Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಶೈಕ್ಷಣಿಕವಾಗಿ ಮಾತ್ರವಲ್ಲ,...

ಶೈಕ್ಷಣಿಕವಾಗಿ ಮಾತ್ರವಲ್ಲ, ಕೌಶಲ್ಯಾಧಾರಿತ ಉದ್ಯೋಗದಲ್ಲೂ ಉಡುಪಿ ಜಿಲ್ಲೆ ರಾಜ್ಯಕ್ಕೆ ಮಾದರಿಯಾಗಲಿ: ಕಾಂತಾ ನಾಯಕ್

ವಾರ್ತಾಭಾರತಿವಾರ್ತಾಭಾರತಿ20 Sept 2025 7:28 PM IST
share
ಶೈಕ್ಷಣಿಕವಾಗಿ ಮಾತ್ರವಲ್ಲ, ಕೌಶಲ್ಯಾಧಾರಿತ ಉದ್ಯೋಗದಲ್ಲೂ ಉಡುಪಿ ಜಿಲ್ಲೆ ರಾಜ್ಯಕ್ಕೆ ಮಾದರಿಯಾಗಲಿ: ಕಾಂತಾ ನಾಯಕ್
ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರ ಪ್ರವಾಸ

ಉಡುಪಿ: ಶೈಕ್ಷಣಿಕವಾಗಿ ರಾಜ್ಯದಲ್ಲೇ ಮುಂಚೂಣಿಯಲ್ಲಿರುವ ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು, ಕೌಶಲ್ಯಾಧಾರಿತ ಉದ್ಯೋಗ ಪಡೆಯು ವಲ್ಲಿ ಹಾಗೂ ಮತ್ತು ಉದ್ಯಮಶೀಲತೆಯಲ್ಲೂ ಗಮನಾರ್ಹ ಸಾಧನೆ ಮಾಡಿ ರಾಜ್ಯಕ್ಕೇ ಮಾದರಿಯಾಗಬೇಕು ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ್ ಹೇಳಿದ್ದಾರೆ.

ಎರಡು ದಿನಗಳ ಉಡುಪಿ ಜಿಲ್ಲಾ ಪ್ರವಾಸಕ್ಕಾಗಿ ಇಂದು ಉಡುಪಿಗೆ ಆಗಮಿಸಿದ ಕಾಂತಾ ನಾಯಕ್, ಮಣಿಪಾಲದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆದ ಕೌಶಲ್ಯಾಭಿವೃದ್ಧಿ ನಿಗಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತಿದ್ದರು.

ಶಾಲಾ ಹಂತದಲ್ಲೇ ಮಕ್ಕಳಲ್ಲಿ ಅದರಲ್ಲೂ ವಿಶೇಷವಾಗಿ ಹೆಣ್ಣು ಮಕ್ಕಳಲ್ಲಿ ಕೌಶಲ್ಯಾಧಾರಿತ ಹಾಗೂ ಉದ್ಯಮಶೀಲ ತೆಯನ್ನು ಬೆಳೆಸುವಂತಹ ತರಬೇತಿ ನೀಡುವಲ್ಲಿ ಜಿಲ್ಲೆಯ ಎಲ್ಲಾ ವಿದ್ಯಾಸಂಸ್ಥೆಗಳು ಮತ್ತು ಐಟಿಐಗಳು ಮುತುವರ್ಜಿ ವಹಿಸಬೇಕು. ಜಿಲ್ಲೆಯಿಂದ ಹೆಚ್ಚಿನ ವಿದ್ಯಾರ್ಥಿಗಳಿಗೆ ದೇಶ- ವಿದೇಶಗಳ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ದೊರಕಿಸಿಕೊಡುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದವರು ಸಲಹೆ ನೀಡಿದರು.

ಯುವನಿಧಿ ಯೋಜನೆಯಡಿ 3962 ಅಭ್ಯರ್ಥಿಗಳು ಜಿಲ್ಲೆಯಲ್ಲಿ ನೋಂದಣಿಯಾಗಿದ್ದು ಇವರಲ್ಲಿ 3088 ಅಭ್ಯರ್ಥಿಗಳು ಈ ಯೋಜನೆಯ ಫಲಾನುಭವಿಗಳಾಗಿದ್ದು, ಈ ಸಂಖ್ಯೆಯನ್ನು ಹೆಚ್ಚಿಸಬೇಕು. ಅಲ್ಲದೇ ಯುವನಿಧಿ ಪ್ಲಸ್ ಕಾರ್ಯ ಕ್ರಮದಡಿ 65 ಯುವನಿಧಿ ಫಲಾನುಭವಿಗಳಿಗೆ ತರಬೇತಿ ನೀಡಲಾಗಿದ್ದು ಜಿಲ್ಲೆಯಲ್ಲಿರುವ ವಿದ್ಯಾರ್ಥಿಗಳ ಸಂಖ್ಯೆಗೆ ಹೋಲಿಸಿ ದಲ್ಲಿ ಈ ಸಂಖ್ಯೆ ಬಹಳ ಕಡಿಮೆ ಇದ್ದು ಇದನ್ನು ಹೆಚ್ಚಿಸುವಂತೆ ಕೆಜಿಟಿಟಿಐ, ಜೆಟಿಟಿಸಿ ಮತ್ತು ಸಿಡ್ಹಾಕ್ ಸಂಸ್ಥೆಗಳಿಗೆ ಅವರು ಸೂಚನೆಗಳನ್ನು ನೀಡಿದರು.

ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ ಯುವಜನರ ಕೌಶಲ್ಯಾಭಿವೃದ್ದಿಯನ್ನು ಸುಧಾರಿಸುವ ಉದ್ದೇಶದಿಂದ ಇದನ್ನು ಜಾರಿಗೆ ತಂದಿದ್ದು, ವಿದ್ಯಾರ್ಥಿಗಳ ಉದ್ಯೋಗ ಅರ್ಹತೆಯನ್ನು ಹೆಚ್ಚಿಸುವುದು, ಉತ್ತಮ ವೃತ್ತಿ ಅವಕಾಶಗಳನ್ನು ಸೃಷ್ಟಿಸಲು ಅಗತ್ಯ ಕೌಶಲ್ಯಗಳ ತರಬೇತಿ ನೀಡುವುದು ಇದರ ಉದ್ದೇಶವಾಗಿದೆ. ಇದರ ಜೊತೆಯಲ್ಲಿ ‘ನನ್ನ ವೃತ್ತಿ ನನ್ನ ಆಯ್ಕೆ’ ಯೋಜನೆಯಡಿ ಪುಸ್ತಕಗಳನ್ನು ಶಾಲೆ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ನೀಡುವುದರೊಂದಿಗೆ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಉದ್ಯೋಗ ಹಾಗೂ ಇತರ ಕ್ಷೇತ್ರಗಳನ್ನು ಆಯ್ಕೆ ಮಾಡಲು ಮಾರ್ಗದರ್ಶನ ನೀಡಲಾಗುತ್ತಿದೆ ಎಂದರು.

ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಭಾಗವಹಿಸಿ: 2025ರ ವಿಶ್ವಕೌಶಲ್ಯ ಸ್ಪರ್ಧೆಯು ಚೀನಾದ ಶಾಂಘೈನಲ್ಲಿ ನಡೆಯಲಿದ್ದು, ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಅರಿವು ಮೂಡಿಸುವ ಕಾರ್ಯ ಗಳನ್ನು ಶಾಲಾ ಕಾಲೇಜುಗಳಲ್ಲಿ ಹಮ್ಮಿಕೊಳ್ಳಬೇಕು ಎಂದು ಕಾಂತಿ ನಾಯಕ್ ಹೇಳಿದರು.

ರಾಜ್ಯ ಸರಕಾರ ನಡೆಸುವ ಕರ್ನಾಟಕ ಸ್ಕಿಲ್ಸ್‌ನಲ್ಲಿ ಮೆಡಲ್ ಆಫ್ ಎಕ್ಸಲೆಂಸ್ ಪ್ರಶಸ್ತಿ ವಿಜೇತರಿಗೆ ರಾಜ್ಯ ಸರಕಾರದ ವತಿಯಿಂದ 5 ಲಕ್ಷ ನಗದು ಬಹುಮಾನ ಹಾಗೂ ಇಂಡಿಯಾ ಸ್ಕಿಲ್ಸ್‌ನಲ್ಲಿ ಪ್ರಥಮ ಸ್ಥಾನ ಪಡೆದ ವಿಜೇತರಿಗೆ 1 ಲಕ್ಷ ರೂ. ನಗದು ಬಹುಮಾನ ನೀಡಲಾಗುತ್ತದೆ. ಈ ಬಗ್ಗೆ ನಮ್ಮ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಬೇಕು ಎಂದರು.

‘ನಲ್ ಜಲ್ ಮಿತ್ರ’ ಯೋಜನೆಯ ಮೂಲಕ 155 ಗ್ರಾಮ ಪಂಚಾಯತ್ ಗಳಲ್ಲಿ 86 ಪಂಚಾಯತ್‌ಗಳು 144 ಅಭ್ಯರ್ಥಿಗಳಿಗೆ ತರಬೇತಿ ನೀಡಿದ್ದು 135 ಅಭ್ಯರ್ಥಿಗಳಿಗೆ ಟೂಲ್ ಕಿಟ್ ವಿತರಿಸಲಾಗಿದೆ. ಗ್ರಾಮೀಣ ಪ್ರದೇಶದ ಜನರು ಅದರಲ್ಲೂ 35 ವಯಸ್ಸಿನ ಕೆಳಗಿನ ಮಹಿಳೆಯರು ಅಸಾಧಾರಣ ಕೌಶಲ್ಯದ ಭಾಗವಾಗಿ ಪ್ಲಬಿಂಗ್‌ನಂತಹ ಉದ್ಯೋಗಗಳಲ್ಲಿ ಪರಿಣತಿಯನ್ನು ಪಡೆಯುವ ಉದ್ದೇಶದಿಂದ ಯೋಜನೆಯನ್ನು ಆರಂಭಿಸಲಾಗಿದ್ದು ಯೋಜನೆಯು ಸಮರ್ಪಕವಾಗಿ ಅನುಷ್ಠಾನವಾಗುವಂತೆ ಪಂಚಾಯತ್‌ಗಳ ಪಿಡಿಓಗಳು ಕಾರ್ಯನಿರ್ವಹಿಸಬೇಕು ಎಂದರು.

ತಂತ್ರಜ್ಞಾನದಲ್ಲಿ ತರಬೇತಿ: ಜಿಲ್ಲೆಯಲ್ಲಿ ನಶಿಸಿ ಹೋಗುತ್ತಿರುವ ಪ್ರಾದೇಶಿಕ ಪಾರಂಪರಿಕ ಕಲೆಗಳಿದ್ದಲ್ಲಿ ಅವುಗಳಿಗೆ ಪುನಶ್ಚೇತನ ತುಂಬಲು ಅಂತಹ ಕಲೆಗಳನ್ನು ಗುರುತಿಸಿ ಸ್ಥಳೀಯವಾಗಿ ತರಬೇತಿ ನೀಡಬೇಕು. ತಂತ್ರಜ್ಞಾನ ಆಧಾರಿತ ಕೋರ್ಸ್ ಗಳಾದ ಎಐ ತಂತ್ರಜ್ಞಾನ, ಮಶೀನ್ ಲರ್ನಿಂಗ್, ಸೆಮಿಕಂಡಕ್ಟರ್ ಚಿಪ್, ಮರುಬಳಕೆ ಇಂಧನಾಧಾರಿತ ಕ್ಷೇತ್ರಗಳಿಗೆ ಹೆಚ್ಚಿನ ಒತ್ತು ನೀಡಿ ತರಬೇತಿಗಳನ್ನು ರೂಪಿಸಬೇಕು. ಸಿಎನ್‌ಸಿ ಮಶೀನಿಂಗ್ ನಂತಹ ತಾಂತ್ರಿಕ ಕೋರ್ಸ್ ಮಾಡಿದ ಅಭ್ಯರ್ಥಿಗಳಿಗೆ ಬಹು ಬೇಡಿಕೆ ಇದ್ದು ವಿದ್ಯಾರ್ಥಿಗಳು ಈ ಕ್ಷೇತ್ರಗಳಲ್ಲಿ ತರಬೇತಿ ಹೊಂದುವಂತೆ ಅವರ ಮನವೊಲಿಸಬೇಕು ಎಂದರು.

ಜಿಲ್ಲೆಯಲ್ಲಿ ನಡೆಯುವ ಕೌಶಲ್ಯ ರೋಜ್‌ಗಾರ್ ಉದ್ಯೋಗ ಮೇಳಗಳಲ್ಲಿ ಇದುವರೆಗೆ ಎಷ್ಟು ಜನರಿಗೆ ಉದ್ಯೋಗ ದೊರೆತಿದೆ ಎನ್ನುವ ಸ್ಪಷ್ಟ ಮಾಹಿತಿಯನ್ನು ಮುಂದಿನ ಸಭೆಯಲ್ಲಿ ಒದಗಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ ಗದ್ಯಾಳ, ವಿವಿಧ ಇಲಾಖೆಗಳ ಅಧಿಕಾರಿ ಗಳು, ಜಿಲ್ಲಾ ಉದ್ಯೋಗಾಧಿಕಾರಿ, ಐಟಿಐ ಸಂಸ್ಥೆಗಳ ಪ್ರಾಂಶುಪಾಲರು, ಡಿಡಿಪಿಐ, ಡಿಡಿಪಿಯು, ಸಿಡ್ಹಾಕ್ ಅಧಿಕಾರಿಗಳು ಉಪಸ್ಥಿತರಿದ್ದರು.

ವಿದೇಶಗಳಲ್ಲಿ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ

ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಹೊರದೇಶಗಳಲ್ಲಿ ಉನ್ನತ ವಿದ್ಯಾಭ್ಯಾಸ ಮತ್ತು ಉದ್ಯೋಗ ದೊರಕಿಸಿಕೊಡಲು ಅಂತಾರಾಷ್ಟ್ರೀಯ ವಲಸೆ ಕೇಂದ್ರಗಳನ್ನು ತೆರೆಯಲಾಗಿದ್ದು ಉಡುಪಿ ಜಿಲ್ಲೆಯಿಂದ ಹೆಚ್ಚಿನ ವಿದ್ಯಾರ್ಥಿಗಳು ವಿದೇಶ ಗಳಲ್ಲಿ ಉದ್ಯೋಗ ಮಾಡುವಂತಾಗಬೇಕು ಎಂದು ಕಾಂತಾ ನಾಯಕ್ ಹೇಳಿದರು.

ವಿದೇಶದಲ್ಲಿ ಕಲಿಯಿರಿ ಕಾರ್ಯಕ್ರಮದಡಿ ಕಲಿಯುವ ವಿದ್ಯಾರ್ಥಿಗಳಿಗೆ ಕಲಿಕಾ ಶುಲ್ಕದಲ್ಲಿ ಶೇ.50ರಷ್ಟು ರಿಯಾ ಯಿತಿ, ವೀಸಾ ಮತ್ತು ಟಿಕೆಟ್ ವ್ಯವಸ್ಥೆಯನ್ನು ರಾಜ್ಯ ಸರಕಾರದ ವತಿಯಿಂದಲೇ ಮಾಡಿಕೊಡಲಾಗುತ್ತಿದೆ ಎಂದವರು ತಿಳಿಸಿದರು.

‘ಕಳೆದ ಬಾರಿ ಫ್ರಾನ್ಸ್‌ನ ಲಿಯೋನ್‌ನಲ್ಲಿ ನಡೆದ ಡ್ರೋನ್ ಫಿಲ್ಮಿಂಗ್ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ರೋಹನ್ ಕೋಟ್ಯಾನ್ ಚಿನ್ನದ ಪದಕ ಪಡೆದಿದ್ದು, ಈ ಬಾರಿ ಸ್ಪರ್ಧೆಗೆ 313 ಮಂದಿ ಹೆಸರು ನೊಂದಾಯಿಸಿ ಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿ ಗಳು ಹೆಸರು ನೋಂದಾಯಿಸುವಂತೆ ಕಾರ್ಯಕ್ರಮಕ್ಕೆ ಪ್ರಚಾರ ನೀಡಬೇಕು. ದೇಶದಲ್ಲಿ ಕರ್ನಾಟಕವು ಎರಡನೇ ಸ್ಥಾನದಲ್ಲಿದ್ದು ಪ್ರಥಮ ಸ್ಥಾನದಲ್ಲಿರುವ ಓಡಿಸ್ಸಾ ರಾಜ್ಯವನ್ನು ಹಿಂದಿಕ್ಕಬೇಕು.’

- ಕಾಂತಾ ನಾಯಕ್, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ




share
ವಾರ್ತಾಭಾರತಿ
ವಾರ್ತಾಭಾರತಿ
Next Story
X