Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬೈಂದೂರು ಪ.ಪಂ. ವ್ಯಾಪ್ತಿಗೆ ಗ್ರಾಮೀಣ...

ಬೈಂದೂರು ಪ.ಪಂ. ವ್ಯಾಪ್ತಿಗೆ ಗ್ರಾಮೀಣ ಪ್ರದೇಶ ಸೇರ್ಪಡೆ ವಿರೋಧಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ19 Sept 2025 6:02 PM IST
share
ಬೈಂದೂರು ಪ.ಪಂ. ವ್ಯಾಪ್ತಿಗೆ ಗ್ರಾಮೀಣ ಪ್ರದೇಶ ಸೇರ್ಪಡೆ ವಿರೋಧಿಸಿ ಪ್ರತಿಭಟನೆ
ರಸ್ತೆಯಲ್ಲಿಯೇ ಕುಳಿತು ಧರಣಿ: ಹಡಿ ಮಂಚಕ್ಕೆ ಭತ್ತದ ತೆನೆ ಬಡಿದು ಆಕ್ರೋಶ

ಉಡುಪಿ, ಸೆ.17: ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಗ್ರಾಮೀಣ ಭಾಗಗಳನ್ನು ಅವೈಜ್ಞಾನಿಕವಾಗಿ ಸೇರಿಸಿ ರುವುದನ್ನು ವಿರೋಧಿಸಿ ಬೈಂದೂರು ತಾಲೂಕು ರೈತ ಸಂಘದ ನೇತೃತ್ವದಲ್ಲಿ ಗ್ರಾಮಸ್ಥರು ಶುಕ್ರವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

ಮಣಿಪಾಲದ ಕಾಯಿನ್ ಸರ್ಕಲ್‌ನಿಂದ ಮೆರವಣಿಗೆಯಲ್ಲಿ ಆಗಮಿಸಿದ ಸಹಸ್ರಾರು ಸಂಖ್ಯೆಯ ರೈತರು, ಜಿಲ್ಲಾಧಿಕಾರಿ ಕಚೇರಿ ಎದುರಿನ ರಸ್ತೆಯಲ್ಲಿ ಕುಳಿತು ಶಾಲನ್ನು ತಿರುಗಿಸುತ್ತ ಘೋಷಣೆಗಳನ್ನು ಕೂಗಿದರು. ಕೆಲವರು ರಸ್ತೆಯಲ್ಲಿಯೇ ಮಲಗಿ ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರಿನ ಗೇಟಿನ ಮುಂದೆ ಹಡಿ ಮಂಚ ದಲ್ಲಿ ಭತ್ತದ ತೆನೆಯನ್ನು ಬಡಿದು ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದರು. ರೈತರು ತಮ್ಮ ಕೈಯಲ್ಲಿ ನೊಗವನ್ನು ಪ್ರದರ್ಶಿಸಿದರು. ಗೇಟನ್ನು ತೆರೆಯು ವಂತೆ ಪಟ್ಟು ಹಿಡಿದ ಪ್ರತಿಭಟನಕಾರರನ್ನು ಪೊಲೀಸರು ತಡೆದರು.

ಮಧ್ಯಾಹ್ನದವರೆಗೆ ಪ್ರತಿಭಟನೆ ನಡೆಸಿದ ರೈತರು, ಬಳಿಕ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರಿಗೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಡಿಸಿ, ಈ ಸಂಬಂಧ ಪ್ರತ್ಯೇಕ ಸಮಿತಿ ರಚಿಸಿ ಪುನರ್ ಪರಿಶೀಲನೆ ನಡೆಸಿ ವರದಿಯನ್ನು ಸರಕಾರಕ್ಕೆ ಸಲ್ಲಿಸಲಾಗುವುದು ಎಂದರು. ಪ್ರತಿಭಟನ ಕಾರರು ಸ್ಥಳದಲ್ಲಿ ಗಂಜಿ, ಚಟ್ನಿಯ ಅಡುಗೆ ತಯಾರಿಸಿ ಸೇವಿಸಿದರು.

ಪಕ್ಷದ ಸಭೆಯಲ್ಲಿ ಭಾಗವಹಿಸಲ್ಲ: ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಬೈಂದೂರು ತಾಲೂಕು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಪಟ್ಟಣ ಪಂಚಾಯತ್ ವ್ಯಾಪ್ತಿಯ ಗ್ರಾಮೀಣ ಭಾಗಗಳನ್ನು ಕೈಬಿಡುವಂತೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಜಿಲ್ಲಾಧಿಕಾರಿಗಳು 11 ವಾರ್ಡ್‌ಗಳಿರುವ ಹೊಸ ಬೈಂದೂರು ಪಟ್ಟಣ ಪಂಚಾಯತ್ ಪ್ರಸ್ತಾಪವನ್ನು ಸರಕಾರಕ್ಕೆ ಸಲ್ಲಿಸಿದ್ದಾರೆ ಎಂದರು.

ಈ ಪ್ರಸ್ತಾಪವನ್ನು ಜಾರಿಗೊಳಿಸಬೇಕು ಮತ್ತು ಉಳಿದ ಗ್ರಾಮೀಣ ಭಾಗಗಳನ್ನು ಕೈಬಿಟ್ಟು ಅವುಗಳನ್ನು ಗ್ರಾಮ ಪಂಚಾಯತ್‌ಗಳಾಗಿ ಘೋಷಿಸ ಬೇಕು. ಅಲ್ಲಿಯವರೆಗೆ ನಾವು ಯಾವುದೇ ರಾಜಕೀಯ ಪಕ್ಷಗಳ ಸಭೆಯಲ್ಲಿ ಭಾಗವಹಿಸುವುದಿಲ್ಲ. ಅದಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಅವರು ತಿಳಿಸಿದರು.

ಕೆಲವರು ನಮ್ಮ ಹೋರಾಟವನ್ನು ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿ ದ್ದಾರೆ. ಅದಕ್ಕಾಗಿ ಕೆಲವರಿಗೆ ವಿವಿಧ ಆಮಿಷಗಳನ್ನು ಒಡ್ಡುತ್ತಿದ್ದಾರೆ. ಇದು ಯಾವುದಕ್ಕೂ ನಾವು ಬಗ್ಗುವುದಿಲ್ಲ. ನಮ್ಮ ಹೋರಾಟ ಇನ್ನಷ್ಟು ತೀವ್ರಗೊಳಿ ಸಲು ಸೆ.22ರಿಂದ ಬೈಂದೂರಿನಲ್ಲಿ ಅಹೋರಾತ್ರಿ ಅನಿಧಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಸಂಘದ ಮುಖಂಡರಾದ ಅರುಣ್ ಕುಮಾರ್ ಶಿರೂರು, ವೀರಭದ್ರ ಗಾಣಿಗ, ಮ್ಯಾಥ್ಯು, ಕೃಷ್ಣ ದೇವಾಡಿಗ, ಸುಭಾಷ್ ಗಂಗನಾಡು, ನಾಗರಾಜ ಮರಾಠೆ ಮೊದಲಾದವರು ಉಪಸ್ಥಿತರಿದ್ದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X