Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್...

ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿವೇತನ ವಿತರಣೆ

ವಾರ್ತಾಭಾರತಿವಾರ್ತಾಭಾರತಿ13 Sept 2025 5:48 PM IST
share
ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿವೇತನ ವಿತರಣೆ

ಕಾರ್ಕಳ: ವಿದ್ಯಾರ್ಥಿ ವೇತನವನ್ನು ನೀಡುತ್ತಿರುವ ದಾನಿಗಳ ಆದರ್ಶವನ್ನು ಮೈಗೂಡಿಸಿಕೊಳ್ಳಿ ಮುಂದೆ ಜೀವನದಲ್ಲಿ ನೀವು ಅವರಂತೆ ಶಿಕ್ಷಣಕ್ಕೆ ನೆರವು ನೀಡುವವರಂತಾಗಿ, ಟ್ರಸ್ಟಿನ ಅಧ್ಯಕ್ಷ ಅವಿನಾಶ್ ಜಿ ಶೆಟ್ಟಿಯವರ ನಿಸ್ವಾರ್ಥ ಸೇವೆಗೆ ಅಭಿನಂದನೆಗಳು ಎಂದು ಶಾಸಕ ಸುನಿಲ್ ಕುಮಾರ್ ಹೇಳಿದರು.

ಅವರು ಸರಕಾರಿ ಪದವಿ ಪೂರ್ವ ಕಾಲೇಜು ಹೆಬ್ರಿ ಇಲ್ಲಿ "ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್" ವತಿಯಿಂದ ಎಸ್.ಕೆ.ಎಸ್. ಇನ್ ಫ್ರಾ ಕಾರ್ಕಳ ಇವರ ಸಹಕಾರದೊಂದಿಗೆ ಹತ್ತನೇ ತರಗತಿ ಹಾಗೂ ಪಿಯುಸಿಯಲ್ಲಿ 90 ಶೇಕಡಾಕ್ಕಿಂತ ಹೆಚ್ಚು ಅಂಕ ಗಳಿಸಿರುವ ಹೆಬ್ರಿ ಪರಿಸರದ ಸರಕಾರಿ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಎಸ್.ಆರ್. ವಿದ್ಯಾಸಂಸ್ಥೆ ಹೆಬ್ರಿ ಇದರ ಅಧ್ಯಕ್ಷ ನಾಗರಾಜ ಶೆಟ್ಟಿ ಮಾತನಾಡುತ್ತಾ ಕಷ್ಟಪಟ್ಟು ಕಲಿತ ಶಿಕ್ಷಣವು ನಮಗೆ ಅನೇಕ ಪಾಠಗಳನ್ನು ಕಲಿಸುತ್ತದೆ. ಸರಕಾರಿ ಶಾಲೆಗಳಲ್ಲಿ ಸಿಗುವ ಉತ್ತಮ ಶಿಕ್ಷಣವನ್ನು ಸದುಪಯೋಗಪಡಿ ಸಿಕೊಂಡು ಸಂಸ್ಕಾರಯುತ ನಾಗರಿಕರಾಗಿ ಎಂದು ಶುಭ ಹಾರೈಸಿದರು.

ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಸಹ ಸಂಸ್ಥಾಪಕ ಅಶ್ವತ್ ಎಸ್ ಎಲ್ ಮಾತನಾಡುತ್ತಾ ತನ್ನ ಗಳಿಕೆಯ ದೊಡ್ಡ ಮೊತ್ತ ವನ್ನು ಹಾಗೂ ತನ್ನ ಆತ್ಮೀಯರ ಸಹಕಾರವನ್ನು ಪಡೆದುಕೊಂಡು ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ನೀಡುತ್ತಿರು ವುದು ಪ್ರಶಂಶನೀಯ ಇದು ಇತರರಿಗೂ ಆದರ್ಶವಾಗಲಿ ಎಂದರು.

ಇದೇ ಸಂದರ್ಭದಲ್ಲಿ ಮೂರು ಶಾಲೆಗಳ ಮೂಲಭೂತ ಸೌಕರ್ಯಗಳಿಗಾಗಿ ಧನ ಸಹಾಯ ನೀಡಲಾಯಿತು ಹಾಗೂ 7 ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸಕ್ಕಾಗಿ ಆರ್ಥಿಕ ಸಹಕಾರ ಮಾಡಲಾಯಿತು.

ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ವಿಜೇಂದ್ರ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಯುವ ಉದ್ಯಮಿ ಲಕ್ಷ್ಮೀನಾರಾಯಣ ನಾಯಕ್,ಹೆಬ್ರಿ ಗ್ರಾಮ ಪಂಚಾಯತ್ ಅಧ್ಯಕ್ಷ ತಾರಾನಾಥ ಬಂಗೇರಾ, ಶಾಲಾ ಪೂರ್ವ ವಿದ್ಯಾರ್ಥಿ ಹಾಗೂ ದಾನಿ ರಾಜೇಶ್ ನಾಯಕ್, ನಿವೃತ್ತ ಪ್ರಾಂಶುಪಾಲ ಉಮೇಶ್ ಎ.ಡಿ., ಪ್ರಾಂಶುಪಾಲ ವಿಜಯಕುಮಾರ್, ಉಪ ಪ್ರಾಂಶುಪಾಲ ದಿವಾಕರ್ ಮರಕಲ ಹಾಗೂ ಟ್ರಸ್ಟಿನ ಅಧ್ಯಕ್ಷ ಅವಿನಾಶ್ ಜಿ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು.

ಇಂಚರ ಮತ್ತು ತಂಡದವರು ಪ್ರಾರ್ಥಿಸಿದರು. ಎಲ್ಲರನ್ನು ಸ್ವಾಗತಿಸಿದ ಟ್ರಸ್ಟಿನ ಮಾರ್ಗದರ್ಶಕ ವಸಂತ್ ಎಂ. ಕಾರ್ಯಕ್ರಮ ನಿರೂಪಿಸಿ ವಂದಿಸಿದರು.







share
ವಾರ್ತಾಭಾರತಿ
ವಾರ್ತಾಭಾರತಿ
Next Story
X