ಶಿರ್ವ| ಪಾಪನಾಶಿನಿ ಹೊಳೆಯಲ್ಲಿ ಅಕ್ರಮ ಮರಳುಗಾರಿಕೆ; ಪೊಲೀಸರ ದಾಳಿ; ಮರಳು, ಹಿಟಾಚಿ ವಶ

ಶಿರ್ವ, ಸೆ.10: ಕಾಪು ತಾಲೂಕಿನ ಶಿರ್ವ ಗ್ರಾಮದ ಗರಡಿ ಮನೆ ಎಂಬಲ್ಲಿ ಪಾಪನಾಶಿನಿ ಹೊಳೆಯ ಸರಕಾರಿ ಜಾಗದಲ್ಲಿ ಹಿಟಾಚಿ ಸಹಾಯದಿಂದ ಅಕ್ರಮವಾಗಿ ಮರಳುಗಾರಿಕೆ ನಡೆಸುತಿದ್ದ ಸ್ಥಳಕ್ಕೆ ಮಂಗಳವಾರ ದಾಳಿ ನಡೆಸಿದ ಶಿರ್ವ ಠಾಣಾ ಪಿಎಸ್‌ಐ ಮಂಜುನಾಥ ಮರಬದ್ರ ನೇತೃತ್ವದ ಪೊಲೀಸ್ ತಂಡ, ಸ್ಥಳದಲ್ಲಿದ್ದ ಸುಮಾರು ಎರಡು ಟಿಪ್ಪರ್ ಮರಳು ಹಾಗೂ ಒಂದು ಹಿಟಾಚಿ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ನಿರ್ದೇಶನದಂತೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ ಎಸ್ ನಾಯ್ಕ್, ಕಾರ್ಕಳ ಸಹಾಯಕ ಪೊಲೀಸ್ ಅಧೀಕ್ಷಕರಾದ ಡಾ. ಹರ್ಷ ಪ್ರಿಯಂವದಾ ಮತ್ತು ಕಾಪು ವೃತ್ತನಿರೀಕ್ಷಕಿ ಜಯಶ್ರೀ ಮಾನೆ ಮಾರ್ಗದರ್ಶನದಲ್ಲಿ ಶಿರ್ವ ಪೊಲೀಸ್‌ರು ಈ ಕಾರ್ಯಾಚರಣೆ ನಡೆಸಿದ್ದರು.
Next Story





