Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಜೂರು ಗ್ರಾಮಸಭೆಯಲ್ಲಿ ನಿರ್ವಸಿತ...

ಮಜೂರು ಗ್ರಾಮಸಭೆಯಲ್ಲಿ ನಿರ್ವಸಿತ ಕುಟುಂಬಗಳಿಗೆ ಭಾವಾನಾತ್ಮಕ ಬೀಳ್ಕೊಡುಗೆ

ವಾರ್ತಾಭಾರತಿವಾರ್ತಾಭಾರತಿ12 Sept 2025 5:58 PM IST
share
ಮಜೂರು ಗ್ರಾಮಸಭೆಯಲ್ಲಿ ನಿರ್ವಸಿತ ಕುಟುಂಬಗಳಿಗೆ ಭಾವಾನಾತ್ಮಕ ಬೀಳ್ಕೊಡುಗೆ

ಕಾಪು, ಸೆ.12: ಮಜೂರು ಗ್ರಾಮ ಪಂಚಾಯತ್‌ನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಶುಕ್ರವಾರ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಸಾದ್ ಶೆಟ್ಟಿ ವಳದೂರು ಅಧ್ಯಕ್ಷತೆಯಲ್ಲಿ ಮಜೂರು ಗ್ರಾಪಂ ಸಭಾಭವನದಲ್ಲಿ ನಡೆಯಿತು.

ನೂರಾರು ವರ್ಷಗಳಿಂದ ತನ್ನ ಪೂರ್ವಜರೊಂದಿಗೆ ಹುಟ್ಟಿ ಬೆಳೆದು ಜೀವನ ಸಾಗಿಸುತ್ತಿದ್ದ ಪಾದೂರು ಗ್ರಾಮದ ಸುಮಾರು 50 ಕುಟುಂಬ ಇದೀಗ ಐಎಸ್‌ಪಿಆರ್‌ಐ 2ನೇ ಹಂತದ ಯೋಜನೆಗಾಗಿ ಗ್ರಾಮವನ್ನು ತ್ಯಜಿಸಿ ಬೇರೆ ಕಡೆ ಹೋಗಬೇಕಾಗಿದ್ದು, ಈ ನಿರ್ವಸಿತ ಕುಟುಂಬದವರಿಗೆ ಗ್ರಾಪಂನಿಂದ ಭಾವಾನಾತ್ಮಕ ಬೀಳ್ಕೊಡಲಾಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಕಾಪು ತಾ.ಪಂ. ಸಹಾಯಕ ಲೆಕ್ಕಾಧಿಕಾರಿ ಸುಗುಣ ಗ್ರಾಮ ಸಭೆಯ ಮಹತ್ವದ ಬಗ್ಗೆ ಮಾತನಾಡಿದರು. ಸಮಾಜ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ, ಅರಣ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಪೋಲಿಸ್ ಇಲಾಖೆ, ಮಹಾತ್ಮಾ ಗಾಂಧಿ ನರೇಗಾ ಯೋಜನೆ, ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿ ಬಗ್ಗೆ, ನವಿಲು ಮಂಗಗಳ ಹಾವಳಿ ಬಗ್ಗೆ, 92 ಹೇರೂರು ಗ್ರಾಮದ ಪ್ಲಾಟಿಂಗ್ ಸಮಸ್ಯೆ ಬಗ್ಗೆ, ಪಾದೂರು ಗ್ರಾಮದಲ್ಲಿ ಜಲ್ಲಿ ಕ್ರಷರ್ ನಡೆಸದಂತೆ ಸಭೆಯಲ್ಲಿ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಯಿತು.

ಗ್ರಾಮಸಭೆಯಲ್ಲಿ ನೋಡೆಲ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಪಶು ವೈದ್ಯಾಧಿಕಾರಿ ಡಾ.ಅರುಣ್ ಹೆಗ್ಡೆ, ವರ್ಗಾವಣೆಗೊಂಡಿರುವ ಬಗ್ಗೆ ಮತ್ತು ಪಾದೂರು ಗ್ರಾಮದಲ್ಲಿ ಗ್ರಾಮ ಸಹಾಯಕರಾಗಿ 46 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಲಕ್ಷಣ್ ಶೆಟ್ಟಿಗಾರ್, ಕರಂದಾಡಿ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿಯಾಗಿ 25 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಕುಸುಮ, ಚಂದ್ರನಗರ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿಯಾಗಿ 27 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಪುಷ್ಪ , ಮಜೂರು ಗ್ರಾಪಂ ಅಧಿಕೃತ ವೆಬ್‌ಸೈಟ್ ರಚಿಸಿದ ಅರುಣ್ ಶೆಟ್ಟಿ ಅಂಡೆಮಾರುಗುತ್ತು ಪಾದೂರು ಅವರನ್ನು ಸನ್ಮಾನಿಸಲಾಯಿತು.

ಗ್ರಾಪಂ ಉಪಾಧ್ಯಕ್ಷೆ ಮಂಜುಳಾ ಆಚಾರ್ಯ, ಗ್ರಾಪಂ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಲಾಸಿನಿ, ವಿವಿಧ ಇಲಾಖಾಧಿಕಾರಿ ಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಪ್ರಾಥಮಿಕ ಆರೋಗ್ಯ ಸುರಕ್ಷ ಅಧಿಕಾರಿ, ಸಮುದಾಯ ಆರೋಗ್ಯ ಅಧಿಕಾರಿ, ಸಂಜೀವಿನಿ ಸಂಘದ ಸದಸ್ಯರು, ಪಂಚಾಯತ್ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಗ್ರಾಪಂ ಕಾರ್ಯದರ್ಶಿ ಪ್ರಸಾದ್ ಭಂಡಾರಿ ಕಾರ್ಯಕ್ರಮ ಸ್ವಾಗತಿಸಿ ವಂದಿಸಿದರು. ಆಶಾ ರವೀಂದ್ರ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X