ್ಷಣ ಉಚಿತವಾಗಿ ಸಿಕ್ಕರೆ ನೆಮ್ಮದಿ ಜೀವನ ಸಾಧ್ಯ. ಅಕ್ಷರ ಜ್ಞಾನ ನೀಡಿದ ಸರಕಾರಿ ಶಾಲೆಗಳ ಅಭ್ಯುದಯಕ್ಕೆ ಅಲ್ಲಿನ ಹಳೆ ವಿದ್ಯಾರ್ಥಿಗಳ ಒಗ್ಗೂಡುವಿಕೆಯೂ ಅಗತ್ಯವಾಗಿದ್ದು ಕಾನೂನು ಬದ್ಧವಾಗಿ ಹಳೆ ವಿದ್ಯಾರ್ಥಿ ಸಂಘ ರಚಿಸಿ ಅದಕ್ಕೆ ಆ ಶಾಲೆ ಮುಖ್ಯೋಪಾಧ್ಯಾಯರು ಕಾರ್ಯದರ್ಶಿಯಾಗಿ ನೇಮಿಸುವಂತೆ ಸರಕಾರಕ್ಕೆ ಮನವಿ ಸಲ್ಲಿಸಲಾಗುತ್ತದೆ ಎಂದರು.

ಕಾರ್ಯಕ್ರಮವನ್ನು ಕೋಟೇಶ್ವರ ಗೀತಾ ಎಚ್‌ಎಸ್‌ಎನ್ ಫೌಂಡೇಶನ್‌ನ ಅಧ್ಯಕ್ಷ, ಎಸ್‌ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ ಉಡುಪಿ ಜಿಲ್ಲಾ ಘಟಕದ ಮಹಾ ಪೋಷಕ ಶಂಕರ್ ಐತಾಳ್ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಶಾಲೆ ಅಭಿವೃದ್ಧಿ ಮಾಡುವ ಸೇವಾ ಕೈಂಕರ್ಯ ತೃಪ್ತಿ ನೀಡುತ್ತದೆ. ಹೀಗಾಗಿ ಅಮಾಸೆಬೈಲು ಸರಕಾರಿ ಶಾಲೆಯನ್ನು ಅಭಿವೃದ್ಧಿಗೊಳಿಸಲಾಗಿದ್ದು ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ ಎಂದರು.

ಎಸ್‌ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ ಕುಂದಾಪುರ ತಾಲೂಕು ಘಟಕದ ಅಧ್ಯಕ್ಷ ಎಸ್.ವಿ.ನಾಗರಾಜ ಮಾತನಾಡಿ, ಸರಕಾರಿ ಶಾಲೆಗಳ ಉಳಿವು-ಬೆಳವಣಿಗೆ ದೃಷ್ಟಿಯಿಂದ, ಎಸ್‌ಡಿಎಂಸಿ ಹಕ್ಕು, ಕರ್ತವ್ಯಗಳನ್ನು ಜಾಗೃತಿಗೊಳಿಸಿ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಲು ಮನದಟ್ಟು ಮಾಡುವ ಸಲುವಾಗಿ ಸಮನ್ವಯ ವೇದಿಕೆ 2013ರಲ್ಲಿ ಆರಂಭಗೊಂಡಿದ್ದು ಕಟ್ಟಕಡೆಯ ಮಗು ಕೂಡ ಗುಣಮಟ್ಟದ ಶಿಕ್ಷಣ ಪಡೆಯಲು ಇಲಾಖೆಗಳ ಮಾರ್ಗ ದರ್ಶನ, ಸಹಯೋಗದಲ್ಲಿ ಸಮನ್ವಯ ವೇದಿಕೆ ರಾಜಕೀಯ ರಹಿತ, ಸ್ವಹಿತಾಸಕ್ತಿ ರಹಿತ, ಜಾತಿ ರಹಿತ ಸಂಘಟನೆಯಾಗಿ ಸರ್ವಧರ್ಮದ ದೇಗುಲಗಳಾದ ಸರಕಾರಿ ಶಾಲೆಗಳ ಪರವಾಗಿ ಕೆಲಸ ಮಾಡುತ್ತಿದೆ ಎಂದರು.

ಈ ಸಂದರ್ಭದಲ್ಲಿ ವಿಜೇತ ಮಕ್ಕಳಿಗೆ ಪ್ರಮಾಣಪತ್ರ ಹಾಗೂ ನಗದು ಬಹುಮಾನ ನೀಡಲಾಯಿತು. ಕುಂದಾಪುರ ಪುರಸಭಾ ಸದಸ್ಯ ಅಬು ಮೊಹಮ್ಮದ್ ಮುಜಾವರ್, ಎಸ್‌ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ ಕರ್ನಾಟಕ ರಾಜ್ಯ ಸಂಚಾಲಕ ಮೊಯಿದಿನ್ ಕುಟ್ಟಿ, ಸಂಘಟನೆಯ ಪುರಸಭಾ ಘಟಕದ ಅಧ್ಯಕ್ಷ ಅಶ್ವಥ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

ಎಸ್‌ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ ಜಿಲ್ಲಾ ಕಾರ್ಯದರ್ಶಿ ದೀಪಾ ಜಪ್ತಿ ಕಾರ್ಯಕ್ರಮ ನಿರೂಪಿಸಿದರು. ಕುಂದಾಪುರ ತಾಲೂಕು ಘಟಕದ ಕಾರ್ಯದರ್ಶಿ ಪ್ರಮೋದಾ ಕುಶಲ್ ಶೆಟ್ಟಿ ಸ್ವಾಗತಿಸಿದರು. ಪುರಸಭಾ ಘಟಕದ ಕಾರ್ಯದರ್ಶಿ ವರದಾ ಸುಧಾರ್ಕ ಆಚಾರ್ಯ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X