ಡ್ರಗ್ಸ್ ಮಾರಾಟ ಪ್ರಕರಣ: ಓರ್ವ ಆರೋಪಿಯ ಬಂಧನ

ಮಣಿಪಾಲ, ಸೆ.15: ಸ್ಕೂಟರ್‌ನಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಮಣಿಪಾಲ ಪೊಲೀಸರು ಮಣಿಪಾಲದ ವಿದ್ಯಾರತ್ನ ನಗರದ ಜಿಲ್ಲಾಧಿಕಾರಿ ಕಚೇರಿ ರಸ್ತೆಯ ನಂದಿನಿ ಮಿಲ್ಕ್ ಪಾರ್ಲರ್ ಬಳಿ ಸೆ.15ರಂದು ಬೆಳಗ್ಗೆ 9.20ರ ಸುಮಾರಿಗೆ ಬಂಧಿಸಿದ್ದಾರೆ.
ಕಾಪು ತಾಲೂಕಿನ ಬೆಳಪು ಗ್ರಾಮದ ವಿಜಯ ನಗರ ನಿವಾಸಿ ಅರ್ಫಾನ್(26) ಬಂಧಿತ ಆರೋಪಿ. ಈತನಿಂದ 13,000 ರೂ. ಮೌಲ್ಯದ 6.61 ಗ್ರಾಂ ಮಾದಕ ವಸ್ತು ಎಂಡಿಎಂಎ, ಕೃತ್ಯಕ್ಕೆ ಬಳಸಿದ ಸ್ಕೂಟರ್, 60 ಸಾವಿರ ರೂ. ಮೌಲ್ಯದ ಎರಡು ಮೊಬೈಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





