ಯುವನಿಧಿ ಯೋಜನೆಯಡಿ ಕೌಶಲ್ಯ ತರಬೇತಿ

ಉಡುಪಿ : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಯುವನಿಧಿ ಯೋಜನೆಯಡಿ ನೋಂದಾಯಿಸಿಕೊಂಡು ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಫಲಾನುಭವಿಗಳಿಗೆ ಇಂಡಸ್ಟ್ರಿ ಲಿಂಕೇಜ್ ಸೆಲ್ ಅಡಿ ಕೌಶಲ್ಯ ತರಬೇತಿ ಆಯೋಜಿಸಲಾಗಿದೆ.
ನೇರ ನಗದು ವರ್ಗಾವಣೆ ಮೂಲಕ ನಿರಂತರವಾಗಿ ಆರು ತಿಂಗಳು ನಿರುದ್ಯೋಗ ಭತ್ಯೆ ಪಡೆದಿರುವ ಫಲಾನುಭವಿ ಗಳು ಕೌಶಲ್ಯ ತರಬೇತಿ ಮತ್ತು ಉದ್ಯಮಶೀಲತೆ ತರಬೇತಿಯನ್ನು ಪಡೆಯಲು - Kaushalkar Portal: https://www.kaushalkar.com- ನಲ್ಲಿ ನೋಂದಾಯಿಸಿಕೊಳ್ಳಬಹುದು.
ಯುವನಿಧಿ ಯೋಜನೆಯಡಿ ನೋಂದಾಯಿಸಿಕೊಂಡು ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಯುವಕ ಹಾಗೂ ಯುವತಿಯರಿಗೆ ಯುವನಿಧಿ ಪ್ಲಸ್ ಕಾರ್ಯಕ್ರಮದಡಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ಬರುವ ಸರಕಾರಿ ತರಬೇತಿ ಸಂಸ್ಥೆಗಳಾದ ಐ.ಟಿ.ಐ, ಜಿ.ಟಿ.ಟಿ.ಸಿ, ಕೆ.ಜಿ.ಟಿ.ಟಿ.ಐ ಹಾಗೂ ಸಿಡ್ಹಾಕ್ ಮೂಲಕ ತರಬೇತಿ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ, ಬಿ ಬ್ಲಾಕ್, ಒಂದನೇ ಮಹಡಿ, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574204 ಅನ್ನು ಸಂಪರ್ಕಿಸ ಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.





