ಸಾಮಾಜಿಕ ಮತ್ತು ಶೈಕ್ಷಣಿಕೆ ಸಮೀಕ್ಷೆಗೆ ಸಹಕರಿಸಲು ಮನವಿ
ಉಡುಪಿ, ಸೆ.19: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ, ಮಾಹಿತಿ ಸಂಗ್ರಹಿಸಲು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಲಾಗುತ್ತಿದ್ದು, ಸಮೀಕ್ಷೆಯು ಸೆ.22ರಿಂದ ಅ. 7 ರವರೆಗೆ ನಡೆಯಲಿದೆ.
ಸಮೀಕ್ಷೆ ಸಂದರ್ಭದಲ್ಲಿ ಗಣತಿದಾರರು ಮನೆ-ಮನೆಗೆ ಭೇಟಿ ನೀಡಿ ಮಾಹಿತಿಗಳನ್ನು ಸಂಗ್ರಹಿಸಲಿದ್ದಾರೆ. ಈ ಸಮೀಕ್ಷೆಗೆ ರೇಷನ್ ಕಾರ್ಡ್, ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಮತ್ತು ಆಧಾರ್ ಸಂಖ್ಯೆಗೆ ಲಿಂಕ್ ಇರುವ ಮೊಬೈಲ್ ಸಂಖ್ಯೆ (ಆಧಾರ್ ಕಾರ್ಡ್‌ಗೆ ಮೊಬೈಲ್ ನಂಬರ್ ಲಿಂಕ್ ಇಲ್ಲದಿದ್ದರೆ ಇಂದೇ ಸಮೀಪದ ಆಧಾರ್ ಕೇಂದ್ರಕ್ಕೆ ಅಥವಾ ಹತ್ತಿರದ ಅಂಚೆ ಕಛೇರಿಗೆ ಭೇಟಿ ನೀಡಿ ಆಧಾರ್ ಕಾರ್ಡ್‌ಗೆ ಮೊಬೈಲ್ ಸಂಖ್ಯೆ ಲಿಂಕ್ ಮಾಡಿಸಿಕೊಳ್ಳಬೇಕು), ಚುನಾವಣಾ ಗುರುತಿನ ಚೀಟಿ ಹಾಗೂ ವಿಕಲಚೇತನರಾಗಿದ್ದರೆ ಯು.ಐ.ಡಿ ಕಾರ್ಡ್ ಅಥವಾ ಅಂಗವಿಕಲ ಪ್ರಮಾಣ ಪತ್ರ ಅವಶ್ಯಕತೆ ಇದೆ.
ಎಲ್ಲಾ ಸಾರ್ವಜನಿಕರು ತಮ್ಮ ಕುಟುಂಬದ ಸದಸ್ಯರ ಮೇಲ್ಕಂಡ ದಾಖಲೆಗಳನ್ನು ತೆಗೆದಿರಿಸಿಕೊಂಡು ಸಮೀಕ್ಷೆಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಗಳ ಕಚೇರಿ ಪ್ರಕಟಣೆ ತಿಳಿಸಿದೆ.





