ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

ಕೊಲ್ಲೂರು: ಅನಾರೋಗ್ಯದಿಂದ ಬಳಲುತ್ತಿದ್ದ ಜಡ್ಕಲ್ ಗ್ರಾಮದ ಭಾಸ್ಕರ(70) ಎಂಬವರು ಸೆ.2ರಂದು ಸಂಜೆ ವೇಳೆ ಮನೆ ಸಮೀಪದ ಹಾಡಿಯ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ: ಅನಾರೋಗ್ಯದಿಂದ ಬಳಲುತ್ತಿದ್ದ ಕೋಡಿ ರಾಮ ಮಂದಿರದ ಹತ್ತಿರ ನಿವಾಸಿ ಮಿಣ್ಕು (56) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಸೆ.4ರಂದು ಬೆಳಗ್ಗೆ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





