ಆನ್ಲೈನ್ ಬೆಟ್ಟಿಂಗ್ ಪ್ರಕರಣ: ಓರ್ವನ ಬಂಧನ

ಉಡುಪಿ: ಆನ್‌ಲೈನ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದಲ್ಲಿ ಓರ್ವನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ಗಂಜಿಮಠ ನಿವಾಸಿ ನಜೀರ್ (45) ಬಂಧಿತ ಆರೋಪಿ. ಈತ ವೆಬ್‌ಸೈಟ್ ಲಿಂಕ್ ಮತ್ತು ಆ್ಯಪ್ ಬಳಸಿ ಆನ್ಲೈನ್ ಬೆಟ್ಟಿಂಗ್ ಆಡುತ್ತಿರುವುದು ಕಂಡುಬಂದಿದೆ. ಆತನ ಬಳಿ ಇದ್ದ 30,000ರೂ. ನಗದನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





