‘ಕಾರ್ಬನ್ ಸೀಕ್ವೆಸ್ಟ್ರೇಶನ್’ ಬಗ್ಗೆ ಉಪನ್ಯಾಸ ಕಾರ್ಯಕ್ರಮ

ಉಡುಪಿ, ಆ.30: ಉಡುಪಿ ಎಂ.ಜಿ.ಎಂ ಕಾಲೇಜಿನ ಸಸ್ಯಶಾಸ್ತ್ರ ಹಾಗೂ ಐಕ್ಯೂಎಸಿ ವತಿಯಿಂದ ’ಕಾರ್ಬನ್ ಸೀಕ್ವೆಸ್ಟ್ರೇಶನ್’ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಮಾಹೆಯ ಪರಿಸರ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ವಿವೇಕ್ ಪಾಂಡಿ, ‘ಕಾರ್ಬನ್ ಸೀಕ್ವೆಸ್ಟ್ರೇಶನ್’ ವಿಷಯದಲ್ಲಿ ಮುಂದೆ ಬರುವ ಇಂಟರ್ನ್‌ಶಿಪ್ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾಲೇಜಿನ ಪ್ರಾಂಶುಪಾಲೆ ಪ್ರೊ.ವನಿತಾ ಮಯ್ಯ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ಡಾ.ವಿಶ್ವನಾಥ್ ಪೈ, ಐಕ್ಯೂಎಸಿ ಸಂಯೋಜಕಿ ಪ್ರೊ.ಶೈಲಜಾ, ಸಸ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ ಡಾ.ಗಾಯತ್ರಿ ಪೈ, ಪ್ರೊ.ಶ್ರುತಿ ನಾಯಕ್, ಪ್ರೊ.ಸೊಹಾನಿ ಭಟ್ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಕ್ರಿಶ್ಚಿನ ಸ್ವಾಗತಿಸಿದರು. ರೇಷ್ಮಾ ವಂದಿಸಿದರು. ಸಿಂಚನಾ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ಭೂಮಿಕಾ ಪಂಡಿತ್ ಕಾರ್ಯಕ್ರಮ ನಿರೂಪಿಸಿದರು.
Next Story





